ವರುಷಾಂತರದಲ್ಲಿ ಏನಾಯಿತಂದರೆ ಬೆನ್ಹದದನು ಅರಾಮ್ಯರನ್ನು ಲೆಕ್ಕಿಸಿ ಇಸ್ರಾಯೇಲಿನ ಸಂಗಡ ಯುದ್ಧ ಮಾಡಲು ಅಫೇಕಿಗೆ ಹೋದನು.
Cross references
ದಕ್ಷಿಣ ಪ್ರಾಂತ್ಯದಿಂದ ಅಮೋರಿಯರ ಮೇರೆಯಾದ ಅಫೇಕದ ವರೆಗೂ ಇರುವ ಕಾನಾನ್ಯರ ಸರ್ವ ದೇಶವು ಚೀದೋನ್ಯರಿಗೆ ಹೊಂದಿದ ಮೆಯಾರವು;
ಅದಕ್ಕೆ ಉಮ್ಮಾ, ಅಫೇಕ್ ರೆಹೋಬ್ ಎಂಬ ಪಟ್ಟಣಗಳು ಸೇರಿದ್ದವು. ಇಪ್ಪತ್ತೆರಡು ಪಟ್ಟಣಗಳೂ ಅವುಗಳ ಗ್ರಾಮಗಳೂ.
ಆಶೇರ್ಯರು ಅಕ್ಕೋವಿನ ವಾಸಿಗಳನ್ನೂ ಚೀದೋನಿನ ವಾಸಿಗಳನ್ನೂ ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಪಟ್ಟಣ ಗಳ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ.
ಸಮುವೇಲನ ವಾಕ್ಯವು ಸಮಸ್ತ ಇಸ್ರಾಯೇ ಲಿನಲ್ಲಿ ಮುಟ್ಟಿತು. ಆದರೆ ಇಸ್ರಾಯೇ ಲ್ಯರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸವಿಾಪದಲ್ಲಿ ದಂಡಿಳಿದರು. ಫಿಲಿಷ್ಟಿಯರು ಅಫೇಕಿನಲ್ಲಿ ದಂಡಿಳಿದರು.
ಆದರೆ ಫಿಲಿಷ್ಟಿಯರು ತಮ್ಮ ಎಲ್ಲಾ ಸೈನ್ಯಗಳನ್ನು ಅಫೇಕದಲ್ಲಿ ಕೂಡಿಸಿ ಕೊಂಡರು. ಹಾಗೆಯೇ ಇಸ್ರಾಯೇಲ್ಯರು ಇಜ್ರೇಲ್ ನಲ್ಲಿರುವ ಬುಗ್ಗೆಯ ಬಳಿಯಲ್ಲಿ ದಂಡಿಳಿದರು.
ಒಂದು ವರುಷ ಕಳೆದ ತರುವಾಯ ಅರಸುಗಳು ಯುದ್ಧಕ್ಕೆ ಹೊರಡುವಾಗ ದಾವೀದನು ಯೋವಾಬನನ್ನೂ ಅವನ ಸಂಗಡವಿದ್ದ ಅವನ ಸೇವಕರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಕಳುಹಿಸಿದನು; ಅವರು ಅಮ್ಮೋನನ ಮಕ್ಕಳನ್ನು ಸಂಹ ರಿಸಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಇನ್ನೂ ಯೆರೂಸಲೇಮಿನಲ್ಲೇ ಕಾದಿದ್ದನು.
ಪ್ರವಾದಿಯು ಇಸ್ರಾಯೇಲಿನ ಅರಸನ ಬಳಿಗೆ ಬಂದು ಅವನಿಗೆ--ನೀನು ಹೋಗಿ ಬಲಗೊಂಡು ನೀನು ಮಾಡುವದನ್ನು ತಿಳುಕೊಂಡು ನೋಡು; ಯಾಕಂದರೆ ವರುಷಾಂತರದಲ್ಲಿ ಅರಾಮಿನ ಅರಸನು ನಿನಗೆ ವಿರೋಧವಾಗಿ ಬರುವನು ಅಂದನು.
ಮಿಕ್ಕಾದವರು ಅಫೇಕ್ ಪಟ್ಟಣದೊಳಗೆ ಓಡಿ ಹೋದರು. ಅಲ್ಲಿ ಒಂದು ಗೋಡೆಯು ಉಳಿದ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಕೊಠಡಿಯ ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು.
ಅವನು ತನ್ನ ಕೈಯನ್ನು ಇರಿಸಿದನು. ಎಲೀಷನು ತನ್ನ ಕೈಗಳನ್ನು ಅರಸನ ಕೈಗಳ ಮೇಲೆ ಇಟ್ಟನು. ಆಗ ಅವನು--ಮೂಡಲಲ್ಲಿರುವ ಕಿಟಕಿಯನ್ನು ತೆರೆ ಅಂದನು. ಅವನು ತೆರೆದನು. ಎಲೀಷನು--ಎಸೆ ಅಂದನು. ಅವನು ಎಸೆದನು. ಇದು ಕರ್ತನ ರಕ್ಷಣೆಯ ಬಾಣ; ಅರಾಮ್ಯರಿಂದ ತಪ್ಪಿಸುವ ರಕ್ಷಣೆಯ ಬಾಣವೇ, ಏನಂದರೆ ಅಫೇಕದಲ್ಲಿ ಅರಾಮ್ಯರನ್ನು ನಾಶಮಾಡುವ ವರೆಗೂ ಅವರನ್ನು ಹೊಡೆ ಯುವಿ ಅಂದನು.