Home Bibles 1 ಅರಸುಗಳು 18:33 · ಕನ್ನಡ ಬೈಬಲ್
1 ಅರಸುಗಳು 18:33 · ಕನ್ನಡ ಬೈಬಲ್

ತರುವಾಯ ಅವನು ಕಟ್ಟಿಗೆಗಳನ್ನು ಇಟ್ಟು ಹೋರಿ ಯನ್ನು ತುಂಡುತುಂಡಾಗಿ ಕಡಿದು ಕಟ್ಟಿಗೆಗಳ ಮೇಲೆ ಇಟ್ಟು--ನೀವು ನಾಲ್ಕು ಮಡಕೆ ನೀರನ್ನು ತುಂಬಿಕೊಂಡು ದಹನಬಲಿಯ ಮೇಲೆಯೂ ಕಟ್ಟಿಗೆಗಳ ಮೇಲೆಯೂ ಹೊಯ್ಯಿರಿ ಅಂದನು.

Cross references

ಆದಿಕಾಂಡ 22:9

ದೇವರು ಹೇಳಿದ ಸ್ಥಳಕ್ಕೆ ಅವರು ಬಂದಾಗ ಅಬ್ರಹಾಮನು ಅಲ್ಲಿ ಬಲಿಪೀಠವನ್ನು ಕಟ್ಟಿ ಕಟ್ಟಿಗೆಗಳನ್ನು ಅದರ ಮೇಲೆ ಕ್ರಮವಾಗಿ ಜೋಡಿಸಿ ತನ್ನ ಮಗನಾದ ಇಸಾಕನನ್ನು ಕಟ್ಟಿ ಬಲಿಪೀಠದ ಮೇಲೆ ಇದ್ದ ಕಟ್ಟಿಗೆಗಳ ಮೇಲೆ ಇಟ್ಟನು.

ಲೇವ್ಯಕಾಂಡ 1:6

ಅವನು ಆ ದಹನಬಲಿಯ ಚರ್ಮವನ್ನು ಸುಲಿದು ಅದನ್ನು ತುಂಡುಗಳನ್ನಾಗಿ ಮಾಡಬೇಕು.

ಲೇವ್ಯಕಾಂಡ 1:8

ಆಗ ಆರೋನನ ಕುಮಾರರಾದ ಯಾಜಕರು ಅದರ ಭಾಗಗಳನ್ನು ಅಂದರೆ ತಲೆಯನ್ನೂ ಕೊಬ್ಬನ್ನೂ ಯಜ್ಞವೇದಿಯ ಮೇಲಿನ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು;

ನ್ಯಾಯಾಧಿಪತಿಗಳು 6:20

ದೇವದೂತನು ಅವನಿಗೆನೀನು ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿಗಳನ್ನೂ ತೆಗೆದುಕೊಂಡು ಈ ಬಂಡೆಯ ಮೇಲಿಟ್ಟು ರಸವನ್ನು ಹೊಯ್ಯಿ ಅಂದನು. ಅವನು ಹಾಗೆಯೇ ಮಾಡಿದನು.

ದಾನಿಯೇಲ 3:19

ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ ಅವನ ಮುಖದ ರೂಪವು ಶದ್ರಕ್‌ ಮೇಷಕ್‌ಅಬೇದ್‌ ನೇಗೋ ಎಂಬ ವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಮಾತನಾಡಿ ಆ ಆವಿಗೆಯನ್ನು ಸಾಧಾರಣವಾದ ಉರಿ ಗಿಂತ ಏಳರಷ್ಟು ಹೆಚ್ಚಾಗಿ ಉರಿಹಾಕಬೇಕೆಂದು ಆಜ್ಞಾಪಿ ಸಿದನು.

ದಾನಿಯೇಲ 3:25

ಆಗ ಅರಸನು ಅವರಿಗೆ ಪ್ರತ್ಯುತ್ತರವಾಗಿ--ಇಗೋ, ಕಟ್ಟಲ್ಪಡದ ನಾಲ್ಕು ಮನುಷ್ಯರು ಬೆಂಕಿಯಲ್ಲಿ ನಡೆಯುತ್ತಿ ರುವದನ್ನು ನೋಡುತ್ತೇನೆ; ಅವರಿಗೆ ಯಾವ ಹಾನಿಯೂ ಇಲ್ಲ; ಅಲ್ಲದೆ ನಾಲ್ಕನೆಯವನ ರೂಪವು ದೇವ ಕುಮಾರನ ಹಾಗಿದೆ ಎಂದು ಹೇಳಿದನು.

ಯೋಹಾನ 11:39

ಯೇಸು--ಆ ಕಲ್ಲನ್ನು ತೆಗೆದುಹಾಕಿರಿ ಅಂದನು. ಅದಕ್ಕೆ ಸತ್ತುಹೋದವನ ಸಹೋದರಿಯಾದ ಮಾರ್ಥಳು ಆತನಿಗೆ--ಕರ್ತನೇ, ಇಷ್ಟರೊಳಗೆ ಅವನು ನಾರುತ್ತಾನೆ; ಯಾಕಂದರೆ ಅವನು ಸತ್ತು ನಾಲ್ಕು ದಿನಗಳಾದವು ಅಂದಳು.

ಯೋಹಾನ 19:33

ಆದರೆ ಅವರು ಯೇಸುವಿನ ಬಳಿಗೆ ಬಂದಾಗ ಆತನು ಆಗಲೇ ಸತ್ತಿರುವದನ್ನು ಕಂಡು ಆತನ ಕಾಲುಗಳನ್ನು ಮುರಿ ಯಲಿಲ್ಲ.

Interlinear

Choose Theme