Home Bibles 1 ಅರಸುಗಳು 3:8 · ಕನ್ನಡ ಬೈಬಲ್
1 ಅರಸುಗಳು 3:8 · ಕನ್ನಡ ಬೈಬಲ್

ಇದಲ್ಲದೆ ನಿನ್ನ ಸೇವಕನು ನೀನು ಆದುಕೊಂಡ ನಿನ್ನ ಮಹಾಜನರ ಮಧ್ಯದಲ್ಲಿ ಇದ್ದಾನೆ. ಆ ಜನರು ಬಹಳವಾಗಿರುವ ದರಿಂದ ಅವರನ್ನು ಎಣಿಸಲೂ ಲೆಕ್ಕ ಬರೆಯಲೂ ಆಗದು.

Cross references

ಆದಿಕಾಂಡ 13:16

ನಿನ್ನ ಸಂತತಿಯನ್ನು ಭೂಮಿಯ ಧೂಳಿನಷ್ಟು ಮಾಡುವೆನು. ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ ನಿನ್ನ ಸಂತಾನವು ಸಹ ಲೆಕ್ಕಿಸಲ್ಪಡುವದು.

ಆದಿಕಾಂಡ 15:5

ಕರ್ತನು ಅವನನ್ನು ಹೊರಗೆ ಕರಕೊಂಡು ಬಂದು--ಈಗ ನೀನು ಆಕಾಶವನ್ನು ದೃಷ್ಟಿಸಿ ನಕ್ಷತ್ರ ಗಳನ್ನು ಲೆಕ್ಕಿಸಶಕ್ತನಾದರೆ ಅವುಗಳನ್ನು ಲೆಕ್ಕಿಸು ಅಂದನು. ಆತನು ಅವನಿಗೆ--ಅದರಂತೆಯೇ ನಿನ್ನ ಸಂತತಿಯು ಆಗುವದು ಎಂದು ಅವನಿಗೆ ಹೇಳಿದನು.

ಆದಿಕಾಂಡ 22:17

ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು.

ನಿರ್ಗಮಕಾಂಡ 19:5

ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ.

ಲೇವ್ಯಕಾಂಡ 26:9

ನಾನು ನಿಮ್ಮನ್ನು ಲಕ್ಷಿಸಿ ಅಭಿವೃದ್ಧಿಮಾಡಿ ಹೆಚ್ಚಿಸಿ ನಿಮ್ಮ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು.

ದ್ವಿತೀಯೋಪದೇಶಕಾಂಡ 7:6

ಯಾಕಂದರೆ ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ; ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ತನಗೆ ಸ್ವಕೀಯ ಜನವಾಗುವ ಹಾಗೆ ಆರಿಸಿಕೊಂಡಿ ದ್ದಾನೆ.

1 ಸಮುವೇಲ 12:22

ನಿಮ್ಮನ್ನು ತನ್ನ ಜನರಾಗಿ ಮಾಡಿಕೊಳ್ಳಲು ಇಚ್ಛೈಸಿದ್ದಾನಲ್ಲಾ! ಇದಲ್ಲದೆ ನಾನು ನಿಮಗೋಸ್ಕರ ಪ್ರಾರ್ಥನೆ ಮಾಡದೆ ಕರ್ತನಿಗೆ ವಿರೋಧವಾಗಿ ಮಾಡುವ ಪಾಪವು ನನಗೆ ದೂರವಾಗಿರಲಿ.

1 ಅರಸುಗಳು 4:20

ಯೆಹೂದ ಮತ್ತು ಇಸ್ರಾಯೇಲ್ಯರು ತಿನ್ನುತ್ತಾ ಕುಡಿಯುತ್ತಾ ಸಂತೋಷಪಡುತ್ತಾ ಸಮುದ್ರದ ಬಳಿಯಲ್ಲಿರುವ ಮರಳಿನ ಹಾಗೆ ಹೆಚ್ಚಾಗಿದ್ದರು.

1 ದಿನವೃತ್ತಾಂತ 21:2

ಆದದರಿಂದ ದಾವೀದನು ಯೋವಾಬನ ಸಂಗಡಲೂ ಜನರ ಪ್ರಧಾನರ ಸಂಗಡಲೂ--ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ ನೀವು ಹೋಗಿ ಬೇರ್ಷೆಬವು ಮೊದಲುಗೊಂಡು ದಾನಿನ ವರೆಗೆ ಇಸ್ರಾಯೇಲ್ಯರನ್ನು ಲೆಕ್ಕಿಸಿ ಅವರ ಲೆಕ್ಕವನ್ನು ನನಗೆ ತಕ್ಕೊಂಡು ಬನ್ನಿರಿ ಅಂದನು.

1 ದಿನವೃತ್ತಾಂತ 21:5

ಕತ್ತಿಯನ್ನು ಹಿಡಿಯುವ ಸಮಸ್ತ ಇಸ್ರಾಯೇಲ್ಯರು ಹನ್ನೊಂದು ಲಕ್ಷಜನರಾಗಿದ್ದರು; ಕತ್ತಿಯನ್ನು ಹಿಡಿಯುವ ಯೆಹೂದದ ಜನರು ನಾಲ್ಕು ಲಕ್ಷದ ಎಪ್ಪತ್ತು ಸಾವಿರ ಜನರಾಗಿದ್ದರು.

1 ದಿನವೃತ್ತಾಂತ 27:23

ಆದರೆ ದಾವೀದನು ಇಪ್ಪತ್ತು ವರುಷಗಳೊಳಗೆ ಇದ್ದವರ ಲೆಕ್ಕತಕ್ಕೊಳ್ಳಲಿಲ್ಲ. ಯಾಕಂದರೆ ಇಸ್ರಾ ಯೇಲ್ಯರನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿ ಮಾಡುವೆನೆಂದು ಕರ್ತನು ಹೇಳಿದ್ದನು.

ಕೀರ್ತನೆಗಳು 78:71

ತನ್ನ ಪ್ರಜೆಯಾದ ಯಾಕೋಬನ್ನೂ ಭಾದ್ಯತೆಯಾದ ಇಸ್ರಾಯೇಲನ್ನೂ ಮೇಯಿಸುವ ಹಾಗೆ, ಅವನನ್ನು ಕುರಿಮರಿಗಳ ಹಿಂಡಿ ನಿಂದ ತಂದನು.ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು.

Interlinear

Choose Theme