ಆ ರಥವು ಸಮಾರ್ಯದ ಕೆರೆಯಲ್ಲಿ ತೊಳೆಯಲ್ಪಡುವಾಗ ಕರ್ತನು ಹೇಳಿದ ವಾಕ್ಯದ ಪ್ರಕಾರವೇ ನಾಯಿಗಳು ಅವನ ರಕ್ತವನ್ನು ನೆಕ್ಕಿದವು; ಹಾಗೆಯೇ ಅವರು ಕವಚವನ್ನು ತೊಳೆದರು.
Cross references
ಇಗೋ, ನಾನು ಇಂದು ಭೂಲೋಕದವರೆಲ್ಲರ ಮಾರ್ಗವಾಗಿ ಹೋಗುತ್ತೇನೆ. ನಿಮ್ಮ ದೇವರಾದ ಕರ್ತನು ನಿಮಗೋಸ್ಕರ ಹೇಳಿದ ಎಲ್ಲಾ ಒಳ್ಳೇ ಮಾತುಗಳಲ್ಲಿ ಒಂದು ಮಾತಾದರೂ ತಪ್ಪಲಿಲ್ಲವೆಂದು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಅರಿತಿದ್ದೀರಿ; ಅವು ಗಳಲ್ಲಿ ಒಂದು ಮಾತಾದರೂ ತಪ್ಪದೆ ಅವೆಲ್ಲಾ ನಿಮಗೆ ಸಂಭವಿಸಿದವು.
ಕರ್ತನು ಎಲೀಯನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಮಡಕೆಯಲ್ಲಿರುವ ಹಿಟ್ಟು ತೀರದೆ ತಂಬಿಗೆ ಯಲ್ಲಿರುವ ಎಣ್ಣೆಯು ಮುಗಿಯದೆ ಇತ್ತು.
ನೀನು ಅವನಿಗೆನೀನು ಕೊಂದುಹಾಕಿ ಸ್ವಾಧೀನಮಾಡಿಕೊಂಡಿಯಲ್ಲಾ. ಆದದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕು ವವು ಎಂದು ಕರ್ತನು ಹೇಳುತ್ತಾನೆಂದು ಅಂದನು.
ಹಾಗೆಯೇ ಎಲೀ ಯನು ಹೇಳಿದ ಕರ್ತನ ವಾಕ್ಯದ ಪ್ರಕಾರವೇ ಅವನು ಸತ್ತು ಹೋದನು; ಅವನಿಗೆ ಮಗನು ಇಲ್ಲದ್ದರಿಂದ ಯೆಹೂದದ ಅರಸನಾದ ಯೆಹೋಷಾಫಾಟನ ಮಗ ನಾಗಿರುವ ಯೋರಾಮನ ಆಳ್ವಿಕೆಯ ಎರಡನೇ ವರುಷ ದಲ್ಲಿ ಯೋರಾಮನು ಅವನಿಗೆ ಬದಲಾಗಿ ಅರಸ ನಾದನು.ಅಹಜ್ಯನು ಮಾಡಿದ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
ಸುಳ್ಳುಗಾರರ ಗುರುತುಗಳನ್ನು ನಿರರ್ಥಕಮಾಡುವವನೂ ಕಣಿ ಹೇಳು ವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳುವಳಿಕೆಯನ್ನು ಬುದ್ದಿಹೀನ ವಾಗ ಮಾಡುವವನೂ
ಆರಂಭದಲ್ಲೇ ಹಳೇ ಸಂಗತಿಗಳನ್ನು ನಾನು ಪ್ರಕಟಿಸಿದ್ದೇನೆ. ಅವು ನನ್ನ ಬಾಯಿಂದ ಹೊರಟವು ಮತ್ತು ನಾನು ಅವುಗಳನ್ನು ತೋರಿಸಿದ್ದೇನೆ. ನಾನು ತಟ್ಟನೆ ನಡೆಸಲು ಅವು ನೆರವೇರಿದವು.
ನೀವು ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ--ನಿಮ್ಮ ಕೆಟ್ಟ ಮಾರ್ಗಗಳನ್ನೂ ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ; ನನ್ನಲ್ಲಿ ಲಕ್ಷ್ಯ ವಿಡಲಿಲ್ಲವೆಂದು ಕರ್ತನು ಅನ್ನುತ್ತಾನೆ.
ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.