Home Bibles 1 ಕೊರಿಂಥದವರಿಗೆ 9:6 · ಕನ್ನಡ ಬೈಬಲ್
1 ಕೊರಿಂಥದವರಿಗೆ 9:6 · ಕನ್ನಡ ಬೈಬಲ್

ಇಲ್ಲವೆ ಕೆಲಸಮಾಡದೆ ಇರುವದಕ್ಕೆ ನನಗೂ ಬಾರ್ನಬನಿಗೂ ಮಾತ್ರ ಅಧಿಕಾರವಿಲ್ಲವೇ?

Cross references

2 ಅರಸುಗಳು 6:2

ಅಪ್ಪಣೆ ಕೊಡು; ನಾವು ಯೊರ್ದನಿನ ವರೆಗೂ ಹೋಗಿ ಪ್ರತಿ ಮನುಷ್ಯನು ಅಲ್ಲಿಂದ ಒಂದೊಂದು ತೊಲೆಯನ್ನು ತಕ್ಕೊಂಡು ಬಂದು ವಾಸವಾಗಿರುವದಕ್ಕೆ ನಮಗೋ ಸ್ಕರ ಒಂದು ಸ್ಥಳವನ್ನು ಅಲ್ಲಿ ಮಾಡುವೆವು ಅಂದರು. ಅವನು--ಹೋಗಿರಿ ಅಂದನು.

ನೆಹೆಮ್ಯ 10:36

ನ್ಯಾಯಪ್ರಮಾಣದಲ್ಲಿ ಬರೆದಿರುವ ಹಾಗೆ ನಮ್ಮ ಕುಮಾರರಲ್ಲಿಯೂ ಪಶುಗಳಲ್ಲಿಯೂ ಚೊಚ್ಚಲಾದ ವುಗಳನ್ನು ದನಗಳಲ್ಲಿಯೂ ಮಂದೆಗಳಲ್ಲಿಯೂ ಚೊಚ್ಚ ಲಾದವುಗಳನ್ನು ದೇವರ ಆಲಯಕ್ಕೆ ಸೇವಿಸುವ ಯಾಜ ಕರ ಬಳಿಗೆ ತರುವೆವು;

ಅಪೋಸ್ತಲರ ಕೃತ್ಯಗಳು 4:36

ಅಪೊಸ್ತಲರಿಂದ ಬಾರ್ನಬನೆಂದು ಅಡ್ಡ ಹೆಸರು ಹೊಂದಿದ ಕುಪ್ರ ದೇಶದ ಲೇವಿಯನಾದ ಯೋಸೇಫನೆಂಬವನು (ಬಾರ್ನಬ ಅಂದರೆ ಆದರ ಣೆಯ ಮಗನು)ತನಗಿದ್ದ ಭೂಮಿಯನ್ನು ಮಾರಿ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.

ಅಪೋಸ್ತಲರ ಕೃತ್ಯಗಳು 11:22

ಈ ವಿಷಯಗಳ ವರ್ತಮಾನವು ಯೆರೂಸಲೇಮಿನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು.

ಅಪೋಸ್ತಲರ ಕೃತ್ಯಗಳು 13:1

ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಕೆಲವರು ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರೆಂದರೆ, ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಚತುರಾಧಿ ಪತಿಯಾದ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಇವರೇ.

ಅಪೋಸ್ತಲರ ಕೃತ್ಯಗಳು 13:50

ಆದರೆ ಭಕ್ತಿಯುಳ್ಳ ಮತ್ತು ಗೌರವವುಳ್ಳ ಸ್ತ್ರೀಯರನ್ನೂ ಪಟ್ಟಣದ ಪ್ರಮುಖರನ್ನೂ ಯೆಹೂದ್ಯರು ಪ್ರೇರಿಸಿ ಪೌಲ ಬಾರ್ನಬರಿಗೆ ವಿರೋಧವಾಗಿ ಹಿಂಸೆ ಯನ್ನೆಬ್ಬಿಸಿ ತಮ್ಮ ಮೇರೆಗಳಿಂದ ಅವರನ್ನು ಅಟ್ಟಿಬಿಟ್ಟರು.

ಅಪೋಸ್ತಲರ ಕೃತ್ಯಗಳು 14:12

ಅವರು ಬಾರ್ನಬನನ್ನು ೃಹಸ್ಪತಿ ಎಂದೂ ಪೌಲನು ಮುಖ್ಯ ಪ್ರಸಂಗಿಯಾಗಿದ್ದರಿಂದ ಬುಧನೆಂದೂ ಕರೆದರು;

ಅಪೋಸ್ತಲರ ಕೃತ್ಯಗಳು 15:36

ಕೆಲವು ದಿವಸಗಳಾದ ಮೇಲೆ ಪೌಲನು ಬಾರ್ನಬನಿಗೆ--ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಪಟ್ಟಣಗಳಿಗೆ ತಿರಿಗಿ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 18:3

ಅವರು ತಮ್ಮ ವೃತ್ತಿಯಿಂದ ಗುಡಾರ ಮಾಡುವವರಾಗಿದ್ದದರಿಂದ ಅವನು ಅವ ರೊಂದಿಗೆ ಇದ್ದು ಕೆಲಸ ಮಾಡುತ್ತಿದ್ದನು ಯಾಕಂದರೆ ಅವನೂ ಅದೇ ಕಸಬಿನವನಾಗಿದ್ದನು.

ಅಪೋಸ್ತಲರ ಕೃತ್ಯಗಳು 20:34

ಹೌದು, ಈ ಕೈಗಳೇ ಕೆಲಸಮಾಡಿ ನನ್ನ ಕೊರತೆಗಳನ್ನೂ ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನೂ ನೀಗಿದ್ದನ್ನು ನೀವೇ ಬಲ್ಲಿರಿ.

1 ಕೊರಿಂಥದವರಿಗೆ 4:11

ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ

1 ತೆಸಲೋನಿಕದವರಿಗೆ 2:9

ಸಹೋದ ರರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕ ಬಾರದೆಂದು ಹಗಲಿರುಳು ದುಡಿದು ಜೀವನ ಮಾಡಿ ಕೊಳ್ಳುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು; ಆ ನಮ್ಮ ಕಷ್ಟವೂ ಪ್ರಯಾಸವೂ ನಿಮ್ಮ ನೆನಪಿನಲ್ಲಿ ರುವದಷ್ಟೆ.

2 ತೆಸಲೋನಿಕದವರಿಗೆ 3:7

ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂದು ನೀವೇ ಬಲ್ಲಿರಿ; ನಾವು ನಿಮ್ಮಲ್ಲಿ ಅಕ್ರಮವಾಗಿ ನಡೆಯಲಿಲ್ಲ;

Interlinear

Choose Theme