Home Bibles 1 ಅರಸುಗಳು 14:23 · ಕನ್ನಡ ಬೈಬಲ್
1 ಅರಸುಗಳು 14:23 · ಕನ್ನಡ ಬೈಬಲ್

ಅವರು ಎತ್ತರವಾದ ಪ್ರತಿ ಗುಡ್ಡದ ಮೇಲೆಯೂ ಹಸುರಾದ ಪ್ರತಿ ಗಿಡದ ಕೆಳಗೂ ತೋಪು ಗಳನ್ನು ವಿಗ್ರಹಗಳನ್ನು ಉನ್ನತ ಸ್ಥಳಗಳನ್ನು ತಮಗಾಗಿ ಮಾಡಿಕೊಂಡರು. ಇದಲ್ಲದೆ ದೇಶದಲ್ಲಿ ಪುರುಷ ಸಂಗಮರಿದ್ದರು.

Cross references

ಲೇವ್ಯಕಾಂಡ 26:1

ನೀವು ನಿಮಗಾಗಿ ವಿಗ್ರಹಗಳನ್ನಾಗಲಿ ಕೆತ್ತಿದ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ; ನಿಲ್ಲಿಸುವ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ. ಕಲ್ಲಿನ ವಿಗ್ರಹಗಳನ್ನಾಗಲಿ ನಿಮ್ಮ ದೇಶದಲ್ಲಿಟ್ಟು ಕೊಂಡು ಅವುಗಳಿಗೆ ಅಡ್ಡ ಬೀಳಬೇಡಿರಿ. ನಿಮ್ಮ ದೇವರಾಗಿರುವ ಕರ್ತನು ನಾನೇ.

ದ್ವಿತೀಯೋಪದೇಶಕಾಂಡ 12:2

ನೀವು ಸ್ವಾಧೀನಮಾಡಿಕೊಳ್ಳುವ ಜನಾಂಗ ಗಳು ತಮ್ಮ ದೇವರುಗಳಿಗೆ ಎತ್ತರವಾದ ಬೆಟ್ಟಗಳ ಮೇಲೆಯೂ ಗುಡ್ಡಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಸೇವೆಮಾಡಿದ ಸ್ಥಳಗಳನ್ನು, ನೀವು ಪೂರ್ಣವಾಗಿ ನಾಶಮಾಡಬೇಕು.

ದ್ವಿತೀಯೋಪದೇಶಕಾಂಡ 16:22

ಯಾವ ವಿಗ್ರಹ ವನ್ನೂ ನಿಲ್ಲಿಸಬಾರದು; ಇದನ್ನು ನಿನ್ನ ದೇವರಾದ ಕರ್ತನು ಹಗೆಮಾಡುತ್ತಾನೆ.

1 ಅರಸುಗಳು 3:2

ಆದರೆ ಆ ಕಾಲದ ವರೆಗೂ ಕರ್ತನ ಹೆಸರಿಗೆ ಆಲಯ ಕಟ್ಟಲ್ಪಡದೆ ಇದ್ದದರಿಂದ ಜನರು ಎತ್ತರದ ಸ್ಥಳಗಳಲ್ಲಿ ಬಲಿ ಅರ್ಪಿಸುತ್ತಿದ್ದರು.

1 ಅರಸುಗಳು 3:3

ಸೊಲೊ ಮೋನನು ಕರ್ತನನ್ನು ಪ್ರೀತಿಮಾಡಿ ತನ್ನ ತಂದೆ ಯಾದ ದಾವೀದನ ಕಟ್ಟಳೆಗಳಲ್ಲಿ ನಡೆಯುತ್ತಾ ಇದ್ದರೂ ತಾನು ಎತ್ತರ ಸ್ಥಳಗಳಲ್ಲಿ ಬಲಿಯನ್ನೂ ಧೂಪವನ್ನೂ ಅರ್ಪಿಸುತ್ತಾ ಇದ್ದನು.

1 ಅರಸುಗಳು 12:31

ಇದಲ್ಲದೆ ಅವನು ಉನ್ನತ ಸ್ಥಳಗಳ ಒಂದು ಮನೆಯನ್ನು ಕಟ್ಟಿಸಿ ಲೇವಿಯ ಮಕ್ಕಳಲ್ಲದ ಜನರಲ್ಲಿ ಕನಿಷ್ಠ ಜನರೊಳಗಿಂದ ಯಾಜಕರನ್ನು ನೇಮಿಸಿ ದನು.

