ತರುವಾಯ ಇಬ್ಬರು ವೇಶ್ಯಾಸ್ತ್ರೀಯರು ಅರಸನ ಬಳಿಗೆ ಬಂದು ಅವನ ಮುಂದೆ ನಿಂತರು.
Cross references
ಮರುದಿನದಲ್ಲಿ ಮೋಶೆಯು ಜನರಿಗೆ ನ್ಯಾಯತೀರಿಸುವದಕ್ಕೆ ಕೂತುಕೊಂಡಾಗ ಜನರು ಬೆಳಗಿನಿಂದ ಸಾಯಂಕಾಲದ ವರೆಗೆ ಮೋಶೆಯ ಬಳಿಯಲ್ಲಿ ನಿಂತಿ ದ್ದರು.
ಅವರಿಗೆ ವ್ಯಾಜ್ಯವಿದ್ದರೆ ನನ್ನ ಬಳಿಗೆ ಬರುತ್ತಾರೆ. ನಾನು ಒಬ್ಬರ ಸಂಗಡ ಇನ್ನೊಬ್ಬರಿಗಿರುವ ವ್ಯಾಜ್ಯವನ್ನು ತೀರಿಸುತ್ತೇನೆ. ದೇವರ ನಿಯಮಗಳನ್ನೂ ಆತನ ನ್ಯಾಯ ಪ್ರಮಾಣಗಳನ್ನೂ ಅವರಿಗೆ ತಿಳಿಯಪಡಿಸುತ್ತೇನೆ ಅಂದನು.
ನಿನ್ನ ಮಗಳು ಸೂಳೆಯಾಗುವಂತೆ ವ್ಯಭಿಚಾರಕ್ಕೆ ಬಿಡಬೇಡ; ಬಿಟ್ಟರೆ ಅದರಿಂದ ದೇಶವು ಸೂಳೆತನಕ್ಕೆ ಒಳಪಟ್ಟು, ದೇಶವು ಎಲ್ಲಾ ಕೆಟ್ಟತನದಿಂದ ತುಂಬು ವದು.
ಇವರು ಸವಿಾಪಕ್ಕೆ ಬಂದು ಮೋಶೆಯೂ ಯಾಜಕ ನಾದ ಎಲ್ಲಾಜಾರನೂ ಪ್ರಧಾನರೂ ಸಮಸ್ತ ಸಭೆಯೂ ಇವರ ಮುಂದೆ ಸಭೆಯ ಗುಡಾರದ ಬಾಗಲಿನ ಹತ್ತಿರ ನಿಂತು--
ಇಸ್ರಾಯೇಲಿನ ಕುಮಾರ್ತೆಯರಲ್ಲಿ ಸೂಳೆ ಇರ ಬಾರದು; ಇಸ್ರಾಯೇಲಿನ ಕುಮಾರರಲ್ಲಿ ಪುರುಷ ಸಂಗದವನು ಇರಬಾರದು.
ನೂನನ ಮಗನಾದ ಯೆಹೋಶುವನು ಪಾಳತಿ ನೋಡುವವರಾದ ಇಬ್ಬರು ಮನುಷ್ಯರನ್ನು ಶಿಟ್ಟೀಮಿನಿಂದ ಗುಪ್ತ ಮಾರ್ಗವಾಗಿ ಕಳುಹಿಸಿ ಅವರಿಗೆ--ನೀವು ಹೋಗಿ ದೇಶವನ್ನು ಮತ್ತು ಯೆರಿಕೋವನ್ನು ನೋಡಿರಿ ಅಂದನು. ಅವರು ಹೋಗಿ ರಾಹಾಬಳೆಂಬ ಹೆಸರುಳ್ಳ ಒಬ್ಬ ಸೂಳೆಯ ಮನೆಯಲ್ಲಿ ಇಳಿದುಕೊಂಡರು.
ಆದರೆ ಗಿಲ್ಯಾದ್ಯನಾದ ಯೆಫ್ತಾಹನು ಬಲಿಷ್ಠನಾದ ಪರಾಕ್ರಮಶಾಲಿಯಾಗಿ ದ್ದನು; ಅವನು ಸೂಳೆಯಲ್ಲಿ ಹುಟ್ಟಿದ ಗಿಲ್ಯಾದನ ಮಗನು.
ವಿಷಯವನ್ನು ರಹಸ್ಯ ಮಾಡುವದು ದೇವರ ಮಹಿಮೆ; ಅರಸರ ಘನತೆಯು ವಿಷಯವನ್ನು ಶೋಧಿಸುವದು.