ರೆಹಬ್ಬಾಮನು ತನ್ನ ಪಿತೃಗಳ ಸಂಗಡ ಮಲಗಿದನು. ದಾವೀದನ ಪಟ್ಟಣದಲ್ಲಿ ಅವನು ಹೂಣಿಡಲ್ಪಟ್ಟನು. ಅವನ ತಾಯಿ ಅಮ್ಮೋನ್ಯಳಾದ ನಯಮಾಳೆಂಬ ಹೆಸರುಳ್ಳವಳಾ ಗಿದ್ದಳು. ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಆಳಿದನು.
Cross references
ಹೀಗೆಯೇ ದಾವೀದನು ತನ್ನ ಪಿತೃಗಳ ಸಂಗಡ ಮಲಗಿಕೊಂಡನು; ಅವನು ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು.
ಅರಸನಾದ ಸೊಲೊಮೋನನು ಫರೋಹನ ಮಗಳಲ್ಲದೆ ಅನ್ಯ ಜನಾಂಗಗಳ ಸ್ತ್ರೀಯರಾದ--ಮೋವಾಬ್ಯರು ಅಮ್ಮೋನ್ಯರು ಎದೋ ಮ್ಯರು ಚೀದೋನ್ಯರು ಹಿತ್ತಿಯರನ್ನೂ ಮೋಹಿಸಿದನು.
ಸೊಲೊಮೋನನು ತನ್ನ ಪಿತೃ ಗಳ ಸಂಗಡ ಮಲಗಿದನು; ಅವನು ತನ್ನ ತಂದೆ ಯಾದ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗನಾದ ರೆಹಬ್ಬಾಮನು ಅವನಿಗೆ ಬದಲಾಗಿ ಆಳಿದನು.
ಯಾರೊಬ್ಬಾಮನು ಆಳಿದ ದಿವಸಗಳು ಇಪ್ಪತ್ತೆರಡು ವರುಷಗಳಾಗಿದ್ದವು. ಅವನು ತನ್ನ ಪಿತೃಗಳ ಸಂಗಡ ಮಲಗಿದನು. ಅವನ ಮಗನಾದ ನಾದಾಬನು ಅವನಿಗೆ ಬದಲಾಗಿ ಆಳಿದನು.
ನೆಬಾಟನ ಮಗನಾಗಿರುವ ಅರಸನಾದ ಯಾರೊಬ್ಬಾಮನ ಹದಿನೆಂಟನೇ ವರುಷ ದಲ್ಲಿ ಅಬೀಯಾಮನು ಯೆಹೂದದ ಮೇಲೆ ಆಳುತ್ತಿ ದ್ದನು.
ಆದರೆ ತನ್ನ ಪಿತೃವಾದ ದಾವೀದನ ಹೃದಯದ ಪ್ರಕಾರ ತನ್ನ ಹೃದಯವು ತನ್ನ ದೇವರಾದ ಕರ್ತನ ಮುಂದೆ ಪೂರ್ಣವಾಗಿರದೆ ತನಗೆ ಮುಂಚಿದ್ದ ತನ್ನ ತಂದೆ ಮಾಡಿದ ಸಮಸ್ತ ಪಾಪಗಳಲ್ಲಿ ನಡೆದನು.
ಆಸನು ತನ್ನ ಪಿತೃಗಳ ಸಂಗಡ ಮಲಗಿದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ತನ್ನ ಪಿತೃಗಳ ಸಂಗಡ ಹೂಣಿಡಲ್ಪಟ್ಟನು. ಅವನಿಗೆ ಬದ ಲಾಗಿ ಅವನ ಮಗನಾದ ಯೆಹೋಷಾಫಾಟನು ಆಳಿದನು.
ಯೆಹೋಷಾಫಾಟನು ತನ್ನ ಪಿತೃಗಳ ಸಂಗಡ ಮಲಗಿದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ತನ್ನ ಪಿತೃಗಳ ಸಂಗಡ ಹೂಣ ಲ್ಪಟ್ಟನು. ಆಗ ಅವನ ಮಗನಾದ ಯೆಹೋರಾಮನು ಅವನಿಗೆ ಬದಲಾಗಿ ಆಳಿದನು.
ಸೊಲೊಮೋನನ ಮಗನು ರೆಹಬ್ಬಾಮನು; ಇವನ ಮಗನು ಅಬೀಯನು; ಇವನ ಮಗನು ಆಸನು; ಇವನ ಮಗನು ಯೆಹೋಷಾಫಾಟನು.
ರೆಹಬ್ಬಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗ ನಾದ ಅಬೀಯನು ಅವನಿಗೆ ಬದಲಾಗಿ ಆಳಿದನು.
ಸೊಲೊಮೋನನಿಂದ ರೆಹಬ್ಬಾಮನು ಹುಟ್ಟಿದನು; ರೆಹಬ್ಬಾಮನಿಂದ ಅಬೀಯನು ಹುಟ್ಟಿದನು; ಅಬೀಯನಿಂದ ಆಸನು ಹುಟ್ಟಿದನು;