Home Bibles 1 ಅರಸುಗಳು 11:7 · ಕನ್ನಡ ಬೈಬಲ್
1 ಅರಸುಗಳು 11:7 · ಕನ್ನಡ ಬೈಬಲ್

ಆಗ ಸೊಲೊಮೋನನು ಮೋವಾಬಿನ ಅಸಹ್ಯಕರವಾದ ಕೆಮೋಷ್‌ಗೋಸ್ಕ ರವೂ ಅಮ್ಮೋನನ ಮಕ್ಕಳ ಅಸಹ್ಯಕರವಾದ ಮೋಲೆ ಕ್‌ನಿಗೋಸ್ಕರವೂ ಯೆರೂಸಲೇಮಿಗೆ ಎದುರಾಗಿರುವ ಬೆಟ್ಟದಲ್ಲಿ ಎತ್ತರವಾದ ಸ್ಥಳವನ್ನು ಕಟ್ಟಿಸಿದನು.

Cross references

ಆದಿಕಾಂಡ 33:2

ದಾಸಿಯರನ್ನೂ ಅವರ ಮಕ್ಕಳನ್ನೂ ಮುಂದುಗಡೆಯಲ್ಲಿಯೂ ಅವರ ಹಿಂದೆ ಲೇಯಳನ್ನೂ ಆಕೆಯ ಮಕ್ಕಳನ್ನೂ ಕಟ್ಟಕಡೆಯಲ್ಲಿ ರಾಹೇಲಳನ್ನೂ ಯೋಸೇಫನನ್ನೂ ಇರಿಸಿದನು.

ಲೇವ್ಯಕಾಂಡ 20:2

ನೀನು ತಿರಿಗಿ ಇಸ್ರಾಯೇಲ್‌ ಮಕ್ಕಳಿಗೆ ಹೀಗೆ ಹೇಳಬೇಕು--ಇಸ್ರಾಯೇಲ್‌ ಮಕ್ಕಳಲ್ಲಾಗಲಿ ಇಸ್ರಾಯೇಲಿ ನಲ್ಲಿ ಪ್ರವಾಸಿಯಾದ ಪರಕೀಯರಲ್ಲಾಗಲಿ ಯಾವನಾ ದರೂ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟರೆ ನಿಶ್ಚಯವಾಗಿ ಅವನಿಗೆ ಮರಣವನ್ನು ವಿಧಿಸಬೇಕು; ದೇಶದ ಜನರು ಅವನಿಗೆ ಕಲ್ಲೆಸೆಯಬೇಕು.

ಲೇವ್ಯಕಾಂಡ 26:30

ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳುಮಾಡಿ ನಿಮ್ಮ ಪ್ರತಿಮೆಗಳನ್ನು ಕಡಿದುಹಾಕಿ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು; ನನ್ನ ಪ್ರಾಣವು ನಿಮ್ಮನ್ನು ಹೇಸಿಕೊಳ್ಳು ವದು.

ಅಂಕೆಗಳ ಪುಸ್ತಕ 21:29

ಮೋವಾಬೇ, ನಿನಗೆ ಅಯ್ಯೋ! ಓ ಕೇಮೋಷಿನ ಜನವೇ, ನಿಮಗೆ ದುರ್ಗತಿ ಉಂಟಾಯಿತಲ್ಲಾ; ಅವನು ತಪ್ಪಿಸಿಕೊಂಡ ತನ್ನ ಕುಮಾರ ಕುಮಾರ್ತೆಯರನ್ನು ಅಮೋರಿಯರ ಅರಸನಾದ ಸೀಹೋನನ ಸೆರೆಗೆ ಕೊಟ್ಟನು.

ಅಂಕೆಗಳ ಪುಸ್ತಕ 33:52

ನೀವು ನಿಮ್ಮ ಮುಂದೆ ಆ ದೇಶದ ಸಮಸ್ತ ನಿವಾಸಿಗಳನ್ನು ಹೊರಡಿಸಿ ಅವರ ಚಿತ್ರಗಳನ್ನೂ ಅವರ ಕೆತ್ತಿದ ವಿಗ್ರಹಗಳನ್ನೂ ನಾಶಮಾಡಿ ಅವರ ಸಮಸ್ತ ಮೇಡುಗಳನ್ನೂ ಹಾಳುಮಾಡಬೇಕು.

