Home Bibles ☰ Books 1 ಯೋಹಾನ 5:2 · ಕನ್ನಡ ಬೈಬಲ್
1 ಯೋಹಾನ 5:2 · ಕನ್ನಡ ಬೈಬಲ್

ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬದನ್ನು ತಿಳಿದುಕೊಳ್ಳುತ್ತೇವೆ.

Cross references

ಯೋಹಾನ 13:34

ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಒಂದು ಹೊಸ ಆಜ್ಞೆಯನ್ನು ನಾನು ನಿಮಗೆ ಕೊಡುತ್ತೇನೆ--ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು.

ಯೋಹಾನ 15:17

ನೀವು ಒಬ್ಬರನ್ನೊಬ್ಬರು ಪ್ರೀತಿ ಮಾಡಬೇಕೆಂದು ನಾನು ಇವುಗಳನ್ನು ನಿಮಗೆ ಆಜ್ಞಾಪಿಸುತ್ತೇನೆ.

1 ಯೋಹಾನ 2:5

ಯಾವನಾದರೂ ಆತನ ವಾಕ್ಯವನ್ನು ಕೈಕೊಂಡು ನಡೆದರೆ ಅವನಲ್ಲಿ ನಿಜವಾಗಿ ದೇವರ ಪ್ರೀತಿಯು ಪರಿಪೂರ್ಣವಾಗಿದೆ. ಇದರಿಂದಲೇ ನಾವು ಆತನಲ್ಲಿ ದ್ದೇವೆಂಬದನ್ನು ತಿಳುಕೊಳ್ಳುತ್ತೇವೆ.

1 ಯೋಹಾನ 3:22

ನಾವು ಏನೇನು ಬೇಡಿಕೊಳ್ಳುತ್ತೇವೋ ಆತನಿಂದ ನಾವು ಹೊಂದಿಕೊಳ್ಳುತ್ತೇವೆ. ಯಾಕಂದರೆ ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಯಲ್ಲಿ ಮೆಚ್ಚಿಕೆಯಾದವುಗಳನ್ನು ಮಾಡುವವರಾಗಿದ್ದೇವೆ.

1 ಯೋಹಾನ 4:21

ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಈ ಆಜ್ಞೆ ಯನ್ನು ನಾವು ಆತನಿಂದ ಹೊಂದಿದ್ದೇವೆ.

Interlinear

Choose Theme