Home Bibles 1 ಅರಸುಗಳು 15:18 · ಕನ್ನಡ ಬೈಬಲ್
1 ಅರಸುಗಳು 15:18 · ಕನ್ನಡ ಬೈಬಲ್

ಆಗ ಆಸನು ಕರ್ತನ ಮಂದಿರದ ಬೊಕ್ಕಸಗಳನ್ನೂ ಮಿಕ್ಕ ಸಮಸ್ತ ಬೆಳ್ಳಿ ಬಂಗಾರವನ್ನು ಅರಮನೆಯ ಬೊಕ್ಕಸಗಳಲ್ಲಿ ತೆಗೆದು ತನ್ನ ಸೇವಕರ ಕೈಯಲ್ಲಿ ಒಪ್ಪಿಸಿ ದಮಸ್ಕ ಪಟ್ಟಣದಲ್ಲಿ ವಾಸವಾಗಿರುವ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆಗಿರುವ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿ--ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆ ಉಂಟಲ್ಲಾ.

Cross references

ಆದಿಕಾಂಡ 14:15

ರಾತ್ರಿಯಲ್ಲಿ ಅವರಿಗೆ ವಿರೋಧ ವಾಗಿ ತನ್ನ ಸೇವಕರ ಸೈನ್ಯವನ್ನು ವಿಭಾಗಿಸಿ ಅವರನ್ನು ಹೊಡೆದು ದಮಸ್ಕದ ಬಲಗಡೆಯಲ್ಲಿರುವ ಹೋಬಾದ ವರೆಗೆ ಅವರನ್ನು ಸಂಹರಿಸಿ

ಆದಿಕಾಂಡ 15:2

ಅದಕ್ಕೆ ಅಬ್ರಾಮನು--ಕರ್ತನಾದ ದೇವರೇ, ನನಗೆ ಏನು ಕೊಟ್ಟರೇನು? ನಾನು ಮಕ್ಕಳಿಲ್ಲದವನಾಗಿದ್ದೇನೆ. ಈ ದಮಸ್ಕದವನಾದ ಎಲೀಯೆಜರನು ನನ್ನ ಮನೆಯ ಮನೆವಾರ್ತೆಯವನಾ ಗಿದ್ದಾನಲ್ಲಾ ಅಂದನು.

1 ಅರಸುಗಳು 11:23

ಇದಲ್ಲದೆ ದೇವರು ಮತ್ತೊಬ್ಬ ಶತ್ರುವನ್ನು ಅವನ ಮೇಲೆ ಎಬ್ಬಿಸಿದನು. ಅವನು ಯಾರಂದರೆ ಚೋಬದ ಅರಸನಾದ ತನ್ನ ಯಜಮಾನನಾಗಿರುವ ಹದದೇಜರ ನನ್ನು ಬಿಟ್ಟು ಓಡಿಹೋದ ಎಲ್ಯದಾವನ ಮಗನಾದ ರೆಜೋನನು.

1 ಅರಸುಗಳು 11:24

ದಾವೀದನು ಚೋಬದ ಜನರನ್ನು ಸಂಹರಿಸುವಾಗ ಇವನು ಮನುಷ್ಯರನ್ನು ತನ್ನ ಬಳಿಯಲ್ಲಿ ಕೂಡಿಸಿಕೊಂಡು ಒಂದು ಗುಂಪಿಗೆ ಅಧಿಪತಿಯಾದನು. ಇವನು ಅವರ ಸಂಗಡ ದಮಸ್ಕಕ್ಕೆ ಹೋಗಿ ಅಲ್ಲಿ ವಾಸಿಸಿ ದಮಸ್ಕದಲ್ಲಿ ಆಳುತ್ತಾ ಇದ್ದನು.

