ಆಗ ಅವನು ಹುಡುಗನ ಮೇಲೆ ಮೂರು ಸಾರಿ ಬೋರ್ಲ ಬಿದ್ದುನನ್ನ ದೇವರಾದ ಓ ಕರ್ತನೇ, ಈ ಹುಡುಗನ ಪ್ರಾಣ ಅವನಲ್ಲಿ ತಿರಿಗಿ ಬರಲಿ ಎಂದು ಕರ್ತನನ್ನು ಕೂಗಿದನು.
Cross references
ಅವನು ಒಳಗೆ ಪ್ರವೇ ಶಿಸಿ ಯಾರೂ ಒಳಗೆ ಬಾರದಂತೆ ಆ ಕೋಣೆಯ ಬಾಗಲು ಮುಚ್ಚಿಕೊಂಡು ಕರ್ತನನ್ನು ಪ್ರಾರ್ಥಿಸಿದನು.
ಅವನು ಏರಿಹೋಗಿ ಮಗುವಿನ ಮೇಲೆ ಮಲಗಿ ಕೊಂಡು ತನ್ನ ಬಾಯಿಯನ್ನು ಅವನ ಬಾಯಿಯ ಮೇಲೆಯೂ ತನ್ನ ಕಣ್ಣುಗಳನ್ನು ಅವನ ಕಣ್ಣುಗಳ ಮೇಲೆಯೂ ತನ್ನ ಕೈಗಳನ್ನು ಅವನ ಕೈಗಳ ಮೇಲೆಯೂ ಇರಿಸಿದನು. ಅವನು ಮೇಲೆ ಬೋರ್ಲಬಿದ್ದದರಿಂದ ಮಗುವಿನ ಶರೀರವು ಬೆಚ್ಚಗೆ ಆಯಿತು.
ಪೇತ್ರನು ಅವರೆ ಲ್ಲರನ್ನು ಹೊರಕ್ಕೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥನೆ ಮಾಡಿ ಶವದ ಕಡೆಗೆ ತಿರುಗಿಕೊಂಡು--ತಬಿಥಾ, ಏಳು ಅಂದನು; ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕೂತುಕೊಂಡಳು.
ಅವನು ಬಹಳ ಹಸಿದು ಊಟಮಾಡಬೇಕೆಂದಿದ್ದನು; ಅವರು ಊಟಕ್ಕೆ ಸಿದ್ಧಮಾಡುತ್ತಿರುವಷ್ಟರಲ್ಲಿ ಅವನು ಪರವಶ ನಾಗಿ
ಆದರೆ ಪೌಲನು ಇಳಿದು ಹೋಗಿ ಅವನಮೇಲೆ ಬಿದ್ದು ತಬ್ಬಿಕೊಂಡು--ನೀವು ಕಳವಳಪಡಬೇಡಿರಿ, ಅವನ ಪ್ರಾಣ ಅವನಲ್ಲಿ ಅದೆ ಎಂದು ಹೇಳಿದನು.
ತನ್ನ ಮಗನನ್ನು ಸತ್ತವರೊಳಗಿಂದಲೂ ದೇವರು ಎಬ್ಬಿಸ ಸಮರ್ಥನಾಗಿದ್ದಾನೆಂದು ಎಣಿಸಿದನು. ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಉಪಮಾನವಾಗಿ ಹೊಂದಿದನು.