ಪೌಲನಾಗಲಿ ಅಪೊಲ್ಲೋಸನಾಗಲಿ ಕೇಫನಾಗಲಿ ಲೋಕವಾಗಲಿ ಜೀವವಾಗಲಿ ಮರಣವಾಗಲಿ ಈಗಿನ ಸಂಗತಿ ಗಳಾಗಲಿ ಮುಂದಣ ಸಂಗತಿಗಳಾಗಲೀ ಸಮಸ್ತವೂ ನಿಮ್ಮವೇ;ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರವನು.
Cross references
ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ.
ನಾನು ನಿಮಗೆ ಈಗ ಹೇಳುವದೇನಂದರೆ, ನಿಮ್ಮೊ ಳಗೆ ಪ್ರತಿಯೊಬ್ಬನು--ನಾನು ಪೌಲನವನು, ನಾನು ಅಪೊಲ್ಲೋಸನವನು, ನಾನು ಕೇಫನವನು, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.
ಹಾಗಾದರೆ ಪೌಲನು ಯಾರು? ಅಪೊಲ್ಲೋಸನು ಯಾರು? ಅವರು ಸೇವಕರು, ಅವರ ಮುಖಾಂತರ ನೀವು ನಂಬುವವರಾದಿರಿ; ಕರ್ತನು ಒಬ್ಬೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆ ಮಾಡುವವ ರಾಗಿದ್ದಾರೆ.
ಎಲ್ಲರಿಂದಲೂ ನಾನು ಸ್ವತಂತ್ರನಾಗಿದ್ದರೂ ಇನ್ನೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳುವದಕ್ಕೋಸ್ಕರ ನನ್ನನ್ನು ಎಲ್ಲರಿಗೂ ಸೇವಕನನ್ನಾಗಿ ಮಾಡಿಕೊಂಡಿದ್ದೇನೆ.
ನಮ್ಮನ್ನು ನಾವೇ ಅಲ್ಲ, ಆದರೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ಸೇವಕರೆಂದು ಕರ್ತನಾದ ಕ್ರಿಸ್ತ ಯೇಸುವನ್ನೇ ಸಾರುತ್ತೇವೆ.
ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ
ನನಗಂತೂ ಬದುಕುವದೆಂದರೆ ಕ್ರಿಸ್ತನೇ, ಸಾಯು ವದು ಲಾಭವೇ.