Home Bibles 1 ಅರಸುಗಳು 16:34 · ಕನ್ನಡ ಬೈಬಲ್
1 ಅರಸುಗಳು 16:34 · ಕನ್ನಡ ಬೈಬಲ್

ಅವನ ದಿವಸಗಳಲ್ಲಿ ಬೇತೇಲಿನವನಾದ ಹೀಯೇ ಲನು ಯೆರಿಕೋವನ್ನು ಕಟ್ಟಿಸಿದನು; ಕರ್ತನು ನೂನನ ಮಗನಾದ ಯೆಹೋಶುವನ ಮುಖಾಂತರ ಹೇಳಿದ್ದ ವಾಕ್ಯದ ಪ್ರಕಾರವೇ ಅವನು ಅದಕ್ಕೆ ಅಸ್ತಿವಾರವನ್ನು ಹಾಕಿದಾಗ ತನ್ನ ಚೊಚ್ಚಲ ಮಗನಾದ ಅಬೀರಾಮನೂ ಅದರ ಬಾಗಲುಗಳನ್ನು ಇಟ್ಟಾಗ ಅವನ ಚಿಕ್ಕಮಗನಾದ ಸೆಗೂಬನೂ ಸತ್ತರು.

Cross references

ಯೆಹೋಶುವ 6:26

ಆ ಕಾಲದಲ್ಲಿ ಯೆಹೋಶುವನು ಅವರಿಗೆ--ಈ ಯೆರಿಕೋ ಪಟ್ಟಣವನ್ನು ತಿರಿಗಿ ಕಟ್ಟಿಸುವ ಮನುಷ್ಯನು ಕರ್ತನ ಮುಂದೆ ಶಪಿಸಲ್ಪಡಲಿ; ತನ್ನ ಚೊಚ್ಚಲ ಮಗನಲ್ಲಿ ಅದರ ಅಸ್ತಿವಾರವನ್ನು ಹಾಕುವನು, ತನ್ನ ಕೊನೆಯ ಮಗನಲ್ಲಿ ಅದರ ಬಾಗಲುಗಳನ್ನು ಇಡುವನು ಎಂದು ಆಣೆ ಇಟ್ಟು ಹೇಳಿದನು.ಹೀಗೆಯೇ ಕರ್ತನು ಯೆಹೋಶುವನ ಸಂಗಡ ಇದ್ದನು; ಅವನ ಕೀರ್ತಿ ದೇಶದಲ್ಲೆಲ್ಲಾ ಇತ್ತು.

ಯೆಹೋಶುವ 23:14

ಇಗೋ, ನಾನು ಇಂದು ಭೂಲೋಕದವರೆಲ್ಲರ ಮಾರ್ಗವಾಗಿ ಹೋಗುತ್ತೇನೆ. ನಿಮ್ಮ ದೇವರಾದ ಕರ್ತನು ನಿಮಗೋಸ್ಕರ ಹೇಳಿದ ಎಲ್ಲಾ ಒಳ್ಳೇ ಮಾತುಗಳಲ್ಲಿ ಒಂದು ಮಾತಾದರೂ ತಪ್ಪಲಿಲ್ಲವೆಂದು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಅರಿತಿದ್ದೀರಿ; ಅವು ಗಳಲ್ಲಿ ಒಂದು ಮಾತಾದರೂ ತಪ್ಪದೆ ಅವೆಲ್ಲಾ ನಿಮಗೆ ಸಂಭವಿಸಿದವು.

2 ಸಮುವೇಲ 10:5

ಅವರು ಅದನ್ನು ದಾವೀದ ನಿಗೆ ತಿಳಿಸಿದಾಗ ಆ ಜನರು ಬಹಳ ನಾಚಿಕೆಪಟ್ಟದ್ದ ರಿಂದ ದಾವೀದನು ಕೆಲವರನ್ನು ಅವರಿಗೆದುರಾಗಿ ಕಳು ಹಿಸಿ--ನಿಮ್ಮ ಗಡ್ಡಗಳು ಬೆಳೆಯುವವರೆಗೆ ನೀವು ಯೆರಿಕೋವಿನಲ್ಲಿ ಕಾದಿದ್ದು ತರುವಾಯ ಬನ್ನಿರಿ ಎಂದು ಹೇಳಿದನು.

ಜೆಕರ್ಯ 1:5

ನಿಮ್ಮ ಪಿತೃ ಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ?

ಮತ್ತಾಯ 24:35

ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.

Interlinear

Choose Theme