1 ಅರಸುಗಳು 14:26

ಅವನು ಕರ್ತನ ಮಂದಿರದ ಬೊಕ್ಕಸಗಳನ್ನೂ ಅರ ಸರ ಮನೆಯ ಬೊಕ್ಕಸಗಳನ್ನೂ ತೆಗೆದುಕೊಂಡದ್ದಲ್ಲದೆ ಸಮಸ್ತವನ್ನೂ ತೆಗೆದುಕೊಂಡನು. ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತಕ್ಕೊಂಡು ಹೋದನು.

1 ಅರಸುಗಳು 15:15

ತಾನೂ ತನ್ನ ತಂದೆಯೂ ಅರ್ಪಿಸಿದ ಬೆಳ್ಳಿಯೂ ಬಂಗಾರವೂ ಸಾಮಾನುಗಳೂ ಅಂತೂ ಪ್ರತಿಷ್ಠಿಸಿದವುಗಳನ್ನು ಅವನು ಕರ್ತನ ಮಂದಿರಕ್ಕೆ ತಂದನು.

1 ಅರಸುಗಳು 20:1

ಅರಾಮಿನ ಅರಸನಾದ ಬೆನ್ಹದದನು ತನ್ನ ಸೈನ್ಯವನ್ನೆಲ್ಲಾ ಕೂಡಿಸಿದನು. ಅವನ ಬಳಿ ಯಲ್ಲಿ ಕುದುರೆಗಳೂ ರಥಗಳೂ ಸಹಿತವಾಗಿ ಮೂವತ್ತೆರಡು ಮಂದಿ ಅರಸುಗಳಿದ್ದರು. ಅವನು ಏರಿ ಹೋಗಿ ಸಮಾರ್ಯವನ್ನು ಮುತ್ತಿಗೆ ಹಾಕಿ ಅದರ ಮೇಲೆ ಯುದ್ಧಮಾಡಿದನು.

1 ಅರಸುಗಳು 20:33

ಈಗ ಆ ಮನುಷ್ಯರು ಅವನ ಮಾತಿನಲ್ಲಿ ಏನಾದರೂ ಬಂದೀತೆಂದು ಜಾಗ್ರೆತೆ ಯಿಂದ ನೋಡಿಕೊಂಡು ಅದನ್ನು ಅವಸರದಿಂದ ಹಿಡಿದರು. ಅವರು--ನಿನ್ನ ಸಹೋದರನಾದ ಬೆನ್ಹದ ದನು ಎಂದು ಹೇಳಿದರು. ಆಗ ಅವನು--ನೀವು ಹೋಗಿ ಅವನನ್ನು ಕರೆತನ್ನಿರಿ ಅಂದನು. ಬೆನ್ಹದದನು ಅವನ ಬಳಿಗೆ ಬಂದಾಗ ಅವನು ಇವನನ್ನು ರಥದ ಲ್ಲೇರ ಮಾಡಿದನು.

2 ಅರಸುಗಳು 8:7

ಅರಾಮ್ಯರ ಅರಸನಾದ ಬೆನ್ಹದದನು ಅಸ್ವಸ್ಥನಾ ಗಿರುವಾಗ ಎಲೀಷನು ದಮಸ್ಕಕ್ಕೆ ಬಂದನು. ದೇವರ ಮನುಷ್ಯನು ಇಲ್ಲಿಗೆ ಬಂದಿದ್ದಾನೆಂದು ಅವನಿಗೆ ತಿಳಿಸ ಲ್ಪಟ್ಟಿತು.

