ಆ ಕಾಲದಲ್ಲಿ ಎದೋಮಿನೊಳಗೆ ಅರಸ ನಿರಲಿಲ್ಲ; ಅಧಿಪತಿಯು ಆಳುತ್ತಿದ್ದನು.
Cross references
ಕರ್ತನು ಆಕೆಗೆ--ನಿನ್ನ ಹೊಟ್ಟೆಯಲ್ಲಿ ಎರಡು ಜನಾಂಗಗಳು ಇವೆ. ನಿನ್ನ ಗರ್ಭದೊಳಗಿನಿಂದಲೇ ಎರಡು ತರವಾದ ಜನಗಳು ಬೇರೆಬೇರೆಯಾಗುವರು. ಒಂದು ತರವಾದ ಜನಕ್ಕಿಂತ ಇನ್ನೊಂದು ಬಲಗೊಳ್ಳು ವದು. ಇದಲ್ಲದೆ ಹಿರಿಯನು ಕಿರಿಯನನ್ನು ಸೇವಿಸುವನು ಎಂದು ಹೇಳಿದನು.
ನಿನ್ನ ಕತ್ತಿಯಿಂದಲೇ ನೀನು ಬದುಕುವಿ, ನಿನ್ನ ಸಹೋದರನನ್ನು ಸೇವಿಸುವಿ; ಆದರೆ ನಿನಗೆ ಪ್ರಭುತ್ವವು ಬಂದಾಗ ಆಗುವದೇನಂದರೆ, ಅವನ ನೊಗವನ್ನು ನಿನ್ನ ಕೊರಳಿನಿಂದ ಮುರಿದು ಹಾಕುವಿ.
ಇಸ್ರಾಯೇಲ್ ಮಕ್ಕಳನ್ನು ಯಾವ ಅರಸನೂ ಆಳುವದಕ್ಕಿಂತ ಮುಂಚೆ ಎದೋಮ್ ದೇಶದಲ್ಲಿ ಆಳಿದ ಅರಸರು ಇವರೇ.
ಎದೋಮಿ ನಲ್ಲಿ ಕಾವಲುದಂಡುಗಳನ್ನು ಇಟ್ಟನು. ಎಲ್ಲಾ ಎದೋಮಿ ನಲ್ಲಿ ಅವನು ಕಾವಲುದಂಡುಗಳನ್ನು ಇಟ್ಟದ್ದರಿಂದ ಎದೋಮ್ಯರೆಲ್ಲರೂ ದಾವೀದನಿಗೆ ದಾಸರಾದರು. ದಾವೀದನು ಹೋದಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿದನು.
ಅವನು ಪುರುಷ ಸಂಗಮರನ್ನು ದೇಶದಲ್ಲಿಂದ ಹೊರಡಿಸಿ ತನ್ನ ಪಿತೃಗಳು ಮಾಡಿದ ಸಮಸ್ತ ವಿಗ್ರಹಗಳನ್ನು ತೆಗೆದುಹಾಕಿದನು.
ಹೀಗೆಯೇ ಇಸ್ರಾಯೇಲಿನ ಅರಸನೂ ಯೆಹೂದದ ಅರಸನೂ ಎದೋಮಿನ ಅರಸನೂ ಹೊರಟು ಸುತ್ತಾದ ಮಾರ್ಗದಲ್ಲಿ ಏಳು ದಿವಸ ನಡೆದರು. ಆದರೆ ಸೈನ್ಯಕ್ಕೂ ಅವರ ಹಿಂದೆ ಬಂದ ಪಶುಗಳಿಗೂ ನೀರು ಇಲ್ಲದೆ ಹೋಯಿತು.
ಅವನ ಕಾಲದಲ್ಲಿ ಯೆಹೂದದ ಕೈಕೆಳಗಿದ್ದ ಎದೋಮ್ಯರು ತಿರುಗಿ ಬಿದ್ದು ತಮಗೆ ಒಬ್ಬ ಅರಸ ನನ್ನು ಮಾಡಿಕೊಂಡರು.
ಮೋವಾಬ್ ನನ್ನನ್ನು ತೊಳೆಯುವ ಪಾತ್ರೆಯು; ಏದೋಮಿನ ಮೇಲೆ ನನ್ನ ಕೆರವನ್ನು ಎಸೆಯುವೆನು; ಫಿಲಿಷ್ಟಿಯದ ಮೇಲೆ ಜಯಧ್ವನಿಗೈಯುವೆನು.