1 ಅರಸುಗಳು 14:15

ಆದರೆ ಈಗಲೇ ಏನು ಆಗುವದು? ನೀರಿನಲ್ಲಿರುವ ದಂಟು ಅಲ್ಲಾಡುವ ಹಾಗೆ ಕರ್ತನು ಇಸ್ರಾಯೇಲ್ಯರನ್ನು ಹೊಡೆಯುವನು. ಇಸ್ರಾ ಯೇಲ್ಯರು ಕರ್ತನಿಗೆ ಕೋಪವನ್ನು ಎಬ್ಬಿಸಲು ತಮ್ಮ ವಿಗ್ರಹಾರಾಧನೆಗೋಸ್ಕರ ತೋಪುಗಳನ್ನು ಹಾಕಿದ್ದ ರಿಂದ ಆತನು ಅವರ ತಂದೆಗಳಿಗೆ ಕೊಟ್ಟ ಈ ಉತ್ತಮ ದೇಶದಲ್ಲಿಂದ ಅವರನ್ನು ನಿರ್ಮೂಲ ಮಾಡಿ ನದಿಯ ಆಚೆಯಲ್ಲಿ ಅವರನ್ನು ಚದರುವಂತೆ ಮಾಡುವನು.

1 ಅರಸುಗಳು 15:12

ಅವನು ಪುರುಷ ಸಂಗಮರನ್ನು ದೇಶದಲ್ಲಿಂದ ಹೊರಡಿಸಿ ತನ್ನ ಪಿತೃಗಳು ಮಾಡಿದ ಸಮಸ್ತ ವಿಗ್ರಹಗಳನ್ನು ತೆಗೆದುಹಾಕಿದನು.

2 ಅರಸುಗಳು 16:4

ಇದಲ್ಲದೆ ಅವನು ಉನ್ನತ ಸ್ಥಳಗಳ ಮೇಲೆಯೂ ಬೆಟ್ಟಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಸಮರ್ಪಿಸಿದನು.

2 ಅರಸುಗಳು 17:9

ಇಸ್ರಾಯೇಲಿನ ಮಕ್ಕಳು ಗುಪ್ತವಾಗಿ ತಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಅಯುಕ್ತ ವಾದವುಗಳನ್ನು ಮಾಡಿ ಬರುವ ಸ್ಥಳಗಳು ಮೊದಲು ಗೊಂಡು ಕೋಟೆಯುಳ್ಳ ಪಟ್ಟಣಗಳ ವರೆಗೂ ತಮ್ಮ ಎಲ್ಲಾ ಪಟ್ಟಣಗಳಲ್ಲಿ ತಮಗೆ ಉನ್ನತ ಸ್ಥಳಗಳನ್ನು ಕಟ್ಟಿಸಿ ಕೊಂಡಿದ್ದರು.

2 ಅರಸುಗಳು 17:10

ಇದಲ್ಲದೆ ಅವರು ಎತ್ತರವಾದ ಎಲ್ಲಾ ಗುಡ್ಡಗಳಲ್ಲಿ ತೋಪುಗಳನ್ನು ಹಾಕಿ ಹಸುರಾದ ಎಲ್ಲಾ ಮರಗಳ ಕೆಳಗೂ ತಮಗೆ ವಿಗ್ರಹಗಳನ್ನು ನಿಲ್ಲಿಸಿ

2 ಅರಸುಗಳು 21:3

ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಉಂಟುಮಾಡಿ ಇಸ್ರಾಯೇಲಿನ ಅರಸನಾದ ಅಹಾಬನು ಮಾಡಿದ ಹಾಗೆ ವಿಗ್ರಹದ ತೋಪನ್ನು ಮಾಡಿ ಆಕಾಶದ ಎಲ್ಲಾ ಸೈನ್ಯಕ್ಕೆ ಅಡ್ಡಬಿದ್ದು ಅವುಗಳನ್ನು ಸೇವಿಸಿದನು.

2 ದಿನವೃತ್ತಾಂತ 24:18

ಅವರು ತಮ್ಮ ಪಿತೃಗಳ ದೇವರಾದ ಕರ್ತನ ಆಲಯವನ್ನು ಬಿಟ್ಟು ತೋಪುಗಳನ್ನೂ ವಿಗ್ರಹಗಳನ್ನೂ ಸೇವಿಸಿದರು. ಆದಕಾರಣ ಅವರ ಈ ಅಪರಾಧದ ನಿಮಿತ್ತ ಯೆಹೂದ ಮತ್ತು ಯೆರೂಸಲೇಮಿನ ಮೇಲೆ ರೌದ್ರ ಬಂತು.

