Home Bibles 1 ಯೋಹಾನ 2:11 · ಕನ್ನಡ ಬೈಬಲ್
1 ಯೋಹಾನ 2:11 · ಕನ್ನಡ ಬೈಬಲ್

ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿ ದ್ದಾನೆ ಮತ್ತು ಕತ್ತಲೆಯಲ್ಲಿ ನಡೆದುಕೊಳ್ಳುತ್ತಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡು ಮಾಡಿದ್ದರಿಂದ ತಾನು ಎಲ್ಲಿಗೆ ಹೋಗುತ್ತಾನೋ ಎಂದು ಅವನಿಗೆ ತಿಳಿಯದು.

Cross references

ಸಾಮೇತಿಗಳು 4:19

ದುಷ್ಟರ ಮಾರ್ಗವು ಕತ್ತಲೆ ಯಂತಿದೆ. ಅವರು ಯಾವದಕ್ಕೆ ಎಡವಿ ಬೀಳುತ್ತಾರೋ ಅದು ಅವರಿಗೆ ಗೊತ್ತಾಗದು.

ಯೋಹಾನ 12:35

ಆಗ ಯೇಸು ಅವ ರಿಗೆ--ಇನ್ನು ಸ್ವಲ್ಪಕಾಲವೇ ಬೆಳಕು ನಿಮ್ಮೊಂದಿಗೆ ಇರು ತ್ತದೆ. ಕತ್ತಲೆ ನಿಮ್ಮನ್ನು ಮುಸುಕಿಕೊಳ್ಳದಂತೆ ನಿಮಗೆ ಬೆಳಕಿರುವಾಗಲೇ ನಡೆಯಿರಿ; ಯಾಕಂದರೆ ಕತ್ತಲೆಯಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.

ಯೋಹಾನ 12:40

ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡು ಮಾಡಿ ಅವರ ಹೃದಯವನ್ನು ಕಠಿಣ ಮಾಡಿದನು ಎಂಬದು.

2 ಕೊರಿಂಥದವರಿಗೆ 3:14

ಆದರೆ ಅವರ ಬುದ್ದಿಮಂದವಾಯಿತು, ಆ ಮುಸುಕು ಕ್ರಿಸ್ತನಲ್ಲಿ ತೆಗೆದು ಹಾಕಲ್ಪಟ್ಟಿರುವದರಿಂದ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗೆಲ್ಲಾ ಈ ದಿನದ ವರೆಗೂ ಅವರಿಗೆ ಆ ಮುಸುಕು ತೆಗೆಯಲ್ಪಡದೆ ಉಳಿದಿದೆ.

2 ಕೊರಿಂಥದವರಿಗೆ 4:4

ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.

ತೀತ 3:3

ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.

1 ಯೋಹಾನ 1:6

ನಾವು ಆತನ ಸಂಗಡ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುವವರಲ್ಲ.

1 ಯೋಹಾನ 2:9

ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ.

ಪ್ರಕಟನೆ 3:17

ನೀನು--ನಾನು ಐಶ್ವರ್ಯವಂತನು, ಧನವೃದ್ಧಿಯುಳ್ಳವನು, ಯಾವದರ ಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ನಿರ್ಗತಿಕನು, ದರಿದ್ರನು, ಬಡವನು, ಕುರುಡನು, ಬೆತ್ತಲೆಯಾದವನು ಆಗಿರುವ ದನ್ನು ತಿಳಿಯದೆ ಇದ್ದೀ.

Interlinear

Choose Theme