Home Bibles ☰ Books 1 ಅರಸುಗಳು 10:29 · ಕನ್ನಡ ಬೈಬಲ್
1 ಅರಸುಗಳು 10:29 · ಕನ್ನಡ ಬೈಬಲ್

ಐಗುಪ್ತದಿಂದ ಹೊರಟುಬರುವ ರಥದ ಕ್ರಯವು ಆರು ನೂರು ಬೆಳ್ಳಿ ಶೆಕೇಲುಗಳು, ಕುದುರೆಯ ಕ್ರಯವು ನೂರ ಐವತ್ತು ಬೆಳ್ಳಿ ಶೆಕೇಲುಗಳು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರಿಗೂ ಅರಾಮ್ಯದ ಅರಸುಗಳಿಗೂ ಅವರ ಮುಖಾಂತರ ತಕ್ಕೊಂಡು ಬರುತ್ತಿದ್ದರು.

Cross references

ಯೆಹೋಶುವ 1:4

ಅರಣ್ಯವೂ ಈ ಲೆಬನೋನೂ ಮೊದಲುಗೊಂಡು ಯೂಫ್ರೇಟೀಸ್‌ ಮಹಾನದಿಯ ವರೆಗೆ ಇರುವ ಹಿತ್ತಿಯರ ದೇಶವೆಲ್ಲಾ ಸೂರ್ಯನು ಅಸ್ತಮಿಸುವ ಕಡೆಗೆ ಮಹಾಸಮುದ್ರದ ವರೆಗೂ ನಿಮ್ಮ ಮೇರೆಯಾಗಿರುವದು.

2 ಅರಸುಗಳು 7:6

ಕರ್ತನು ಪಾಳೆಯದಲ್ಲಿರುವ ಅರಾಮ್ಯರಿಗೆ ರಥಗಳ ಶಬ್ದವೂ ಕುದುರೆಗಳ ಶಬ್ದವೂ ಮಹಾಸೈನ್ಯದ ಶಬ್ದವೂ ಕೇಳಲ್ಪಡುವಂತೆ ಮಾಡಿದ್ದರಿಂದ ಅವರು ಒಬ್ಬರಿಗೊ ಬ್ಬರು--ಇಗೋ, ಇಸ್ರಾಯೇಲಿನ ಅರಸನು ನಮ್ಮ ಮೇಲೆ ಬೀಳಲು ಹಿತ್ತಿಯರ ಅರಸುಗಳನ್ನೂ ಐಗುಪ್ತದ ಅರಸುಗಳನ್ನೂ ಕೂಲಿಗೆ ಕರೆದಿದ್ದಾನೆ ಅಂದುಕೊಂಡರು.

ಹೊಶೇಯ 12:10

ನಾನು ಪ್ರವಾದಿಗಳ ಮುಖಾಂತರ ಸಹ ನಿನ್ನೊಂದಿಗೆ ಮಾತನಾಡಿದ್ದೇನೆ, ನಾನು ದರ್ಶನಗಳನ್ನು ಹೆಚ್ಚಿಸಿದ್ದೇನೆ, ಇದಲ್ಲದೆ ಪ್ರವಾದಿಗಳ ಸೇವೆಯ ಮುಖಾಂತರ ಸಾಮ್ಯಗಳನ್ನು ಉಪಯೋಗಿಸಿದ್ದೇನೆ.

ಮಲಾಕಿ 1:1

ಇಸ್ರಾಯೇಲಿಗೆ ಮಲಾಕಿಯಿಂದ ಉಂಟಾದ ಕರ್ತನ ವಾಕ್ಯದ ದೈವೋಕ್ತಿ.

Interlinear

Choose Theme