2 ದಿನವೃತ್ತಾಂತ 28:4

ಹಾಗೆಯೇ ಅವನು ಬೆಟ್ಟಗಳಲ್ಲಿಯೂ ಮೇಡುಗಳ ಮೇಲೆಯೂ ಎಲ್ಲಾ ಹಸುರು ಗಿಡಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಅರ್ಪಿಸಿದನು.

ಯೆಶಾಯ 57:5

ಹಸಿರಾದ ಏಲಾ ಮರಗಳ ಕೆಳಗೆ ವಿಗ್ರಹಗಳಿಂದ ಮದವೇರಿಸಿ ಕೊಂಡು ಹಳ್ಳಗಳಲ್ಲಿ ಬಂಡೆಗಳ ಬಿರುಕುಗಳಲ್ಲಿ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಮಕ್ಕಳೂ ಸುಳ್ಳಿನ ಸಂತತಿಯೂ ಅಲ್ಲವೋ?

ಯೆರೆಮಿಯ 2:20

ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಟ್ಟೆನು; ನೀನು--ನಾನು ವಿಾರುವದಿಲ್ಲ ಎಂದು ನೀನು ಹೇಳಿದಿ; ಆದರೆ ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ನೀನು ಸೂಳೆಯಾಗಿ ಅಲೆದಾಡುತ್ತಿ.

ಯೆರೆಮಿಯ 3:13

ನಿನ್ನ ದೇವರಾದ ಕರ್ತನಿಗೆ ವಿರೋಧ ವಾಗಿ ದ್ರೋಹಮಾಡಿ ಒಂದೊಂದು ಹಸಿರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯರಿಗೆ ಚದರಿಸಿ ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆಮಾಡೆಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 17:2

ಎದ್ದು ಕುಂಬಾರನ ಮನೆಗೆ ಇಳಿದು ಹೋಗು; ಅಲ್ಲಿ ನಿನಗೆ ನನ್ನ ವಾಕ್ಯಗಳನ್ನು ಕೇಳಮಾಡುವೆನು ಎಂಬದೇ.

ಯೆಹೆಜ್ಕೇಲ 6:3

ಇಸ್ರಾಯೇ ಲಿನ ಪರ್ವತಗಳೇ, ದೇವರಾದ ಕರ್ತನ ವಾಕ್ಯವನ್ನು ಕೇಳಿರಿ; ದೇವರಾದ ಕರ್ತನು ಪರ್ವತಗಳಿಗೂ ಗುಡ್ಡ ಗಳಿಗೂ ನದಿಗಳಿಗೂ ಕಣಿವೆಗಳಿಗೂ ಹೀಗೆ ಹೇಳು ತ್ತಾನೆ--ಇಗೋ, ನಾನು, ನಾನೇ ನಿಮ್ಮ ಮೇಲೆ ಕತ್ತಿ ಯನ್ನು ತಂದು ನಿಮ್ಮ ಎತ್ತರ ಸ್ಥಳಗಳನ್ನು (ಮೇಡುಗ ಳನ್ನು) ನಾಶಮಾಡುತ್ತೇನೆ.

ಯೆಹೆಜ್ಕೇಲ 6:6

ನಿಮ್ಮ ನಗರದಲ್ಲಿ ವಾಸಮಾಡುವ ನಿಮ್ಮ ಎಲ್ಲಾ ಸ್ಥಳಗಳು ಹಾಳುಮಾಡಲ್ಪಡುವವು; ಎತ್ತರವಾದ ಸ್ಥಳಗಳೂ ನಾಶ ಮಾಡಲ್ಪಡುವವು; ಹೀಗೆ ನಿಮ್ಮ ಯಜ್ಞವೇದಿಗಳು ನಾಶವಾಗಿಯೂ ಹಾಳಾಗಿಯೂ ಹೋಗುವವು. ನಿಮ್ಮ ವಿಗ್ರಹಗಳು ಒಡೆಯಲ್ಪಟ್ಟು ಇಲ್ಲದಂತಾಗುವವು. ನೀವು ರೂಪಿಸಿದ ಪ್ರತಿಮೆಗಳು ಕಡಿದುಹಾಕಲ್ಪಟ್ಟು ಅಳಿಸ ಲ್ಪಡುವವು.

