ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ
Cross references
ಸುಮ್ಮನೆ ನಿನ್ನ ಸಹೋದರನಿಂದ ಈಡು ತೆಗೆದು ಕೊಂಡಿ; ಬೆತ್ತಲೆಯಾಗಿರುವವರ ವಸ್ತ್ರಗಳನ್ನು ನೀನು ಸುಲುಕೊಂಡಿ.
ಅದಕ್ಕೆ ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ, ಆಕಾಶದ ಪಕ್ಷಿಗಳಿಗೆ ಗೂಡು ಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆಯಿಡು ವದಕ್ಕೂ ಸ್ಥಳವಿಲ್ಲ ಎಂದು ಹೇಳಿದನು.
ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯ ದಿಂದಲೂ ಕೆಲವು ಯೆಹೂದ್ಯರು ಅಲ್ಲಿಗೆ ಬಂದು ಜನರನ್ನು ಪ್ರೇರೇಪಿಸಿ ಪೌಲನ ಮೇಲೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಪಟ್ಟಣದ ಹೊರಕ್ಕೆ ಎಳೆದುಬಿಟ್ಟರು.
ಅವರನ್ನು ಬಹಳವಾಗಿ ಹೊಡೆಸಿದ ಮೇಲೆ ಅವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಮನೆಯ ಅಧಿಕಾರಿಗೆ ಖಂಡಿತವಾಗಿ ಆಜ್ಞಾಪಿಸಿ ಸೆರೆಮನೆಯೊಳಗೆ ಹಾಕಿದರು.
ಅದಕ್ಕೆ ಮಹಾಯಾಜಕನಾದ ಅನನೀಯ ನು ಅವನ ಬಾಯಿಯ ಮೇಲೆ ಹೊಡೆಯಬೇಕೆಂದು ತನ್ನ ಹತ್ತಿರ ನಿಂತಿದ್ದವರಿಗೆ ಅಪ್ಪಣೆಕೊಟ್ಟನು.
ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ?
ತಿನ್ನುವದಕ್ಕೂ ಕುಡಿಯು ವದಕ್ಕೂ ನಮಗೆ ಹಕ್ಕಿಲ್ಲವೇ?
ಎಲ್ಲಾ ಕಡೆಗಳಲ್ಲಿ ನಮಗೆ ಕಳವಳ ವಿದ್ದರೂ ನಾವು ಸಂಕಟಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ.
ಆದರೆ ಎಲ್ಲಾ ಸಂಗತಿಗಳಲ್ಲಿ ಹೆಚ್ಚು ತಾಳ್ಮೆಯಲ್ಲಿಯೂ ಸಂಕಟ ಗಳಲ್ಲಿಯೂ ಕೊರತೆಗಳಲ್ಲಿಯೂ ಇಕ್ಕಟ್ಟುಗಳಲ್ಲಿಯೂ
ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು.
ನಾನು ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು, ನಾನು ತೃಪ್ತನಾಗಿ ದ್ದರೂ ಹಸಿದವನಾಗಿದ್ದರೂ ಸಮೃದ್ಧಿಯುಳ್ಳವನಾದರೂ ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲಿರುವವನಾದರೂ ಅವೆಲ್ಲವುಗಳನ್ನು ನಾನು ಕಲಿತು ಕೊಂಡಿದ್ದೇನೆ.
ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬ ದನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು.