ಇದಾದ ಮೇಲೆ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಆತನು ಕಾಣಿಸಿ ಕೊಂಡನು; ಇದರಲ್ಲಿ ಹೆಚ್ಚು ಜನರು ಇಂದಿನವರೆಗೂ ಇದ್ದಾರೆ; ಆದರೆ ಕೆಲವರು ನಿದ್ರೆಹೋಗಿದ್ದಾರೆ.
Cross references
ಆಗ ಯೇಸು ಅವರಿಗೆ-- ಭಯ ಪಡಬೇಡಿರಿ; ನನ್ನ ಸಹೋದರರು ಗಲಿಲಾಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವ ರೆಂದೂ ಹೋಗಿ ಅವರಿಗೆ ಹೇಳಿರಿ ಅಂದನು.
ಆಗ ಯೇಸು ತಮಗೆ ನೇಮಿಸಿದ ಗಲಿಲಾಯ ದಲ್ಲಿರುವ ಬೆಟ್ಟಕ್ಕೆ ಹನ್ನೊಂದು ಮಂದಿ ಶಿಷ್ಯರು ಹೋದರು.
ಆದರೆ ನೀವು ಹೊರಟುಹೋಗಿ ಆತನು ನಿಮಗೆ ಹೇಳಿದಂತೆ ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ; ಅಲ್ಲಿ ನೀವು ಆತನನ್ನು ಕಾಣುವಿರಿ ಎಂದು ಆತನ ಶಿಷ್ಯರಿಗೆ ಮತ್ತು ಪೇತ್ರನಿಗೆ ಹೇಳಿರಿ ಅಂದನು.
ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.
ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು.
ಇದು ಮಾತ್ರವಲ್ಲದೆ ಕ್ರಿಸ್ತನಲ್ಲಿ ನಿದ್ರೆ ಹೋದವರೂ ನಾಶವಾದರು.
ಇದಲ್ಲದೆ ಸಹೋದರರೇ, ನಿರೀಕ್ಷೆಯಿಲ್ಲದ ಬೇರೆಯವರ ಹಾಗೆ ದುಃಖಿಸಿದಂತೆ ನಿದ್ರೆಹೋದವರ ವಿಷಯದಲ್ಲಿ ನೀವು ತಿಳಿದಿರಬೇಕೆಂದು ನಾನು ಇಚ್ಚಿಸುತ್ತೇನೆ.
ನಾವು ಕರ್ತನ ಮಾತಿನ ಆಧಾರದಿಂದ ನಿಮಗೆ ಹೇಳುವದೇನಂದರೆ, ಕರ್ತನು ಪ್ರತ್ಯಕ್ಷನಾಗು ವವರೆಗೂ ಜೀವದಿಂದುಳಿದಿರುವ ನಾವು ನಿದ್ರೆಹೋದ ವರಿಗಿಂತ ಮುಂದಾಗುವದೇ ಇಲ್ಲ.
ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ಪಿತೃಗಳು ನಿದ್ರೆ ಹೊಂದಿದಂದಿನಿಂದ ಸಮಸ್ತವೂ ಸೃಷ್ಟಿ ಮೊದಲುಗೊಂಡು ಹಾಗೆಯೇ ಇರುತ್ತದಲ್ಲಾ ಎಂದು ಹೇಳುವರೆಂಬದಾಗಿ ನೀವು ಮೊದಲು ತಿಳುಕೊಳ್ಳ ಬೇಕು.