1 ಯೋಹಾನ 5:15 · ಕನ್ನಡ ಬೈಬಲ್
ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬದು ನಮಗೆ ಗೊತ್ತಾಗಿದ್ದರೆ ನಾವು ಆಶಿಸಿದವುಗಳು ಆತನಿಂದ ನಮಗೆ ದೊರೆತವೆಂಬದು ನಮಗೆ ತಿಳಿದದೆ.
Cross references
ಸಾಮೇತಿಗಳು 15:29
ಕರ್ತನು ದುಷ್ಟರಿಗೆ ದೂರ; ನೀತಿವಂತರ ಪ್ರಾರ್ಥನೆಯನ್ನು ಆತನು ಕೇಳುತ್ತಾನೆ.
ಯೆರೆಮಿಯ 15:12
ನೀವು ನಿಮ್ಮ ತಂದೆಗಳಿಗಿಂತ ಇನ್ನೂ ಕೆಟ್ಟ ಕೆಲಸ ಮಾಡಿದ್ದೀರಿ; ಇಗೋ, ನನ್ನನ್ನು ಕೇಳದ ಹಾಗೆ ನಿಮ್ಮ ನಿಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡೆದುಕೊಂಡಿದ್ದೀರಿ.
ಮಾರ್ಕ 11:24
ಆದ ಕಾರಣ ನಾನು ನಿಮಗೆ ಹೇಳುವದೇನಂದರೆ--ನೀವು ಪ್ರಾರ್ಥನೆ ಮಾಡುವಾಗ ಯಾವವುಗಳನ್ನು ಆಶಿಸು ತ್ತೀರೋ ಅವು ನಿಮಗೆ ಸಿಕ್ಕುವವೆಂದು ನಂಬಿರಿ; ಮತ್ತು ಅವುಗಳನ್ನು ನೀವು ಹೊಂದುವಿರಿ.
ಲೂಕ 11:9
ನಾನು ನಿಮಗೆ ಹೇಳುವದೇನಂ ದರೆ--ಬೇಡಿಕೊಳ್ಳಿರಿ, ನಿಮಗೆ ಕೊಡಲ್ಪಡುವದು; ಹುಡುಕಿರಿ, ನೀವು ಕಂಡುಕೊಳ್ಳುವಿರಿ; ತಟ್ಟಿರಿ, ನಿಮಗೆ ತೆರೆಯಲ್ಪಡುವದು.
1 ಯೋಹಾನ 5:18
ದೇವರಿಂದ ಹುಟ್ಟಿರುವವನು ಪಾಪಮಾಡುವವ ನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದ ವನು ತನ್ನನ್ನು ತಾನು ಕಾಪಾಡಿಕೊಳ್ಳುವನು; ಕೆಡುಕನು ಅವನನ್ನು ಮುಟ್ಟುವದಿಲ್ಲ.