ಇದಲ್ಲದೆ ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ನಾನು ಯೆಹೂದ್ಯನಾಗಿಯೂ ನ್ಯಾಯ ಪ್ರಮಾಣದ ಅಧೀನದಲ್ಲಿರುವವರನ್ನು ಸಂಪಾದಿಸಿ ಕೊಳ್ಳುವಂತೆ ನ್ಯಾಯಪ್ರಮಾಣಕ್ಕೆ ಅಧೀನರಾಗಿರು ವವರಿಗೆ ನ್ಯಾಯಪ್ರಮಾಣಕ್ಕೆ ಅಧೀನನಾಗಿಯೂ
Cross references
ಇವನನ್ನು ತನ್ನ ಸಂಗಡ ಕರಕೊಂಡು ಹೋಗಬೇಕೆಂದು ಪೌಲನು ಅಪೇಕ್ಷಿಸಿ ಆಯಾ ಸ್ಥಳಗಳಲ್ಲಿದ್ದ ಯೆಹೂದ್ಯರ ನಿಮಿತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು. ಯಾಕಂದರೆ ಅವನ ತಂದೆ ಗ್ರೀಕನೆಂದು ಎಲ್ಲರಿಗೂ ಗೊತ್ತಿತ್ತು.
ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ಬರಹಗಳಿಂದ ಅವರ ಸಂಗಡ ವಾದಿಸಿ
ಪೌಲನಿಗೆ ಹರಕೆಯಿದ್ದ ಕಾರಣ ಕೆಂಖ್ರೆಯದಲ್ಲಿ ತಲೆಬೋಳಿಸಿಕೊಂಡು ಅವನು ಅಲ್ಲಿ ಬಹಳ ಕಾಲ ಇದ್ದ ಮೇಲೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ಪ್ರಿಸ್ಕಿಲ್ಲ ಅಕ್ವಿಲ್ಲರ ಕೂಡ ಅಲ್ಲಿಂದ ಸಿರಿಯಾಕ್ಕೆ ಸಮುದ್ರ ಪ್ರಯಾಣಮಾಡಿ
ಅವರು ಅದನ್ನು ಕೇಳಿ ಕರ್ತನನ್ನು ಮಹಿಮೆಪಡಿಸಿ ಅವನಿಗೆ--ಸಹೋದರನೇ, ವಿಶ್ವಾಸಿ ಗಳಾದ ಯೆಹೂದ್ಯರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೀನು ನೋಡುತ್ತೀಯಲ್ಲಾ. ಅವರೆಲ್ಲರೂ ನ್ಯಾಯಪ್ರಮಾಣದ ವಿಷಯದಲ್ಲಿ ಅಭಿಮಾನವುಳ್ಳವರಾಗಿದ್ದಾರೆ.
ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
ಯಾಕಂದರೆ ಪಾಪವು ನಿಮ್ಮ ಮೇಲೆ ಪ್ರಭುತ್ವ ನಡಿಸಬಾರದು; ಕಾರಣವೇನಂದರೆ ನೀವು ನ್ಯಾಯಪ್ರಮಾಣಾಧೀನ ರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
ಹೀಗೆ ಯಾವ ವಿಧದಲ್ಲಿಯಾದರೂ ನನ್ನ ಸ್ವಜನರಲ್ಲಿ ಹುರುಡನ್ನು ಹುಟ್ಟಿಸಿ ಅವರಲ್ಲಿ ಕೆಲವರು ರಕ್ಷಣೆ ಹೊಂದುವಂತೆ ಮಾಡೇನು.
ನ್ಯಾಯಪ್ರಮಾಣಾಧೀನರನ್ನು ವಿಮೋಚಿಸುವದಕ್ಕೂ ನಾವು ದತ್ತುಪುತ್ರರ ಸ್ವೀಕಾರವನ್ನು ಹೊಂದುವಂತೆಯೂ ಕಳುಹಿಸಿಕೊಟ್ಟನು.
ನ್ಯಾಯಪ್ರಮಾಣಧೀನರಾಗುವದಕ್ಕೆ ಮನಸ್ಸುಳ್ಳ ವರೇ, ನ್ಯಾಯಪ್ರಮಾಣಕ್ಕೆ ಕಿವಿಗೊಡುವದಿಲ್ಲವೋ? ನನಗೆ ಹೇಳಿರಿ.
ಆದರೆ ನೀವು ಆತ್ಮನಿಂದ ನಡಿಸಿಕೊಳ್ಳುವವರಾದರೆ ನ್ಯಾಯಪ್ರಮಾ ಣಕ್ಕೆ ಅಧೀನರಲ್ಲ.