Home Bibles 1 ಕೊರಿಂಥದವರಿಗೆ 7:17 · ಕನ್ನಡ ಬೈಬಲ್
1 ಕೊರಿಂಥದವರಿಗೆ 7:17 · ಕನ್ನಡ ಬೈಬಲ್

ದೇವರು ಒಬ್ಬೊಬ್ಬನಿಗೆ ಹೇಗೆ ಹಂಚಿಕೊಟ್ಟನೋ ಮತ್ತು ಕರ್ತನು ಒಬ್ಬೊಬ್ಬನನ್ನು ಹೇಗೆ ಕರೆದನೋ ಅದಕ್ಕೆ ತಕ್ಕಂತೆ ನಡೆಯಲಿ; ಹೀಗೆ ನಾನು ಎಲ್ಲಾ ಸಭೆಗಳಲ್ಲಿಯೂ ನೇಮಕಮಾಡುತ್ತೇನೆ.

Cross references

ಮತ್ತಾಯ 19:12

ಯಾಕಂದರೆ ತಮ್ಮ ತಾಯಿಯ ಗರ್ಭದಿಂದ ಹುಟ್ಟಿ ದಾಗಲೇ ಕೆಲವರು ನಪುಂಸಕರಾದವರಿದ್ದಾರೆ, ಮತ್ತು ಕೆಲವರು ಮನುಷ್ಯರಿಂದ ನಪುಂಸಕರಾಗಿ ಮಾಡಲ್ಪಟ್ಟ ವರು ಇದ್ದಾರೆ, ಇನ್ನು ಕೆಲವರು ಪರಲೋಕರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗ ಮಾಡಿ ಕೊಂಡವರೂ ಇದ್ದಾರೆ; ಇದ

ರೋಮಾಪುರದವರಿಗೆ 12:3

ನಿಮ್ಮೊಳಗೆ ಪ್ರತಿಯೊಬ್ಬನು ತನ್ನ ಯೋಗ್ಯತೆಗೆ ವಿಾರಿ ಭಾವಿಸಿಕೊಳ್ಳದೆ ದೇವರು ಪ್ರತಿಯೊಬ್ಬನಿಗೆ ಅವನವನ ವಿಶ್ವಾಸದ ಪ್ರಮಾಣಕ್ಕನುಸಾರವಾಗಿ ಕೊಟ್ಟಂತೆ ತನ್ನನ್ನು ಮಿತವಾಗಿ ತಿಳಿದುಕೊಳ್ಳಬೇಕೆಂದು ನನಗೆ ಕೊಡಲ್ಪಟ್ಟ ಕೃಪೆಗನುಸಾರವಾಗಿ ನಾನು ಹೇಳುತ್ತೇನೆ.

1 ಕೊರಿಂಥದವರಿಗೆ 4:17

ಈ ಕಾರಣ ದಿಂದ ಕರ್ತನಲ್ಲಿ ನನ್ನ ಪ್ರಿಯ ಮಗನಾದ ತಿಮೊಥೆ ಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೆನೆ; ಅವನು ಕರ್ತನಲ್ಲಿ ನಂಬಿಗಸ್ತನಾಗಿದ್ದಾನೆ; ಅವನು ಕ್ರಿಸ್ತನಲ್ಲಿ ನನ್ನ ನಡಾವಳಿಯನ್ನು ಅಂದರೆ ನಾನು ಎಲ್ಲೆಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವ ಕ್ರಮ ವನ್ನು ನಿಮ್ಮ ನೆನಪಿಗೆ ತರು

1 ಕೊರಿಂಥದವರಿಗೆ 7:7

ನಾನು ಇದ್ದಂತೆಯೇ ಎಲ್ಲರೂ ಇರ ಬೇಕೆಂದು ಇಚ್ಛಿಸುತ್ತೇನೆ. ಆದರೆ ಒಬ್ಬನು ಒಂದು ವಿಧದಲ್ಲಿ ಮತ್ತೊಬ್ಬನು ಇನ್ನೊಂದು ವಿಧದಲ್ಲಿ ಹೀಗೆ ಪ್ರತಿಯೊಬ್ಬನು ದೇವರಿಂದ ಅವನಿಗೆ ತಕ್ಕ ವರವನ್ನು ಹೊಂದಿದವನಾಗಿದ್ದಾನೆ.