ಯೆಹೆಜ್ಕೇಲ 6:13

ಆಮೇಲೆ ನೀವು ಅವರಲ್ಲಿ ಹತವಾದ ಮನುಷ್ಯರು ಅವರಲ್ಲಿರುವಾಗ ಅವರ ವಿಗ್ರಹಗಳ ಮಧ್ಯದಲ್ಲಿ ಅವರ ಯಜ್ಞವೇದಿಗಳ ಸುತ್ತ ಲಾಗಿಯೂ ಎತ್ತರವಾದ ಪ್ರತಿಯೊಂದು ಗುಡ್ಡದ ಮೇಲೆಯೂ ಸಮಸ್ತ ಪರ್ವತಗಳ ತುದಿಯಲ್ಲಿಯ ಪ್ರತಿಯೊಂದು ಹಸುರಾದ ಮರದ ಕೆಳಗೂ ಪ್ರತಿ ಯೊಂದು ದಪ್ಪವಾದ ಓಕ್‌ ಮರದ ಕೆಳಗಡೆಯೂ ಅವರು ತಮ್ಮ ವಿಗ್ರಹಗಳಿಗೆಲ್ಲಾ ಸುವಾಸನೆಯನ್ನು ಅರ್ಪಿಸುವದರಲ್ಲಿಯೂ ನಾನೇ ಕರ್ತನೆಂದು ತಿಳಿಯು ವಿರಿಹೀಗೆ ನಾನು ನನ್ನ ಕೈಯನ್ನು ಅವರ ಮೇಲೆ ಚಾಚಿ ಅವರ ದೇಶವನ್ನು ನಾಶಮಾಡುವೆನು. ಹೌದು, ಅವರ ಎಲ್ಲಾ ನಿವಾಸಸ್ಥಳಗಳನ್ನು ದಿಬ್ಲದ ಅರಣ್ಯ ಕ್ಕಿಂತಲೂ ಹೆಚ್ಚಾಗಿ ಹಾಳುಮಾಡುವೆನು; ನಾನೇ ಕರ್ತನೆಂದು ಅವರು ತಿಳಿದುಕೊಳ್ಳುವರು.

ಯೆಹೆಜ್ಕೇಲ 16:24

ನೀನು ಪ್ರತಿಯೊಂದು ಬೀದಿಯಲ್ಲಿಯೂ ಉನ್ನತ ಸ್ಥಳಗಳನ್ನು ಕಟ್ಟಿ ನಿನಗೆ ಉತ್ತಮವಾದ ಸ್ಥಳಗ ಳನ್ನು ಮಾಡಿಕೊಂಡಿರುವಿ.

ಯೆಹೆಜ್ಕೇಲ 20:28

ನಾನು ಕೈ ಎತ್ತಿ ಅವರಿಗೆ ಕೊಟ್ಟ ದೇಶದಲ್ಲಿ ನಾನು ಅವರನ್ನು ಬರಮಾಡಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ ಗಾತ್ರವಾದ ಮರಗಳನ್ನೂ ನೋಡಿ ಅಲ್ಲಿ ತಮ್ಮ ಬಲಿಗಳನ್ನರ್ಪಿಸಿ ಅಲ್ಲಿ ರೇಗಿಸುವ ತಮ್ಮ ಕಾಣಿಕೆಗಳನ್ನರ್ಪಿಸಿ ಸುವಾಸನೆ ಗಳನ್ನಿಟ್ಟು ಪಾನದ್ರವ್ಯವನ್ನು ಸುರಿದರು.

ಮೀಕ 5:14

ನಿನ್ನ ತೋಪುಗಳನ್ನು ನಿನ್ನ ಮಧ್ಯ ದೊಳಗಿಂದ ಕಿತ್ತುಹಾಕಿ ನಿನ್ನ ಪಟ್ಟಣಗಳನ್ನು ನಾಶ ಮಾಡುವೆನು.ಇದಲ್ಲದೆ ಕಿವಿಗೊಡದೆ ಇದ್ದ ಜನಾಂಗಗಳಿಗೆ ಕೋಪದಿಂದಲೂ ಉಗ್ರದಿಂದಲೂ ಮುಯ್ಯಿ ತೀರಿಸುವೆನು.

Interlinear

Choose Theme