ಇದಲ್ಲದೆ ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆ ಗಳೆಲ್ಲಾ ಬಂಗಾರದವುಗಳಾಗಿದ್ದವು. ಲೆಬನೋನಿನ ಅಡವಿಯ ಮನೆಯ ಪಾತ್ರೆಗಳೆಲ್ಲಾ ಹಾಗೆಯೇ ಬಂಗಾ ರದವುಗಳಾಗಿದ್ದವು. ಬೆಳ್ಳಿಯದು ಯಾವದೂ ಇರಲಿಲ್ಲ. ಯಾಕಂದರೆ ಸೊಲೊಮೋನನ ದಿವಸಗಳಲ್ಲಿ ಅದು ಏನೂ ಇಲ್ಲದ್ದಾಗಿ ಎಣಿಸಲ್ಪಟ್ಟಿತ್ತು.
Cross references
ಅವನ ಹೃದಯವು ತೊಲಗದ ಹಾಗೆ ಅವನು ತನಗೆ ಅನೇಕ ಪತ್ನಿಯರನ್ನು ಮಾಡಿಕೊಳ್ಳಬಾರದು; ಅವನು ತನಗೆ ಬೆಳ್ಳಿ ಬಂಗಾರವನ್ನು ಬಹಳವಾಗಿ ಹೆಚ್ಚಿಸಿಕೊಳ್ಳಬಾರದು.
ಇದಲ್ಲದೆ ಅವನು ಲೆಬ ನೋನಿನ ಅಡವಿಯ ಮನೆಯನ್ನು ಕಟ್ಟಿಸಿದನು. ಅದು ನೂರು ಮೊಳ ಉದ್ದವೂ ಐವತ್ತು ಮೊಳ ಅಗಲವೂ ಮೂವತ್ತು ಮೊಳ ಎತ್ತರವೂ ಆಗಿತ್ತು; ನಾಲ್ಕು ಸಾಲು ದೇವದಾರು ಕಂಭಗಳ ಮೇಲೆ ಇತ್ತು; ದೇವದಾರು ತೊಲೆಗಳು ಕಂಭಗಳ ಮೇಲೆ ಇದ್ದವು.
ಹಾಗೆಯೇ ಬಂಗಾರದಿಂದ ಮುನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾಣಿಗೆ ನೂರೈವತ್ತು ತೊಲೆ ಬಂಗಾರವಿತ್ತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು.
ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆಗಳೆಲ್ಲಾ ಬಂಗಾರದವುಗಳು. ಲೆಬನೋನಿನ ಅಡವಿಯ ಮನೆಯ ಪಾತ್ರೆಗಳೆಲ್ಲಾ ಹೀಗೆಯೇ ಅಪ ರಂಜಿಯವುಗಳು. ಬೆಳ್ಳಿಯದು ಒಂದೂ ಇರಲಿಲ್ಲ. ಸೊಲೊಮೋನನ ದಿವಸಗಳಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ.
ಅರಸನ ಸ್ಥಿತಿಗೆ ತಕ್ಕಂತೆ ರಾಜರ ದ್ರಾಕ್ಷಾರಸ ವನ್ನು ನಾನಾವಿಧವಾದ ಬಂಗಾರದ ಪಾತ್ರೆಗಳಲ್ಲಿ ಸಮೃದ್ಧಿಯಾಗಿ ಕುಡಿಯಲು ಕೊಟ್ಟರು.
ಬೆಳ್ಳಿಗೆ ಗಣಿಯೂ ಬಂಗಾರಕ್ಕೆ ಚೊಕ್ಕ ಮಾಡುವ ಸ್ಥಳವೂ ಉಂಟಲ್ಲಾ?