ಆದರೆ ರೆಹಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಯೆಹೂದ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
Cross references
ಸೊಲೊಮೋನನ ಉಳಿದ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನ ಜ್ಞಾನವೂ ಸೊಲೊಮೋನನ ಕ್ರಿಯೆಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
ಯಾರೊಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಯುದ್ಧ ಮಾಡಿದ್ದೂ ಆಳಿದ್ದೂ--ಇಗೋ, ಇವು ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕ ದಲ್ಲಿ ಬರೆಯಲ್ಪಟ್ಟಿವೆ.
ಅಬೀಯಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟವಲ್ಲವೋ?
ಅಬೀಯಾಮನಿಗೂ ಯಾರೂಬ್ಬಾಮನಿಗೂ ಯುದ್ಧ ನಡೆಯುತ್ತಿತ್ತು.
ಆಸನ ಮಿಕ್ಕಾದ ಎಲ್ಲಾ ಕ್ರಿಯೆಗಳೂ ಅವನ ಸಮಸ್ತ ಪರಾಕ್ರಮವೂ ಅವನು ಮಾಡಿದ್ದೆಲ್ಲವೂ ಅವನು ಕಟ್ಟಿಸಿದ ಪಟ್ಟಣಗಳೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯ ಲ್ಪಡಲಿಲ್ಲವೋ? ಆದರೆ ತನ್ನ ವೃದ್ದಾಪ್ಯದ ಕಾಲದಲ್ಲಿ ಅವನು ತನ್ನ ಕಾಲುಗಳಲ್ಲಿ ಅಸ್ವಸ್ಥನಾಗಿದ್ದನು.
ಯೆಹೋಷಾಫಾಟನ ಇತರ ಕ್ರಿಯೆ ಗಳೂ ಅವನು ತೋರಿಸಿದ ಪರಾಕ್ರಮವೂ ಅವನು ಯುದ್ಧ ಮಾಡಿದ ವಿಧವೂ ಯೆಹೂದದ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
ಅವನ ತಂದೆಯಾದ ಆಸನ ದಿವಸಗಳಲ್ಲಿ ಉಳಿದ ಪುರುಷಗಾಮಿಗಳನ್ನು ಅವನು ದೇಶದಿಂದ ತೆಗೆದು ಹಾಕಿದನು.
ಯೆಹೋರಾಮನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಯೆಹೂದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪ ಡಲಿಲ್ಲವೋ?
ಆದರೆ ಅವನ ಸೇವಕರು ಎದ್ದು ಒಳಸಂಚುಮಾಡಿ ಸಿಲ್ಲಾಗೆ ಇಳಿದು ಹೋಗುವ ಮಾರ್ಗವಾದ ಮಿಲ್ಲೋವು ಎಂಬ ಮನೆಯಲ್ಲಿ ಯೆಹೋವಾಷನನ್ನು ಕೊಂದುಹಾಕಿದರು.ಅವನ ಸೇವಕರಾದ ಶಿಮೆಯಾತನ ಮಗನಾದ ಯೊಜಾಕಾರನೂ, ಶೋಮೇರನ ಮಗನಾದ ಯೆಹೋ ಜಾಬಾದನೂ ಅವನನ್ನು ಹೊಡೆದದ್ದರಿಂದ ಅವನು ಸತ್ತುಹೋದನು. ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.
ಅಮಚ್ಯನ ಇತರ ಕ್ರಿಯೆಗಳು ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
ಅಜರ್ಯನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
ಇಗೋ, ಶಲ್ಲೂಮನ ಇತರ ಕ್ರಿಯೆಗಳೂ ಅವನು ಮಾಡಿದ ಒಳಸಂಚೂ ಇಸ್ರಾಯೇಲಿನ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
ಯೋತಾಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
ಆದರೆ ಆಹಾಜನು ಮಾಡಿದ ಇತರ ಕ್ರಿಯೆಗಳು ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು. ಅವನನ್ನು ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು. ಅವನ ಮಗನಾದ ಹಿಜ್ಕೀಯನು ಅವ ನಿಗೆ ಬದಲಾಗಿ ಅರಸನಾದನು.
ಹಿಜ್ಕೀಯನ ಇತರ ಕ್ರಿಯೆಗಳೂ ಅವನ ಎಲ್ಲಾ ಪರಾಕ್ರಮವೂ ಅವನು ಕೆರೆಯನ್ನೂ ನಾಲೆ ಯನ್ನೂ ಮಾಡಿಸಿ ಪಟ್ಟಣದಲ್ಲಿ ನೀರನ್ನು ಬರ ಮಾಡಿದ್ದೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು;ಅವನ ಮಗನಾದ ಮನಸ್ಸೆಯು ಅವನಿಗೆ ಬದಲಾಗಿ ಅರಸ ನಾದನು.
ಮನಸ್ಸೆಯ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಅವನು ಮಾಡಿದ ಪಾಪವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
ಆಮೋನನು ಮಾಡಿದ ಅವನ ಇತರ ಕ್ರಿಯೆಗಳು ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?ಅವನ ಶವವನ್ನು ಉಜ್ಜನ ತೋಟದಲ್ಲಿದ್ದ ಸಮಾಧಿ ಯಲ್ಲಿ ಹೂಣಿಟ್ಟರು. ಅವನ ಮಗನಾದ ಯೋಷೀ ಯನು ಅವನಿಗೆ ಬದಲಾಗಿ ಅರಸನಾದನು.
ಯೋಷೀಯನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತಾಂತ ಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
ಯೆಹೋಯಾ ಕೀಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
ರೆಹಬ್ಬಾಮನ ಕ್ರಿಯೆಗಳು ಮೊದಲನೆಯವು ಗಳೂ ಕಡೆಯವುಗಳೂ ಪ್ರವಾದಿಯಾದ ಶೆಮಾಯನ ಪುಸ್ತಕದಲ್ಲಿಯೂ ವಂಶಾವಳಿಗಳನ್ನು ಕುರಿತು ಬರೆದ ದರ್ಶಿಯಾದ ಇದ್ದೋನ ಪುಸ್ತಕದಲ್ಲಿಯೂ ಬರೆಯ ಲ್ಪಟ್ಟವಲ್ಲವೇ? ಇದಲ್ಲದೆ ರೆಹಬ್ಬಾಮನಿಗೂ ಯಾರೊ ಬ್ಬಾಮನಿಗೂ ಯಾವಾಗಲೂ ಯುದ್ಧಉಂಟಾಗಿತ್ತು.ರೆಹಬ್ಬಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗ ನಾದ ಅಬೀಯನು ಅವನಿಗೆ ಬದಲಾಗಿ ಆಳಿದನು.
ಆದರೆ ಅಮಚ್ಯನ ಮಿಕ್ಕಾದ ಕ್ರಿಯೆಗಳು, ಮೊದಲನೆಯವು ಗಳೂ ಕಡೆಯವುಗಳೂ ಇಗೋ, ಅವು ಯೆಹೂದ ಇಸ್ರಾಯೇಲ್ಯರ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?