ದ್ವಿತೀಯೋಪದೇಶಕಾಂಡ 13:14

ನೀನು ಹುಡುಕಿ ಶೋಧಿಸಿ ಚೆನ್ನಾಗಿ ವಿಚಾರಣೆ ಮಾಡಬೇಕು; ಆ ಕಾರ್ಯವು ನಿಶ್ಚಯವಾಗಿ ಸತ್ಯ ವಾದರೆ, ಅಂಥ ಅಸಹ್ಯವು ನಿಮ್ಮಲ್ಲಿ ನಡೆದದ್ದಾದರೆ,

ದ್ವಿತೀಯೋಪದೇಶಕಾಂಡ 17:3

ಸೂರ್ಯನನ್ನಾಗಲಿ, ಚಂದ್ರನನ್ನಾಗಲಿ, ಆಕಾಶದ ಎಲ್ಲಾ ಸೈನ್ಯವನ್ನಾಗಲಿ, ಬೇರೆ ದೇವರುಗಳನ್ನಾಗಲಿ ನನ್ನ ಆಜ್ಞೆಗೆ ವಿರೋಧವಾಗಿ ಸೇವಿಸಿ ಅವುಗಳಿಗೆ ಅಡ್ಡಬಿದ್ದ ಗಂಡಸಾದರೂ ಹೆಂಗಸಾದರೂ ನಿನ್ನ ದೇವ ರಾದ ಕರ್ತನು ನಿನಗೆ ಕೊಡುವ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಬಳಿಯಲ್ಲಿ ಸಿಕ್ಕಿದರೆ

ದ್ವಿತೀಯೋಪದೇಶಕಾಂಡ 27:15

ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್‌ ಎಂದು ಹೇಳಲಿ.

ನ್ಯಾಯಾಧಿಪತಿಗಳು 11:24

ನಿನ್ನ ದೇವರಾದ ಕೆಮೋಷನು ಸ್ವತಂತ್ರಿ ಸಿಕೊಳ್ಳಲು ನಿನಗೆ ಕೊಡುವ ದೇಶವನ್ನು ನೀನು ಸ್ವತಂತ್ರಿಸಿಕೊಳ್ಳುವದಿಲ್ಲವೋ? ಹಾಗೆಯೇ ನಮ್ಮ ದೇವರಾದ ಕರ್ತನು ಯಾರನ್ನು ನಮ್ಮ ಮುಂದೆ ಹೊರಡಿಸುವನೋ ಅವರನ್ನು ನಾವು ಸ್ವಾಧೀನಮಾಡಿ ಕೊಳ್ಳುವೆವು.

2 ಸಮುವೇಲ 15:30

ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿ ಕೊಂಡು ಬರಿಗಾಲಾಗಿ ಎಣ್ಣೆ ಮರಗಳ ಗುಡ್ಡವನ್ನು ಏರಿದನು; ಅವನ ಸಂಗಡ ಇರುವ ಎಲ್ಲಾ ಜನರೂ ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆರಿದರು.

1 ಅರಸುಗಳು 15:12

ಅವನು ಪುರುಷ ಸಂಗಮರನ್ನು ದೇಶದಲ್ಲಿಂದ ಹೊರಡಿಸಿ ತನ್ನ ಪಿತೃಗಳು ಮಾಡಿದ ಸಮಸ್ತ ವಿಗ್ರಹಗಳನ್ನು ತೆಗೆದುಹಾಕಿದನು.

2 ಅರಸುಗಳು 21:2

ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯ ಜನಾಂಗಗಳ ಅಸಹ್ಯವಾದವುಗಳ ಹಾಗೆಯೇ ಅವನು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದನು.

2 ಅರಸುಗಳು 23:10

ಯಾವನೂ ತನ್ನ ಮಗನನ್ನಾದರೂ ಮಗಳನ್ನಾದರೂ ಮೋಲೆಕನಿ ಗೋಸ್ಕರ ಬೆಂಕಿದಾಟಿಸದ ಹಾಗೆ ಹಿನ್ನೋಮನ ಮಕ್ಕಳ ತಗ್ಗಿನಲ್ಲಿದ್ದ ತೋಫೆತನ್ನು ಹೊಲೆಮಾಡಿದನು.

