Home Bibles 1 ಅರಸುಗಳು 16:30 · ಕನ್ನಡ ಬೈಬಲ್
1 ಅರಸುಗಳು 16:30 · ಕನ್ನಡ ಬೈಬಲ್

ಆದರೆ ಒಮ್ರಿಯ ಮಗನಾದ ಅಹಾಬನು ತನಗೆ ಮುಂಚೆ ಇದ್ದ ಎಲ್ಲರಿಗಿಂತ ಕರ್ತನ ಮುಂದೆ ಹೆಚ್ಚು ಕೆಟ್ಟತನಮಾಡಿದನು.

Cross references

1 ಅರಸುಗಳು 14:9

ನೀನು ಹೋಗಿ ನನಗೆ ಕೋಪ ವನ್ನೆಬ್ಬಿಸುವ ಅನ್ಯ ದೇವರುಗಳನ್ನೂ ಎರಕ ಹೊಯ್ಯ ಲ್ಪಟ್ಟ ವಿಗ್ರಹಗಳನ್ನೂ ನಿನಗೆ ಮಾಡಿಕೊಂಡು ನನ್ನನ್ನು ನಿನ್ನ ಬೆನ್ನಿನ ಹಿಂದಕ್ಕೆ ಹಾಕಿದಿ.

1 ಅರಸುಗಳು 16:25

ಆದರೆ ಒಮ್ರಿಯು ಕರ್ತನ ಸಮ್ಮುಖದಲ್ಲಿ ಕೆಟ್ಟತನ ಮಾಡಿ ತನಗೆ ಮುಂಚೆ ಇದ್ದ ಎಲ್ಲರಿಗಿಂತ ಕೆಟ್ಟವನಾಗಿ ನಡೆದನು.

1 ಅರಸುಗಳು 16:31

ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಲ್ಲಿ ನಡೆಯು ವದು ಅವನಿಗೆ ಅಲ್ಪವಾಗಿತ್ತು; ಅವನು ಚೀದೋನ್ಯರ ಅರಸನಾಗಿರುವ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡ ಬಿದ್ದನು.

1 ಅರಸುಗಳು 16:33

ಅಹಾಬನು ತೋಪನ್ನು ಹಾಕಿಸಿದನು. ಹೀಗೆಯೆ ಅಹಾಬನು ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸುವ ಹಾಗೆ ತನಗೆ ಮುಂಚಿನ ಇಸ್ರಾಯೇಲಿನ ಅರಸುಗಳೆಲ್ಲರಿಗಿಂತ ಅಧಿಕ ವಾಗಿ ಕೆಟ್ಟತನಮಾಡಿದನು.ಅವನ ದಿವಸಗಳಲ್ಲಿ ಬೇತೇಲಿನವನಾದ ಹೀಯೇ ಲನು ಯೆರಿಕೋವನ್ನು ಕಟ್ಟಿಸಿದನು; ಕರ್ತನು ನೂನನ ಮಗನಾದ ಯೆಹೋಶುವನ ಮುಖಾಂತರ ಹೇಳಿದ್ದ ವಾಕ್ಯದ ಪ್ರಕಾರವೇ ಅವನು ಅದಕ್ಕೆ ಅಸ್ತಿವಾರವನ್ನು ಹಾಕಿದಾಗ ತನ್ನ ಚೊಚ್ಚಲ ಮಗನಾದ ಅಬೀರಾಮನೂ ಅದರ ಬಾಗಲುಗಳನ್ನು ಇಟ್ಟಾಗ ಅವನ ಚಿಕ್ಕಮಗನಾದ ಸೆಗೂಬನೂ ಸತ್ತರು.

1 ಅರಸುಗಳು 21:25

ಆದರೆ ತನ್ನ ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿಸಲ್ಪಟ್ಟು ಕರ್ತನ ಸಮ್ಮುಖದಲ್ಲಿ ಕೆಟ್ಟತನವನ್ನು ಮಾಡಲು ತನ್ನನ್ನು ಮಾರಿಬಿಟ್ಟ ಅಹಾಬನ ಹಾಗೆ ಯಾವನೂ ಇರಲಿಲ್ಲ.

2 ಅರಸುಗಳು 3:2

ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ತನ್ನ ತಂದೆ ತಾಯಿಯ ಹಾಗೂ ಅಲ್ಲ; ತನ್ನ ತಂದೆಯು ಮಾಡಿಟ್ಟ ಬಾಳನ ಸ್ತಂಭವನ್ನು ತೆಗೆದುಹಾಕಿದನು.

2 ಅರಸುಗಳು 17:2

ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು; ಆದರೆ ತನಗೆ ಮುಂಚೆ ಇದ್ದ ಇಸ್ರಾಯೇಲಿನ ಅರಸುಗಳ ಹಾಗಲ್ಲ.

2 ದಿನವೃತ್ತಾಂತ 21:13

ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದು ಅಹಾಬನ ಮನೆಯ ವ್ಯಭಿಚಾರಿ ಗಳ ಹಾಗೆ ಯೆಹೂದದವರನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ವ್ಯಭಿಚಾರ ಮಾಡಲು ಪ್ರೇರೇಪಿಸಿ ನಿನಗಿಂತ ಉತ್ತಮರಾಗಿರುವ ನಿನ್ನ ತಂದೆಯ ಮನೆ ಯವರಾದ ನಿನ್ನ ಸಹೋದರರನ್ನು ಕೊಂದುಹಾಕಿ ದ್ದರಿಂದ

Interlinear

Choose Theme