ಹೀನಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಮಹಿಮೆಯಲ್ಲಿ ಎಬ್ಬಿಸಲ್ಪಡುತ್ತದೆ; ನಿರ್ಬಲಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಬಲಾವಸ್ಥೆಯಲ್ಲಿ ಎಬ್ಬಿಸಲ್ಪಡುತ್ತದೆ.
Cross references
ಆದರೆ ಮನುಷ್ಯನು ಸತ್ತು ಕ್ಷಯಿಸಿ ಹೋಗುತ್ತಾನೆ; ಮನುಷ್ಯನು ಪ್ರಾಣ ಬಿಟ್ಟ ಬಳಿಕ ಅವನೆಲ್ಲಿರುವನು?
ಆತನು ನನ್ನ ಶಕ್ತಿಯನ್ನು ಮಾರ್ಗದಲ್ಲಿ ಕುಂದಿಸಿ ನನ್ನ ದಿವಸಗಳನ್ನು ಕಡಿಮೆ ಮಾಡಿದನು.
ಆ ಕಾಲದಲ್ಲಿ ನಿನ್ನ ಜನರ ಮಕ್ಕಳಿಗೋಸ್ಕರ ನಿಲ್ಲುವ ಮಹಾಪ್ರಧಾನನಾದ ವಿಾಕಾ ಯೇಲನು ಏಳುವನು; ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನ ವರೆಗೂ ಸಂಭವಿಸದಂತ ಸಂಕಟವು ಸಂಭವಿಸುವದು. ಆಗ ನಿನ್ನ ಜನರೊಳಗೆ ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಹೆಸರು ಬರೆಯಲ್ಪಟ್ಟಿದೆಯೋ ಅವರೆಲ್ಲರೂ ಬಿಡುಗಡೆಯಾಗು ವರು.
ತರುವಾಯ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾಗಲೀ ದೇವರ ಶಕ್ತಿಯನ್ನಾಗಲೀ ತಿಳಿಯದೆ ತಪ್ಪುವವರಾಗಿದ್ದೀರಿ.
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾದರೂ ದೇವರಶಕ್ತಿಯನ್ನಾದರೂ ತಿಳಿಯದೆ ಇರುವದರಿಂದ ತಪ್ಪು ಮಾಡುತ್ತೀರಲ್ಲವೋ?
ದೇವರು ಕರ್ತನನ್ನು ಎಬ್ಬಿಸಿದ್ದಲ್ಲದೆ ತನ್ನ ಸ್ವಂತಬಲದಿಂದ ನಮ್ಮನ್ನೂ ಎಬ್ಬಿಸುವನು.
ಬಲಹೀನತೆಯ ಮೂಲಕ ಆತನು ಶಿಲುಬೆಗೆ ಹಾಕಲ್ಪಟ್ಟಿದ್ದಾಗ್ಯೂ ದೇವರ ಬಲದಿಂದ ಇನ್ನೂ ಬದುಕುತ್ತಾನೆ; ನಾವು ಸಹ ಆತನಲ್ಲಿ ಬಲಹೀನ ರಾಗಿದ್ದೇವೆ, ಆದರೂ ನಾವು ನಿಮಗೋಸ್ಕರವಾಗಿ ದೇವರ ಬಲದಿಂದ ಆತನೊಂದಿಗೆ ಬದುಕುವೆವು.
ಕರ್ತನಾದ ಯೇಸುಕ್ರಿಸ್ತನ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ. ಆಮೆನ್.
ಹೀಗೆ ಆತನನ್ನೂ ಆತನ ಪುನರುತ್ಥಾನ ದಲ್ಲಿರುವ ಶಕ್ತಿಯನ್ನೂ ಆತನ ಬಾಧೆಗಳಲ್ಲಿ ಪಾಲುಗಾರ ನಾಗುವದನ್ನೂ ತಿಳಿದುಕೊಂಡು ಆತನ ಮರಣಕ್ಕೆ ಸರೂಪನಾಗುವೆನು.
ನಾವಾದರೊ ಪರಲೋಕ ನಿವಾಸಿಗಳು; ಅಲ್ಲಿಂದಲೇ ರಕ್ಷಕನು ಬರುವದನ್ನು ಎದುರು ನೋಡುತ್ತಾ ಇದ್ದೇವೆ; ಆತನೇ ಕರ್ತನಾದ ಯೇಸು ಕ್ರಿಸ್ತನು.ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.
ನಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನ ಜೊತೆ ಯಲ್ಲಿ ಪ್ರಭಾವದಿಂದ ಕೂಡಿದವರಾಗಿ ಪ್ರತ್ಯಕ್ಷ ರಾಗುವಿರಿ.