2 ಅರಸುಗಳು 23:13

ಇದಲ್ಲದೆ ಯೆರೂಸಲೇಮಿನ ಮುಂದೆ ಮೋಸದ ಬೆಟ್ಟದ ಬಲ ಪಾರ್ಶ್ವದಲ್ಲಿದ್ದ ಚೀದೋನ್ಯರ ಅಸಹ್ಯಕರವಾದ ಅಷ್ಟೋ ರೆತಿಗೂ ಮೋವಾಬ್ಯರ ಅಸಹ್ಯಕರವಾದ ಕೆಮೋಷ ನಿಗೂ ಅಮ್ಮೋನಿನ ಮಕ್ಕಳ ಅಸಹ್ಯಕರವಾದ ಮಿಲ್ಕೋ ಮ್‌ನಿಗೂ ಇಸ್ರಾಯೇಲಿನ ಅರಸನಾದ ಸೊಲೊ ಮೋನನು ಕಟ್ಟಿಸಿದ ಉನ್ನತ ಸ್ಥಳಗಳನ್ನೂ ಅರಸನು ಹೊಲೆಮಾಡಿ

ಕೀರ್ತನೆಗಳು 78:58

ತಮ್ಮ ಉನ್ನತ ಸ್ಥಳಗಳಿಂದ ಆತನಿಗೆ ಕೋಪವನ್ನೆಬ್ಬಿಸಿ ಕೆತ್ತಿದ ತಮ್ಮ ವಿಗ್ರಹಗಳಿಂದ ಆತನಿಗೆ ರೋಷವನ್ನೆಬ್ಬಿಸಿದರು.

ಯೆಶಾಯ 44:19

ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು; ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸವನ್ನು ಸುಟ್ಟು ತಿಂದೆ ನಲ್ಲಾ; ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ ಅಂದುಕೊಳ್ಳು ವಷ್ಟು ಜ್ಞಾನವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆತಾರರು.

ಯೆರೆಮಿಯ 48:13

ಬೊಚ್ರವು ಹಾಳೂ ನಿಂದೆಯೂ ಅಡವಿಯೂ ಶಾಪವೂ ಆಗುವದೆಂದು ಅದರ ಪಟ್ಟಣಗಳೆಲ್ಲಾ ಎಂದೆಂದಿಗೂ ಅಡವಿ ಸ್ಥಳಗಳಾ ಗುವವೆಂದೂ ನನ್ನ ಮೇಲೆ ಪ್ರಮಾಣ ಮಾಡಿಕೊಂಡಿದ್ದೇನೆಂದು ಕರ್ತನು ಅನ್ನುತ್ತಾನೆ.

ಯೆಹೆಜ್ಕೇಲ 18:12

ಬಡವರನ್ನೂ ದರಿದ್ರರನ್ನೂ ಉಪದ್ರಗೊಳಿಸಿ, ಹಿಂಸಿಸಿ, ಸುಲಿಗೆ ಮಾಡಿ ಒತ್ತೆಗಳನ್ನು ಹಿಂದಕ್ಕೆ ಕೊಡದೆ, ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತಿ ಅಸಹ್ಯ ವಾದವುಗಳನ್ನು ಮಾಡಿ;

ಯೆಹೆಜ್ಕೇಲ 20:28

ನಾನು ಕೈ ಎತ್ತಿ ಅವರಿಗೆ ಕೊಟ್ಟ ದೇಶದಲ್ಲಿ ನಾನು ಅವರನ್ನು ಬರಮಾಡಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ ಗಾತ್ರವಾದ ಮರಗಳನ್ನೂ ನೋಡಿ ಅಲ್ಲಿ ತಮ್ಮ ಬಲಿಗಳನ್ನರ್ಪಿಸಿ ಅಲ್ಲಿ ರೇಗಿಸುವ ತಮ್ಮ ಕಾಣಿಕೆಗಳನ್ನರ್ಪಿಸಿ ಸುವಾಸನೆ ಗಳನ್ನಿಟ್ಟು ಪಾನದ್ರವ್ಯವನ್ನು ಸುರಿದರು.

ದಾನಿಯೇಲ 11:31

ಅವನು ಕೂಡಿಸುವ ಸೈನ್ಯವು ಆಶ್ರಯ ದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ, ನಿತ್ಯ ಯಜ್ಞವನ್ನು ನೀಗಿಸಿ, ಹಾಳು ಮಾಡುವ ಅಸಹ್ಯವಾದವುಗಳನ್ನು ಪ್ರತಿಷ್ಠಿಸುವದು.

ದಾನಿಯೇಲ 12:11

ಪ್ರತಿದಿನದ ಯಜ್ಞವು ಸಕಾಲಕ್ಕೆ ತೆಗೆದುಹಾಕಲ್ಪಟ್ಟು ಹಾಳುಮಾಡುವಂಥ ಅಸಹ್ಯವು ಇರಿಸಲ್ಪಡುವ ವರೆಗೂ ಸಾವಿರದ ಇನ್ನೂರ ತೊಂಭತ್ತೊಂಭತ್ತು ದಿನಗಳು ಇರುವವು.

