ಆದರೆ ಇಗೋ, ಅರಸನಾಗಿರುವ ನನ್ನ ಒಡೆಯ ನಾದ ನೀನು ಅರಿಯದೆ ಇರುವಾಗ ಅದೋನೀಯನು ಆಳುತ್ತಾನೆ.
Cross references
ಆದರೆ ಅಬ್ಷಾಲೋಮನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಗೆ ಪಾಳತಿಗಾರರನ್ನು ಕಳುಹಿಸಿ ಅವರಿಗೆ--ನೀವು ತುತೂರಿಯ ಶಬ್ದ ಕೇಳಿದಾಗ ಅಬ್ಷಾಲೋಮನು ಹೆಬ್ರೋನಿನಲ್ಲಿ ಆಳುತ್ತಾನೆಂದು ಹೇಳಿರಿ ಅಂದನು.
ಆಗ ಹಗ್ಗೀತಳ ಮಗನಾದ ಅದೋನೀಯನು ತನ್ನನ್ನು ಹೆಚ್ಚಿಸಿಕೊಂಡು--ನಾನೇ ಅರಸನಾಗಿರಬೇಕು ಅಂದುಕೊಂಡು ತನಗೋಸ್ಕರ ರಥಗಳನ್ನೂ ರಾಹುತ ರನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿ ಮನುಷ್ಯರನ್ನೂ ಸಿದ್ಧಮಾಡಿದನು.
ಆಗ ನಾತಾನನು ಸೊಲೊಮೋನನ ತಾಯಿ ಯಾದ ಬತ್ಷೆಬಳಿಗೆ--ನಮ್ಮ ಒಡೆಯನಾದ ದಾವೀದನು ಅರಿಯದಿರುವಾಗ ಹಗ್ಗೀತಳ ಮಗನಾದ ಅದೋನೀ ಯನು ಆಳುತ್ತಾನೆಂದು ನೀನು ಕೇಳಲಿಲ್ಲವೋ?
ಅದೋನೀಯನು ನನ್ನ ತರುವಾಯ ಆಳುವನೆಂದೂ ನಿನ್ನ ಸಿಂಹಾಸನದ ಮೇಲೆ ಕುಳಿತು ಕೊಳ್ಳುವನೆಂದೂ ನೀನು ಹೇಳಿದ್ದು ಹೌದೋ?
ಅರಸನಾದ ನನ್ನ ಒಡೆಯನಿಂದ ಈ ಕಾರ್ಯ ವಾಯಿತೋ? ಅರಸನಾದ ನನ್ನ ಒಡೆಯನು ತನ್ನ ತರುವಾಯ ತನ್ನ ಸಿಂಹಾಸನದ ಮೇಲೆ ಕುಳಿತು ಕೊಳ್ಳುವವನು ಯಾರೆಂದು ನಿನ್ನ ಸೇವಕನಾದ ನನಗೆ ನೀನು ತಿಳಿಸದೆ ಹೋದಿಯೋ ಅಂದನು.
ಈಗ ಸಹೋದರರೇ, ನಿಮ್ಮ ಅಧಿಕಾರಿಗಳು ತಿಳಿಯದೆ ಮಾಡಿದಂತೆ ನೀವೂ ಇದನ್ನು ಮಾಡಿದಿ ರೆಂದು ನಾನು ಬಲ್ಲೆನು.