Home Bibles 1 ಕೊರಿಂಥದವರಿಗೆ 14:26 · ಕನ್ನಡ ಬೈಬಲ್
1 ಕೊರಿಂಥದವರಿಗೆ 14:26 · ಕನ್ನಡ ಬೈಬಲ್

ಹಾಗಾದರೇನು? ಸಹೋದರರೇ, ನೀವು ಕೂಡಿ ಬಂದಾಗ ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಕೀರ್ತನೆಯಾಗಲಿ, ಬೋಧನೆಯಾಗಲಿ, ಭಾಷೆಯಾಗಲಿ, ಪ್ರಕಟನೆಯಾ ಗಲಿ ಭಾಷೆಯ ಅರ್ಥ ಹೇಳುವದಾಗಲಿ ಇರುತ್ತದಷ್ಟೆ. ಎಲ್ಲವುಗಳು ಭಕ್ತವೃದ್ಧಿಗಾಗಿಯೇ ನಡೆಯಲಿ.

Cross references

ರೋಮಾಪುರದವರಿಗೆ 14:19

ಆದದರಿಂದ ನಾವು ಸಮಾಧಾನವನ್ನುಂಟು ಮಾಡುವವುಗಳನೂ ಪರಸ್ಪರ ಭಕ್ತಿವೃದ್ಧಿಯನ್ನುಂಟು ಮಾಡುವವುಗಳನ್ನೂ ಅನುಸರಿಸೋಣ.

1 ಕೊರಿಂಥದವರಿಗೆ 12:7

ಆದರೆ ಪವಿತ್ರಾತ್ಮನ ಪ್ರಕಟನೆಯು ಪ್ರತಿಯೊಬ್ಬನ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿದೆ.

1 ಕೊರಿಂಥದವರಿಗೆ 14:4

ಭಾಷೆಯನ್ನಾಡುವವನು ತನಗೆ ಮಾತ್ರ ಭಕ್ತಿವೃದ್ಧಿಯನ್ನುಂಟು ಮಾಡಿಕೊಳ್ಳುತ್ತಾನೆ. ಪ್ರವಾದಿಸು ವವನಾದರೋ ಸಭೆಗೆ ಭಕ್ತಿವೃದ್ಧಿಯನ್ನುಂಟು ಮಾಡು ತ್ತಾನೆ.

1 ಕೊರಿಂಥದವರಿಗೆ 14:12

ಅದರಂತೆಯೇ ನೀವು ಆತ್ಮಿಕ ವರಗಳಲ್ಲಿ ಆಸಕ್ತಿಯುಳ್ಳವರಾಗಿರುವದರಿಂದ ಸಭೆಯ ಹೆಚ್ಚಿನ ಭಕ್ತಿವೃದ್ಧಿಗಾಗಿ ತವಕಪಡಿರಿ.

1 ಕೊರಿಂಥದವರಿಗೆ 14:27

ಯಾವ ನಾದರೂ ಅನ್ಯಭಾಷೆಯನ್ನಾಡುವದಾದರೆ ಇಬ್ಬರು ಅಥವಾ ಮೂವರಿಗಿಂತ ಹೆಚ್ಚಿಲ್ಲದೆ ಒಬ್ಬೊಬ್ಬರಾಗಿ ಮಾತನಾಡಬೇಕು; ಒಬ್ಬನು ಅರ್ಥವನ್ನು ಹೇಳಲಿ;

1 ಕೊರಿಂಥದವರಿಗೆ 14:40

ಎಲ್ಲವುಗಳು ಮರ್ಯಾದೆಯಿಂದಲೂ ಕ್ರಮವಾಗಿಯೂ ನಡೆಯಲಿ.

2 ಕೊರಿಂಥದವರಿಗೆ 12:19

ನಾವು ತಪ್ಪಿಲ್ಲದವರೆಂದು ನಿಮಗೆ ಹೇಳುತ್ತೇ ವೆಂದು ನೆನಸುತ್ತೀರೋ? ದೇವರ ಸನ್ನಿಧಾನದಲ್ಲಿಯೇ ನಾವು ಕ್ರಿಸ್ತನಲ್ಲಿದ್ದು ಮಾತನಾಡುವವರಾಗಿದ್ದೇವೆ. ಅತಿ ಪ್ರಿಯರೇ, ನಾವು ಮಾಡುವದನ್ನೆಲ್ಲಾ ನಿಮ್ಮ ಭಕ್ತಿವೃದ್ದಿಗೋಸ್ಕರವೇ ಮಾಡುತ್ತೇವೆ.

2 ಕೊರಿಂಥದವರಿಗೆ 13:10

ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ ಈ ಮಾತುಗಳನ್ನು ಬರೆದಿದ್ದೇನೆ; ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಕಟ್ಟುವದಕ್ಕಾಗಿ ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವದಕ್ಕೆ ಅವಕಾಶವಿರ ಬಾರದೆಂದು ಅಪೇಕ್ಷಿಸುತ್ತೇನೆ.

ಎಫೆಸದವರಿಗೆ 4:12

ಆತನು ಕೆಲವರನ್ನು ಅಪೋಸ್ತರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರ ನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು.

ಎಫೆಸದವರಿಗೆ 4:16

ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲು ಗಳಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಪ್ರತಿ ಅಂಗದಿಂದ ಅದರದರ ಶಕ್ತಿಯ ಪ್ರಕಾರ ಸಹಾಯಹೊಂದಿ ಪ್ರೀತಿ ಯಿಂದ ತನ್ನಲ್ಲಿ ಐಕ್ಯವಾಗಿದ್ದು ಭಕ್ತಿವೃದ್ಧಿಯನ್ನು ಹೊಂದುತ್ತದೆ.

ಎಫೆಸದವರಿಗೆ 4:29

ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಆದರೆ ಭಕ್ತಿಯನ್ನು ವೃದ್ಧಿ ಮಾಡುವಂಥ ಒಳ್ಳೆಮಾತು ಇದ್ದರೆ ಕೇಳುವವರ ಹಿತ ಕ್ಕಾಗಿ ಅದನ್ನು ಆಡಿರಿ.

ಎಫೆಸದವರಿಗೆ 5:19

ಕೀರ್ತನೆಗಳಿಂದಲೂ ಸಂಗೀತ ಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮಗೆ ನೀವೇ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯದಲ್ಲಿ ಕರ್ತನಿಗೆ ಗಾನಮಾಡುತ್ತಾ ಇಂಪಾಗಿ ಹಾಡುತ್ತಾ ಇರ್ರಿ.

1 ತೆಸಲೋನಿಕದವರಿಗೆ 5:11

ಆದದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಸಂತೈಸಿ ಕೊಳ್ಳುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರ್ರಿ.

Interlinear

Choose Theme