2 ಅರಸುಗಳು 12:18

ಆಗ ಯೆಹೂದದ ಅರಸನಾದ ಯೆಹೋವಾಷನೂ ಯೆಹೂದದ ಅರಸುಗಳಾಗಿರುವ ತನ್ನ ತಂದೆಗಳಾದ ಯೆಹೋಷಾಫಾಟನೂ ಯೆಹೋರಾಮನೂ ಅಹ ಜ್ಯನೂ ಅರ್ಪಿಸಿದ ಎಲ್ಲಾ ಪ್ರತಿಷ್ಠಿತವಾದವುಗಳನ್ನೂ ತಾನು ಪರಿಶುದ್ಧ ಮಾಡಿದವುಗಳನ್ನೂ ಕರ್ತನ ಮನೆಯ ಬೊಕ್ಕಸದಲ್ಲಿಯೂ ಅರಸನ ಮನೆಯಲ್ಲಿಯೂ ಸಿಕ್ಕಿದ ಸಕಲ ಬಂಗಾರವನ್ನೂ ತಕ್ಕೊಂಡು ಅರಾಮ್ಯರ ಅರಸ ನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟುಹೋದನು.

2 ಅರಸುಗಳು 12:19

ಯೆಹೋವಾಷನ ಇತರ ಕಾರ್ಯಗಳೂ ಅವನು ಮಾಡಿದ್ದೆಲ್ಲವೂ ಯೆಹೂದದ ಅರಸುಗಳ ವೃತಾಂತ ಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

2 ಅರಸುಗಳು 18:15

ಆದದರಿಂದ ಹಿಜ್ಕೀಯನು ಕರ್ತನ ಮನೆಯಲ್ಲಿಯೂ ಅರಸನ ಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಎಲ್ಲಾ ಬೆಳ್ಳಿ ಯನ್ನು ಕೊಟ್ಟನು.

2 ದಿನವೃತ್ತಾಂತ 15:18

ಅವನು ದೇವರ ಆಲಯದಲ್ಲಿ ತನ್ನ ತಂದೆಯೂ ತಾನೂ ಪರಿಶುದ್ಧ ಮಾಡಿದ ಬೆಳ್ಳಿಯನ್ನೂ ಬಂಗಾರವನ್ನೂ ಪಾತ್ರೆಗಳನ್ನೂ ಸೇರಿಸಿದನು.ಆಸನ ಆಳ್ವಿಕೆಯಲ್ಲಿ ಮೂವತ್ತೈದನೇ ವರುಷದ ಪರಿಯಂತರ ಯುದ್ಧವಿಲ್ಲದೆ ಇತ್ತು.

2 ದಿನವೃತ್ತಾಂತ 16:2

ಆಗ ಆಸನು ಕರ್ತನ ಆಲಯದ ಬೊಕ್ಕಸಗಳಿಂದಲೂ ಅರಸನ ಮನೆಯ ಬೊಕ್ಕಸದಿಂದಲೂ ಬೆಳ್ಳಿಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿ ವಾಸವಾಗಿರುವ ಅರಾಮಿನ ಅರಸನಾದ ಬೆನ್ಹದದನ ಬಳಿಗೆ ಕಳುಹಿಸಿ ಅವನಿಗೆ--ನನ್ನ ತಂದೆಗೂ ನಿನ್ನ ತಂದೆಗೂ ಇದ್ದ ಹಾಗೆ ನನಗೂ ನಿನಗೂ ಒಡಂಬಡಿಕೆ ಉಂಟು.

ಯೆರೆಮಿಯ 49:27

ಅದರ ಹೋರಿಗಳನ್ನೆಲ್ಲಾ ಕೊಂದುಹಾಕಿರಿ; ಅವು ಕೊಲೆಗೆ ಇಳಿಯಲಿ; ಅವರಿಗೆ ಅಯ್ಯೋ! ಅವರ ದಿನವೂ ಅವರ ವಿಚಾರಣೆಯ ಕಾಲವೂ ಬಂತು.

ಆಮೋಸ 1:4

ಆದರೆ ನಾನು ಹಜಾಯೇಲನ ಮನೆಯೊಳಗೆ ಬೆಂಕಿಯನ್ನು ಕಳುಹಿಸುತ್ತೇನೆ; ಅದು ಬೆನ್ಹದದನ ಅರಮನೆಗಳನ್ನು ನುಂಗಿಬಿಡುವದು.

Interlinear

Choose Theme