1 ಕೊರಿಂಥದವರಿಗೆ 7:18

ಸುನ್ನತಿ ಯಲ್ಲಿದ್ದು ಕರೆಯಲ್ಪಟ್ಟವನು ಯಾವನಾದರೂ ಇದ್ದಾನೋ? ಅವನು ಸುನ್ನತಿ ಇಲ್ಲದವನಂತಾಗ ಬಾರದು; ಸುನ್ನತಿ ಇಲ್ಲದೆ ಕರೆಯಲ್ಪಟ್ಟವನು ಯಾವ ನಾದರೂ ಇದ್ದಾನೋ? ಅವನು ಸುನ್ನತಿ ಮಾಡಿಸಿ ಕೊಳ್ಳಬಾರದು.

1 ಕೊರಿಂಥದವರಿಗೆ 7:20

ದೇವರು ಕರೆದಾಗ ಪ್ರತಿಯೊಬ್ಬನು ಯಾವ ಸ್ಥಿತಿಯಲ್ಲಿದ್ದನೋ ಆ ಸ್ಥಿತಿಯಲ್ಲಿಯೇ ಇರಬೇಕು.

1 ಕೊರಿಂಥದವರಿಗೆ 7:24

ಸಹೋದರರೇ, ಪ್ರತಿಯೊಬ್ಬನು ಕರೆಯಲ್ಪಟ್ಟಾಗ ಯಾವ ಸ್ಥಿತಿಯಲ್ಲಿದ್ದನೋ ಅದೇ ಸ್ಥಿತಿಯಲ್ಲಿ ದೇವರೊಂದಿಗೆ ಇದ್ದುಕೊಂಡಿರಲಿ.

1 ಕೊರಿಂಥದವರಿಗೆ 14:33

ಪರಿಶುದ್ಧರ ಎಲ್ಲಾ ಸಭೆಗಳಲ್ಲಿರುವ ಪ್ರಕಾರ ದೇವರು ಸಮಾಧಾನಕ್ಕೇ ಹೊರತು ಗಲಿಬಿಲಿಗೆ ಕಾರಣನಲ್ಲ.

1 ಕೊರಿಂಥದವರಿಗೆ 16:1

ಪರಿಶುದ್ಧರಿಗೋಸ್ಕರ ಹಣವನ್ನೆತ್ತುವ ವಿಷಯದಲ್ಲಿ ಗಲಾತ್ಯ ಸಭೆಗಳಿಗೆ ನಾನು ಅಪ್ಪಣೆಕೊಟ್ಟಂತೆ ನೀವೂ ಮಾಡಿರಿ.

2 ಕೊರಿಂಥದವರಿಗೆ 8:18

ಇದಲ್ಲದೆ ಸುವಾರ್ತೆಯ ವಿಷಯದಲ್ಲಿ ಎಲ್ಲಾ ಸಭೆಗಳಲ್ಲಿಯೂ ಹೆಸರುಗೊಂಡಿದ್ದ ಸಹೋದರನನ್ನು ಅವನ ಜೊತೆ ಯಲ್ಲಿ ಕಳುಹಿಸಿದ್ದೇವೆ.

2 ಕೊರಿಂಥದವರಿಗೆ 11:28

ಇನ್ನೂ ಬೇರೆ ಹೊರಗಿನವುಗಳಲ್ಲದೆ ಎಲ್ಲಾ ಸಭೆಗಳ ವಿಷಯವಾದ ಚಿಂತೆಯನ್ನು ಪ್ರತಿ ದಿನವೂ ನಾನು ಹೊರುತ್ತಿದ್ದೇನೆ.

1 ಪೇತ್ರ 4:10

ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.

Interlinear

Choose Theme