ಆಗ ಕರ್ತನ ಬೆಂಕಿಯು ಇಳಿದು ಬಂದು ದಹನಬಲಿಯನ್ನೂ ಕಟ್ಟಿಗೆ ಗಳನ್ನೂ ಕಲ್ಲುಗಳನ್ನೂ ಮಣ್ಣನ್ನೂ ಸುಟ್ಟುಬಿಟ್ಟು ಕಾಲುವೆ ಯಲ್ಲಿದ್ದ ನೀರನ್ನು ಹೀರಿಬಿಟ್ಟಿತು.
Cross references
ಸೂರ್ಯನು ಮುಳುಗಿದ ಮೇಲೆ ಕತ್ತಲಾದಾಗ ಇಗೋ, ಹೊಗೆಹಾಯುವ ಒಲೆಯೂ ಉರಿಯುವ ದೀಪವೂ ತುಂಡುಗಳ ಮಧ್ಯದಲ್ಲಿ ಹಾದುಹೋದವು.
ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.
ಆಗ ಕರ್ತನ ಬಳಿಯಿಂದ ಬೆಂಕಿಯು ಹೊರಟು ಅವರನ್ನು ದಹಿಸಿ ಬಿಟ್ಟಿತು; ಅವರು ಕರ್ತನ ಮುಂದೆ ಸತ್ತುಹೋದರು.
ಆಗ ಕರ್ತನ ದೂತನು ತನ್ನ ಕೈಯಲ್ಲಿದ್ದ ಕೋಲಿನ ಕೊನೆಯನ್ನು ಚಾಚಿ ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿಗಳನ್ನೂ ಮುಟ್ಟಿದನು. ಆಗ ಬೆಂಕಿಯು ಬಂಡೆ ಯಿಂದ ಎದ್ದು ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿ ಗಳನ್ನೂ ದಹಿಸಿಬಿಟ್ಟಿತು. ಆಗ ಕರ್ತನ ದೂತನು ಅವನ ಕಣ್ಣುಗಳಿಗೆ ಕಾಣಿಸದೆ ಹೋದನು.
ಆಗ ನೀವು ನಿಮ್ಮ ದೇವರುಗಳ ಹೆಸರನ್ನು ಕರೆಯಿರಿ; ನಾನು ಕರ್ತನ ಹೆಸರನ್ನು ಹೇಳಿ ಪ್ರಾರ್ಥಿಸುವೆನು. ಆಗ ಬೆಂಕಿಯಿಂದ ಪ್ರತ್ಯುತ್ತರ ಕೊಡುವ ದೇವರು ತಾನೇ ದೇವರಾಗಿ ರುವನು ಅಂದನು.
ಆದದರಿಂದ ನೀರು ಬಲಿಪೀಠದ ಸುತ್ತಲೂ ಹರಿಯಿತು. ಇದಲ್ಲದೆ ಅವನು ಕಾಲಿವೆಯನ್ನು ನೀರಿನಿಂದ ತುಂಬಿಸಿದನು.
ಎಲೀಯನು ಅವರಿಗೆ ಪ್ರತ್ಯುತ್ತರವಾಗಿನಾನು ದೇವರ ಮನುಷ್ಯನಾಗಿದ್ದರೆ ಬೆಂಕಿಯು ಆಕಾಶ ದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ ಅಂದನು. ತಕ್ಷಣವೇ ದೇವರ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ಸುಟ್ಟುಬಿಟ್ಟಿತು.
ದಾವೀದನು ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ಕರ್ತನನ್ನು ಬೇಡಿಕೊಂಡನು. ಆಗ ಆತನು ಆಕಾಶದಿಂದ ದಹನ ಬಲಿಪೀಠದ ಮೇಲೆ ಅಗ್ನಿಯಿಂದ ಅವ ನಿಗೆ ಪ್ರತ್ಯುತ್ತರಕೊಟ್ಟನು.
ಸೊಲೊಮೋನನು ಪ್ರಾರ್ಥಿಸಿ ತೀರಿಸಿದಾಗ ಬೆಂಕಿಯು ಆಕಾಶದಿಂದ ಇಳಿದು ದಹನ ಬಲಿಗಳನ್ನೆಲ್ಲಾ ದಹಿಸಿಬಿಟ್ಟಿತು.
ಅವನು ಇನ್ನೂ ಮಾತನಾಡುತ್ತಿರಲು ಮತ್ತೊಬ್ಬನೂ ಬಂದು--ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿ ಗಳಲ್ಲಿಯೂ ಸೇವಕರಲ್ಲಿಯೂ ಉರಿದು ಅವರನ್ನು ಸಂಹರಿಸಿತು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು.
ಅವನು ಅಂಜಿಕೆಯಿಂದ ತನ್ನ ತ್ರಾಣಸ್ಥಾನಕ್ಕೆ ದಾಟಿಹೋಗು ವನು; ಅವನ ಪ್ರಧಾನರು ಧ್ವಜಕ್ಕೆ ಹೆದರಿಓಡು ವರು; ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇಮಿ ನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಕರ್ತನ ನುಡಿ ಇದೇ.