Home Bibles ☰ Books 1 ಅರಸುಗಳು 22:39 · ಕನ್ನಡ ಬೈಬಲ್
1 ಅರಸುಗಳು 22:39 · ಕನ್ನಡ ಬೈಬಲ್

ಆದರೆ ಅಹಾಬನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನು ಕಟ್ಟಿಸಿದ ದಂತದ ಮನೆಯೂ ಎಲ್ಲಾ ಪಟ್ಟಣಗಳೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

Cross references

1 ಅರಸುಗಳು 10:18

ಇದಲ್ಲದೆ ಅರಸನು ದಂತದಿಂದ ದೊಡ್ಡ ಸಿಂಹಾ ಸನವನ್ನು ಮಾಡಿಸಿ ಅದನ್ನು ಶ್ರೇಷ್ಠ ಬಂಗಾರದಿಂದ ಹೊದಿಸಿದನು.

1 ಅರಸುಗಳು 10:22

ಅರಸನಿಗೆ ತಾರ್ಷೀ ಷಿನ ಹಡಗುಗಳು ಹೀರಾಮನ ಹಡಗುಗಳ ಸಂಗಡ ಸಮುದ್ರದಲ್ಲಿ ಇದ್ದವು. ಮೂರು ವರುಷಕ್ಕೆ ಒಂದು ಸಾರಿ ತಾರ್ಷೀಷಿನ ಹಡಗುಗಳು ಬೆಳ್ಳಿಬಂಗಾರ ವನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.

1 ಅರಸುಗಳು 14:19

ಯಾರೊಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಯುದ್ಧ ಮಾಡಿದ್ದೂ ಆಳಿದ್ದೂ--ಇಗೋ, ಇವು ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕ ದಲ್ಲಿ ಬರೆಯಲ್ಪಟ್ಟಿವೆ.

1 ಅರಸುಗಳು 15:23

ಆಸನ ಮಿಕ್ಕಾದ ಎಲ್ಲಾ ಕ್ರಿಯೆಗಳೂ ಅವನ ಸಮಸ್ತ ಪರಾಕ್ರಮವೂ ಅವನು ಮಾಡಿದ್ದೆಲ್ಲವೂ ಅವನು ಕಟ್ಟಿಸಿದ ಪಟ್ಟಣಗಳೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯ ಲ್ಪಡಲಿಲ್ಲವೋ? ಆದರೆ ತನ್ನ ವೃದ್ದಾಪ್ಯದ ಕಾಲದಲ್ಲಿ ಅವನು ತನ್ನ ಕಾಲುಗಳಲ್ಲಿ ಅಸ್ವಸ್ಥನಾಗಿದ್ದನು.

1 ಅರಸುಗಳು 15:31

ಆದರೆ ನಾದಾಬನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

1 ಅರಸುಗಳು 16:5

ಆದರೆ ಬಾಷನ ಇತರ ಕಾರ್ಯಗಳೂ ಅವನು ಮಾಡಿದ್ದೂ ಅವನ ಪರಾಕ್ರಮವೂ ಇಸ್ರಾ ಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯ ಲ್ಪಡಲಿಲ್ಲವೋ?

1 ಅರಸುಗಳು 16:20

ಜಿಮ್ರಿಯ ಇತರ ಕಾರ್ಯಗಳೂ ಅವನು ಮಾಡಿದ ಒಳಸಂಚೂ ಇಸ್ರಾಯೇಲಿನ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

1 ಅರಸುಗಳು 16:27

ಆದರೆ ಒಮ್ರಿಯು ಮಾಡಿದ ಇತರ ಕಾರ್ಯಗಳೂ ಅವನು ತೋರಿಸಿದ ಅವನ ಪರಾ ಕ್ರಮವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

2 ಅರಸುಗಳು 1:18

ಅಹಜ್ಯನು ಮಾಡಿದ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

2 ಅರಸುಗಳು 15:15

ಇಗೋ, ಶಲ್ಲೂಮನ ಇತರ ಕ್ರಿಯೆಗಳೂ ಅವನು ಮಾಡಿದ ಒಳಸಂಚೂ ಇಸ್ರಾಯೇಲಿನ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.

ಕೀರ್ತನೆಗಳು 45:8

ನಿನ್ನ ವಸ್ತ್ರಗಳೆಲ್ಲಾ ಬೋಳವು ಅಗರು ದಾಲ್ಚಿನ್ನಿ ಇವುಗಳ ಸುವಾಸನೆಯಿಂದ ಇರುತ್ತವೆ. ಇವುಗಳಿಂದ ಅವರು ದಂತದ ಅರಮನೆಗಳೊಳಗಿಂದ ನಿನ್ನನ್ನು ಸಂತೋಷಪಡಿಸುತ್ತಾರೆ.

ಯೆಹೆಜ್ಕೇಲ 27:6

ನಿನ್ನ ಹುಟ್ಟು ಗೋಲನ್ನು ಬಾಷಾನಿನ ಓಕ್‌ ವೃಕ್ಷದಿಂದ ಮಾಡಿದ್ದಾರೆ, ಕಿತ್ತೀಯರ ದ್ವೀಪಗಳಿಂದ ತಂದ ದಂತದ ಹಲಗೆಗಳಿಂದ ಅಶ್ಶೂರ್ಯರ ಗುಂಪಿನವರು ಕೆತ್ತಿದ್ದಾರೆ.

ಯೆಹೆಜ್ಕೇಲ 27:15

ದೇದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತದಕೊಂಬುಗಳನ್ನೂ ಕರೀ ಮರಗಳನ್ನೂ ನಿನಗೆ ಕಾಣಿಕೆಯಾಗಿ ತರುತ್ತಿದ್ದರು.

ಆಮೋಸ 3:15

ಚಳಿಗಾಲದ ಮನೆಯನ್ನು ಬೇಸಿಗೆಯ ಮನೆಯ ಸಂಗಡ ಹೊಡೆದು ಹಾಕುವೆನು. ಆಗ ದಂತಮಂದಿರಗಳು ನಾಶವಾಗು ವವು ಮತ್ತು ದೊಡ್ಡ ಮನೆಗಳು ಕೊನೆಗಾಣುವವು ಎಂದು ಕರ್ತನು ಹೇಳುತ್ತಾನೆ.

ಆಮೋಸ 6:4

ದಂತದ ಮಂಚಗಳ ಮೇಲೆ ಮಲಗಿಕೊಳ್ಳು ತ್ತಾರೆ; ತಮ್ಮ ಹಾಸಿಗೆಗಳ ಮೇಲೆ ಹಾಯಾಗಿ ಒರಗಿ ಕೊಳ್ಳುತ್ತಾರೆ; ಮಂದೆಯೊಳಗಿಂದ ಕುರಿಮರಿಗಳನ್ನು, ಹಟ್ಟಿಯ ಮಂದೆಯೊಳಗಿಂದ ಕರುಗಳನ್ನು ತಿನ್ನುತ್ತಾರೆ.

Interlinear

Interlinear data is unavailable for this verse.

Choose Theme