ಮೀಕ 1:5

ಇದೆಲ್ಲಾ ಯಾಕೋಬಿನ ಅಪರಾಧದ ನಿಮಿತ್ತವೂ ಇಸ್ರಾಯೇಲಿನ ಮನೆತನದ ವರ ಪಾಪಗಳ ನಿಮಿತ್ತವೂ ಆಯಿತು; ಯಾಕೋಬಿನ ಅಪರಾಧವೇನು? ಸಮಾರ್ಯವಲ್ಲವೋ? ಯೆಹೂ ದದ ಉನ್ನತಸ್ಥಳಗಳೇನು? ಯೆರೂಸಲೇಮಲ್ಲವೋ?

ಜೆಕರ್ಯ 14:4

ಆ ದಿನದಲ್ಲಿ ಆತನ ಪಾದಗಳು ಯೆರೂಸಲೇಮಿನ ಮುಂದೆ ಪೂರ್ವ ದಿಕ್ಕಿನಲ್ಲಿರುವ ಎಣ್ಣೇ ಮರದ ಗುಡ್ಡದ ಮೇಲೆ ನಿಲ್ಲುವವು; ಎಣ್ಣೇ ಮರದ ಗುಡ್ಡವು ಅದರ ನಡುವೆಯಿಂದ ಪೂರ್ವಕ್ಕೂ ಪಶ್ಚಿಮಕ್ಕೂ ಸೀಳಿ ಬಹುದೊಡ್ಡ ತಗ್ಗಾಗುವದು; ಅರ್ಧ ಗುಡ್ಡವು ಉತ್ತರಕ್ಕೂ ಅರ್ಧ ದಕ್ಷಿಣಕ್ಕೂ ಸರಿದು ಕೊಳ್ಳುವದು.

ಮತ್ತಾಯ 26:30

ತರುವಾಯ ಅವರು ಕೀರ್ತನೆ ಹಾಡಿ ಎಣ್ಣೇ ಮರಗಳ ಗುಡ್ಡಕ್ಕೆ ಹೋದರು.

ಅಪೋಸ್ತಲರ ಕೃತ್ಯಗಳು 1:9

ಇವುಗಳನ್ನು ಹೇಳಿದ ಮೇಲೆ ಅವರು ನೋಡುತ್ತಿರುವಾಗ ಆತನು ಮೇಲಕ್ಕೆ ಎತ್ತಲ್ಪಟ್ಟನು; ಮೋಡವು ಅವರ ದೃಷ್ಟಿಗೆ ಮರೆಮಾಡಿ ಆತನನ್ನು ಸ್ವೀಕರಿಸಿತು.

ಅಪೋಸ್ತಲರ ಕೃತ್ಯಗಳು 1:12

ತರುವಾಯ ಅವರು ಯೆರೂಸಲೇಮಿ ನಿಂದ ಸಬ್ಬತ್‌ ದಿನದ ಪ್ರಯಾಣದಷ್ಟು ದೂರವಿದ್ದ ಎಣ್ಣೇಮರಗಳ ತೋಪು ಎಂದು ಕರೆಯಲ್ಪಟ್ಟ ಗುಡ್ಡ ದಿಂದ ಯೆರೂಸಲೇಮಿಗೆ ಹಿಂದಿರುಗಿದರು.

ಅಪೋಸ್ತಲರ ಕೃತ್ಯಗಳು 7:43

ಹೌದು, ನೀವು ಪೂಜಿಸಬೇಕೆಂದು ಮಾಡಿಕೊಂಡ ಮೂರ್ತಿಗಳನ್ನು ಅಂದರೆ ಮೊಲೋಖನ ಗುಡಾರವನ್ನು ರೊಂಫಾ ದೇವತೆಯ ನಕ್ಷತ್ರವನ್ನೂ ಹೊತ್ತುಕೊಂಡು ಹೋದಿರಿ. ಆದದರಿಂದ ನಾನು ನಿಮ್ಮನ್ನು ಬಾಬೆಲಿನ ಆಚೆಗೆ ಅಟ್ಟಿಬಿಡುವೆನು ಎಂಬದು.

ಪ್ರಕಟನೆ 17:4

ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು

Interlinear

Choose Theme