ಅದಕ್ಕೆ ಸೊಲೊ ಮೋನನು--ಅವನು ಉತ್ತಮನಾಗಿದ್ದರೆ ಅವನ ಕೂದಲಲ್ಲಿ ಒಂದಾದರೂ ನೆಲಕ್ಕೆ ಬೀಳದು; ಆದರೆ ಅವನಲ್ಲಿ ಕೆಟ್ಟತನವು ಸಿಕ್ಕಿದರೆ ಅವನು ಸಾಯುವನು ಅಂದನು.ಅರಸನಾದ ಸೊಲೊಮೋನನು ಅವ ನನ್ನು ಕರೆಸಿದಾಗ ಬಲಿಪೀಠದ ಬಳಿಯಿಂದ ಅವ ನನ್ನು ಕರಕೊಂಡು ಬಂದರು. ಆಗ ಅವನು ಬಂದು ಅರಸನಾದ ಸೊಲೊಮೋನನಿಗೆ ಅಡ್ಡ ಬಿದ್ದನು. ಸೊಲೊಮೋನನು ಅವನಿಗೆ--ನಿನ್ನ ಮನೆಗೆ ಹೋಗು ಅಂದನು.
Cross references
ಆದರೆ ಜನರು ಸೌಲನಿಗೆ--ಇಸ್ರಾಯೇಲಿನಲ್ಲಿ ಈ ದೊಡ್ಡ ರಕ್ಷಣೆ ಯನ್ನುಂಟು ಮಾಡಿದ ಯೋನಾತಾನನು ಸಾಯ ಬಹುದೋ? ಅದು ಎಂದಿಗೂ ಆಗದು; ಅವನು ಇಂದು ಕರ್ತನ ಸಹಾಯದ ಮೂಲಕ ಕಾರ್ಯವನ್ನು ನಡಿಸಿದ್ದರಿಂದ ಕರ್ತನ ಆಣೆ, ಅವನ ತಲೆಯಲ್ಲಿರುವ ಒಂದು ಕೂದಲಾದರೂ ನೆಲದ ಮೇಲೆ ಬೀಳಬಾರದು ಅಂದರು. ಜನರು ಯೋನಾತಾನನನ್ನು ಸಾಯದ ಹಾಗೆ ಬಿಡಿಸಿಕೊಂಡರು.
ಆಗ ಅವಳು--ರಕ್ತ ವಿಚಾರಕನು ಇನ್ನು ಸಂಹರಿಸದ ಹಾಗೆ ಅರಸನಾದ ನೀನು ನಿನ್ನ ದೇವರಾದ ಕರ್ತನನ್ನು ಜ್ಞಾಪಕಮಾಡು; ಅವರು ನನ್ನ ಮಗನನ್ನು ನಾಶಮಾಡ ಬಾರದು ಅಂದಳು. ಅದಕ್ಕವನು--ಕರ್ತನ ಜೀವ ದಾಣೆ, ನಿನ್ನ ಮಗನ ತಲೆಯ ಕೂದಲಲ್ಲಿ ಒಂದಾದರೂ ನೆಲದ ಮೇಲೆ ಬೀಳುವದಿಲ್ಲ ಅಂದನು.
ಅದಕ್ಕವಳು--ಶೂನೇಮ್ಯಳಾದ ಅಬೀಷ ಗೈಳನ್ನು ನಿನ್ನ ಸಹೋದರನಾದ ಅದೋನೀಯನಿಗೆ ಹೆಂಡತಿಯಾಗಿ ಕೊಡಲ್ಪಡಲಿ ಅಂದಳು.
ಹಾಗಾ ದರೆ ನನ್ನನ್ನು ಸ್ಥಿರಪಡಿಸಿ ನನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕೂಡ್ರಿಸಿ ತಾನು ಮಾತು ಕೊಟ್ಟ ಪ್ರಕಾರ ನನಗೆ ಮನೆಯನ್ನು ಕಟ್ಟಿಸಿದ ಕರ್ತನ ಜೀವದಾಣೆ, ಈ ಹೊತ್ತು ಅದೋನೀಯನು ಸಾಯು ವನು ಅಂದನು.
ಕತ್ತಲೆಯೊಳಗಿಂದ ಹಿಂದಿರುಗು ತ್ತೇನೆಂದು ಅವನು ನಂಬುವದಿಲ್ಲ; ಅವನ ಕತ್ತಿಯು ಅವನಿಗಾಗಿ ಕಾದಿದೆ.
ಯಥಾರ್ಥವಂತನನ್ನು ನೀತಿಯು ತನ್ನ ಮಾರ್ಗ ದಲ್ಲಿ ಕಾಪಾಡುತ್ತದೆ; ಕೆಟ್ಟತನವು ಪಾಪಿಯನ್ನು ಕೆಡವುವದು.
ನೀತಿವಂತನು ದುಷ್ಟನ ಮನೆಯನ್ನು ಬುದ್ಧಿ ಯಿಂದ ಲಕ್ಷಿಸುತ್ತಾನೆ; ಅವರ ದುಷ್ಟತನಕ್ಕಾಗಿ ದೇವರು ಅವರನ್ನು ಕೆಡವುತ್ತಾನೆ.
ಆದರೆ ನಿಮ್ಮ ತಲೆಯ ಕೂದಲುಗಳೆಲ್ಲಾ ಲೆಕ್ಕಿಸಲ್ಪಟ್ಟಿವೆ.
ಆದರೆ ನಿಮ್ಮ ತಲೆಯ ಒಂದು ಕೂದಲಾದರೂ ನಾಶವಾಗುವದಿಲ್ಲ.
ನಿಮ್ಮ ಕ್ಷೇಮಕ್ಕಾಗಿ ಸ್ವಲ್ಪ ಆಹಾರವನ್ನು ತೆಗೆದುಕೊಳ್ಳಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ನಿಮ್ಮಲ್ಲಿ ಯಾರ ತಲೆ ಯಿಂದ ಒಂದು ಕೂದಲೂ ಕೆಳಗೆ ಬಿದ್ದು ಹೋಗು ವದಿಲ್ಲ ಎಂದು ಹೇಳಿದನು.