Home Bibles 1 ಅರಸುಗಳು 2:45 · ಕನ್ನಡ ಬೈಬಲ್
1 ಅರಸುಗಳು 2:45 · ಕನ್ನಡ ಬೈಬಲ್

ಆದರೆ ಅರಸನಾದ ಸೊಲೊಮೋನನು ಆಶೀರ್ವದಿಸಲ್ಪಡುವನು; ದಾವೀ ದನ ಸಿಂಹಾಸನವು ಕರ್ತನ ಮುಂದೆ ಯುಗ ಯುಗಾಂತರಕ್ಕೂ ಸ್ಥಿರವಾಗಿರುವದು ಅಂದನು.ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯ ನಿಗೆ ಆಜ್ಞಾಪಿಸಿದ್ದರಿಂದ ಅವನು ಹೊರಟು ಅವನ ಮೇಲೆ ಬಿದ್ದನು; ಅವನು ಸತ್ತನು. ಹೀಗೆ ರಾಜ್ಯವು ಸೊಲೊಮೋನನ ಕೈಯಲ್ಲಿ ಸ್ಥಿರ ಮಾಡಲ್ಪಟ್ಟಿತು.

Cross references

2 ಸಮುವೇಲ 7:13

ಅವನು ನನ್ನ ಹೆಸ ರಿಗೆ ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯದ ಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರುವೆನು; ಅವನು ನನ್ನ ಮಗನಾಗಿರುವನು.

1 ಅರಸುಗಳು 2:24

ಹಾಗಾ ದರೆ ನನ್ನನ್ನು ಸ್ಥಿರಪಡಿಸಿ ನನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕೂಡ್ರಿಸಿ ತಾನು ಮಾತು ಕೊಟ್ಟ ಪ್ರಕಾರ ನನಗೆ ಮನೆಯನ್ನು ಕಟ್ಟಿಸಿದ ಕರ್ತನ ಜೀವದಾಣೆ, ಈ ಹೊತ್ತು ಅದೋನೀಯನು ಸಾಯು ವನು ಅಂದನು.

1 ಅರಸುಗಳು 2:33

ಆದದರಿಂದ ಅವರ ರಕ್ತಾಪರಾಧವು ಯೋವಾಬನ ತಲೆಯ ಮೇಲೆ ಯೂ ಅವನ ಸಂತತಿಯವರ ತಲೆಯ ಮೇಲೆಯೂ ಯುಗಯುಗಕ್ಕೂ ಇರುವದು. ಆದರೆ ದಾವೀದನ ಮೇಲೆಯೂ ಅವನ ಸಂತಾನದವರ ಮೇಲೆಯೂ ಮನೆಯ ಮೇಲೆಯೂ ಸಿಂಹಾಸನದ ಮೇಲೆಯೂ ಕರ್ತನಿಂದ ಸಮಾಧಾನವು ಯುಗಯುಗಾಂತರಕ್ಕೂ ಇರುವದು ಅಂದನು.

1 ದಿನವೃತ್ತಾಂತ 17:27

ಹಾಗಾದರೆ ನಿನ್ನ ಸೇವಕನ ಮನೆ ನಿನ್ನ ಮುಂದೆ ಯುಗಯುಗಕ್ಕೂ ಇರುವಹಾಗೆ ಅದನ್ನು ಆಶೀರ್ವದಿಸುವಂತೆ ನಿನಗೆ ಮೆಚ್ಚಿಕೆಯಾಗಲಿ; ಕರ್ತನೇ ನೀನು ಆಶೀರ್ವದಿಸಿದ್ದು ಯುಗಯುಗಕ್ಕೂ ಆಶೀರ್ವದಿಸಲ್ಪಟ್ಟಿರುವದು.

ಕೀರ್ತನೆಗಳು 21:4

ಜೀವವನ್ನು ಅವನು ನಿನ್ನಿಂದ ಬೇಡಲು ನೀನು ಅವನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟೆ.

ಕೀರ್ತನೆಗಳು 21:6

ನೀನು ಎಂದೆಂದಿಗೂ ಅವನನ್ನು ಅಧಿಕವಾಗಿ ಆಶೀರ್ವಾದ ಮಾಡಿದ್ದೀ. ನಿನ್ನ ಮುಖದ ಮುಂದೆ ಅವನನ್ನು ಅಧಿಕ ವಾಗಿ ಸಂತೋಷಪಡುವಂತೆ ಮಾಡಿದ್ದೀ.

ಕೀರ್ತನೆಗಳು 72:17

ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.

ಸಾಮೇತಿಗಳು 25:5

ಅರಸನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ ಅವನ ಸಿಂಹಾಸನವು ನೀತಿಯಲ್ಲಿ ಸ್ಥಿರವಾಗುವದು.

ಯೆಶಾಯ 9:6

ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.

Interlinear

Choose Theme