Home Bibles ☰ Books 1 ಕೊರಿಂಥದವರಿಗೆ 7:36 · ಕನ್ನಡ ಬೈಬಲ್
1 ಕೊರಿಂಥದವರಿಗೆ 7:36 · ಕನ್ನಡ ಬೈಬಲ್

ಒಬ್ಬನು ತನ್ನ ಕನ್ನಿಕೆಗೆ ಮದುವೆಯಿಲ್ಲದಿರುವದು ಮರ್ಯಾದೆಯಲ್ಲವೆಂದು ಭಾವಿಸಿದರೆ ಮತ್ತು ಆಕೆಗೆ ಪ್ರಾಯ ಕಳೆದುಹೋಗು ತ್ತದಲ್ಲಾ, ಮದುವೆಯಾಗುವದು ಅವಶ್ಯವೆಂದು ಅವನಿಗೆ ಕಂಡರೆ ತನ್ನಿಷ್ಟದಂತೆ ಮಾಡಲಿ, ಅವನು ಪಾಪಮಾಡುವದಿಲ್ಲ, ಅವರು ಮದುವೆಮಾಡಿ ಕೊಳ್ಳಲಿ.

Cross references

1 ಸಮುವೇಲ 2:33

ನನ್ನ ಯಜ್ಞ ವೇದಿಯ ಬಳಿಯಿಂದ ನಾನು ಕಡಿದು ಬಿಡದ ಮನು ಷ್ಯನು ನಿನ್ನ ಕಣ್ಣುಗಳನ್ನು ಕಳೆದು ನಿನ್ನ ಹೃದಯವನ್ನು ವೇದನೆಪಡಿಸುವದಕ್ಕೆ ಇರುವನು; ನಿನ್ನ ಮನೆಯವ ರೆಲ್ಲಾ ಯೌವನಸ್ಥರಾದಾಗಲೇ ಸಾಯುವರು.

ಯೆರೆಮಿಯ 29:6

ಈಗ ವಿಚಾರಿಸಿ ನೋಡಿರಿ; ಗಂಡಸು ಪ್ರಸವವೇದನೆ ಪಡುವದುಂಟೇ? ನಾನು ಯಾಕೆ ಪುರುಷರೆಲ್ಲರನು ಪ್ರಸವವೇದನೆ ಪಡುವ ಸ್ತ್ರೀಯ ಹಾಗೆ ನಡುವಿನ ಮೇಲೆ ಕೈ ಇಟ್ಟವರ ಹಾಗೆ ನೋಡುತ್ತೇನೆ; ಯಾಕೆ ಮುಖಗಳೆಲ್ಲಾ ಕಳೆಗುಂದಿದವು?

1 ಕೊರಿಂಥದವರಿಗೆ 7:9

ಅವರು ದಮೆಯಿಲ್ಲದವರಾದರೆ ಮದುವೆ ಮಾಡಿಕೊಳ್ಳಲಿ; ತಾಪಪಡುವದಕ್ಕಿಂತ ಮದುವೆಮಾಡಿ ಕೊಳ್ಳುವದು ಉತ್ತಮ.

1 ಕೊರಿಂಥದವರಿಗೆ 7:37

ಆದರೆ ಒಬ್ಬನು ದೃಢಚಿತ್ತನಾಗಿದ್ದು ಬಲವಂತವೇನೂ ಇಲ್ಲದೆ ತನ್ನಿಷ್ಟವನ್ನು ನಡಿಸುವದಕ್ಕೆ ಹಕ್ಕುಳ್ಳವನಾಗಿ ತನ್ನ ಕನ್ನಿಕೆಯನ್ನು ಮದುವೆಮಾಡಿ ಕೊಡುವದಿಲ್ಲವೆಂದು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡರೆ ಅವನು ಹಾಗೆ ಮಾಡುವದು ಒಳ್ಳೇದು.

Interlinear

Choose Theme