Home Bibles 1 ಕೊರಿಂಥದವರಿಗೆ 14:7 · ಕನ್ನಡ ಬೈಬಲ್
1 ಕೊರಿಂಥದವರಿಗೆ 14:7 · ಕನ್ನಡ ಬೈಬಲ್

ಕೊಳಲು ವೀಣೆ ಮೊದಲಾದ ಅಚೇತನವಾದ್ಯಗಳು ಸ್ವರಗಳಲಿ ಯಾವ ಭೇದವನ್ನೂ ತೋರಿಸದಿದ್ದರೆ ಊದಿದ್ದು ಅಥವಾ ಬಾರಿಸಿದ್ದು ತಿಳಿಯುವದು ಹೇಗೆ?

Cross references

ಅಂಕೆಗಳ ಪುಸ್ತಕ 10:2

ಬೆಳ್ಳಿಯಿಂದ ಎರಡು ತುತೂರಿಗಳನ್ನು ಒಂದೇ ತುಂಡಿನಿಂದ ಮಾಡಿಸಿಕೋ; ಸಭೆಯನ್ನು ಕರೆಯುವದಕ್ಕಾಗಿಯೂ ಪಾಳೆಯಗಳ ಪ್ರಯಾಣಕ್ಕಾ ಗಿಯೂ ನೀನು ಅವುಗಳನ್ನು ಉಪಯೋಗಿಸಬೇಕು.

ಮತ್ತಾಯ 11:17

ನಾವು ನಿಮಗೋಸ್ಕರ ಕೊಳಲೂದಿದೆವು, ಆದರೆ ನೀವು ಕುಣಿಯಲಿಲ್ಲ; ನಾವು ನಿಮಗೋಸ್ಕರ ಶೋಕಿಸಿದೆವು, ಆದರೆ ನೀವು ಗೋಳಾಡಲಿಲ್ಲ ಎಂದು ಹೇಳುವವರಿಗೆ ಇದು ಹೋಲಿಕೆಯಾಗಿದೆ.

ಲೂಕ 7:32

ಅವರು ಸಂತೆ ಯಲ್ಲಿ ಕೂತುಕೊಂಡು ಒಬ್ಬರನ್ನೊಬ್ಬರು ಕರೆ ಯುತ್ತಾ--ನಾವು ನಿಮಗಾಗಿ ಕೊಳಲೂದಿದೆವು, ನೀವು ಕುಣಿಯಲಿಲ್ಲ; ನಾವು ನಿಮಗಾಗಿ ಶೋಕಿಸಿದೆವು, ನೀವು ಅಳಲಿಲ್ಲ ಎಂದು ಹೇಳುವ ಮಕ್ಕಳಿಗೆ ಹೋಲಿಕೆ ಯಾಗಿದ್ದಾರೆ.

1 ಕೊರಿಂಥದವರಿಗೆ 13:1

ನಾನು ಮನುಷ್ಯರ ಮತ್ತು ದೂತರ ಭಾಷೆಗಳನ್ನು ಆಡುವವನಾದರೂ ಪ್ರೀತಿ ಯಿಲ್ಲದವನಾಗಿದ್ದರೆ ನಾದಕೊಡುವ ಕಂಚೂ ಗಣಗಣಿ ಸುವ ತಾಳವೂ ಆಗಿದ್ದೇನೆ.

1 ಕೊರಿಂಥದವರಿಗೆ 14:8

ತುತೂರಿಯು ಗೊತ್ತಿಲ್ಲದ ಶಬ್ದವನ್ನು ಕೊಟ್ಟರೆ ತನ್ನನ್ನು ಯುದ್ಧಕ್ಕೆ ಸಿದ್ಧಮಾಡಿಕೊಳ್ಳುವವನು ಯಾರು?

Interlinear

Choose Theme