1 ಅರಸುಗಳು 21:28 · ಕನ್ನಡ ಬೈಬಲ್
ಆಗ ಕರ್ತನ ವಾಕ್ಯವು ತಿಷ್ಬೀಯ ನಾದ ಎಲೀಯನಿಗೆ ಉಂಟಾಗಿ--ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿದ್ದನ್ನು ಕಂಡಿಯಾ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ದಿವಸಗಳಲ್ಲಿ ಆ ಕೇಡನ್ನು ಬರಮಾಡದೆ ಅವನ ಮಗನ ದಿವಸಗಳಲ್ಲಿ ಅವನ ಮನೆಯ ಮೇಲೆ ಬರ ಮಾಡುವೆನು ಅಂದನು.
Cross references
2 ದಿನವೃತ್ತಾಂತ 12:7
ಅವರು ತಮ್ಮನ್ನು ತಗ್ಗಿಸಿ ಕೊಂಡದ್ದನ್ನು ಕರ್ತನು ನೋಡಿದಾಗ ಕರ್ತನ ವಾಕ್ಯವು ಶೆಮಾಯನಿಗೆ ಉಂಟಾಯಿತು. ಏನಂದರೆಅವರು ತಮ್ಮನ್ನು ತಗ್ಗಿಸಿಕೊಂಡದ್ದರಿಂದ ನಾನು ಅವ ರನ್ನು ನಾಶಮಾಡದೆ ಅವರು ಸ್ವಲ್ಪಮಟ್ಟಿಗೆ ತಪ್ಪಿಸಿ ಕೊಳ್ಳುವಂತೆ ಮಾಡುವೆನು. ಶೀಶಕನ ಕೈಯಿಂದ ನನ್ನ ಕೋಪವು ಯೆರೂಸಲೇಮಿನ ಮೇಲೆ ಹೊಯ್ಯಲ್ಪಡು ವದಿಲ್ಲ.