ಪಕ್ಕದಲ್ಲಿ ಕೂತಿರುವ ಮತ್ತೊಬ್ಬನಿಗೆ ಪ್ರಕಟನೆ ಉಂಟಾದರೆ ಮೊದಲಿನವನು ಸುಮ್ಮನಾಗಲಿ.
Cross references
ಇಗೋ, ನಿಮ್ಮ ಮಾತುಗಳಿಗೋಸ್ಕರ ನಾನು ಎದುರು ನೋಡಿದೆನು; ನೀವು ಏನು ಹೇಳಬೇಕೆಂದು ಹುಡುಕುತ್ತಿದ್ದಾಗ, ನಿಮ್ಮ ವಿವಾದಗಳಿಗೆ ಕಿವಿಗೊಟ್ಟೆನು;
ಅವರು ವಿಸ್ಮಯಗೊಂಡು ಇನ್ನು ಉತ್ತರ ಕೊಡ ಲಿಲ್ಲ; ಅವರು ಮಾತನಾಡುವದನ್ನು ನಿಲ್ಲಿಸಿದರು.
ಓ ಯೋಬನೇ, ಚೆನ್ನಾಗಿ ಗುರುತಿಸು; ನನ್ನ ಮಾತಿಗೆ ಕಿವಿಗೊಡು. ಮೌನವಾಗಿರು, ನಾನು ಮಾತನಾಡು ತ್ತೇನೆ.
ಹೀಗಿರುವದರಿಂದ ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ಪ್ರಕಟ ವಾದದ್ದರಿಂದಾಗಲಿ ಇಲ್ಲವೆ ಜ್ಞಾನದಿಂದಾಗಲಿ ಇಲ್ಲವೆ ಪ್ರವಾದನೆಯಿಂದಾಗಲಿ ಇಲ್ಲವೆ ಬೋಧನೆಯಿಂದಾ ಗಲಿ ಮಾತನಾಡದೆ ಭಾಷೆಗಳಿಂದ ಮಾತ್ರ ಮಾತನಾಡಿ ದರೆ ನನ್ನಿಂದ ನಿಮಗೇನು ಪ್ರಯೋಜನ?
ಹಾಗಾದರೇನು? ಸಹೋದರರೇ, ನೀವು ಕೂಡಿ ಬಂದಾಗ ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಕೀರ್ತನೆಯಾಗಲಿ, ಬೋಧನೆಯಾಗಲಿ, ಭಾಷೆಯಾಗಲಿ, ಪ್ರಕಟನೆಯಾ ಗಲಿ ಭಾಷೆಯ ಅರ್ಥ ಹೇಳುವದಾಗಲಿ ಇರುತ್ತದಷ್ಟೆ. ಎಲ್ಲವುಗಳು ಭಕ್ತವೃದ್ಧಿಗಾಗಿಯೇ ನಡೆಯಲಿ.
ಆತ್ಮನನ್ನು ನಂದಿಸಬೇಡಿರಿ; 20ಪ್ರವಾದನೆಗಳನ್ನು ಹೀನೈಸಬೇಡಿರಿ;