Home Bibles ☰ Books 1 ಅರಸುಗಳು 4:28 · ಕನ್ನಡ ಬೈಬಲ್
1 ಅರಸುಗಳು 4:28 · ಕನ್ನಡ ಬೈಬಲ್

ಹೀಗೆಯೇ ಪ್ರತಿ ಮನುಷ್ಯನು ತನ್ನ ವಂತಿನ ಪ್ರಕಾರ ಕುದುರೆಗಳಿಗೋಸ್ಕರವೂ ಸವಾರಿ ಒಂಟೆಗಳಿ ಗೋಸ್ಕರವೂ ಅವುಗಳ ಸ್ಥಳಕ್ಕೆ ಜವೆಗೋಧಿಯನ್ನೂ ಹುಲ್ಲನ್ನೂ ತಂದನು.

Cross references

ಎಸ್ತೇರ್ 8:10

ಅವನು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆದು ಅರಸನ ಉಂಗುರದಿಂದ ಮುದ್ರೆ ಹಾಕಿ ಪತ್ರಗಳನ್ನು, ಕುದುರೆಗಳನ್ನು, ಸವಾರಿ ಹತ್ತಿ ಕೊಂಡಿದ್ದ ಅಂಚೆಯವರ ಮೂಲಕ ಹೇಸರ ಕತ್ತೆಗಳ ಮೇಲೆಯೂ ಒಂಟೆಗಳ ಮೇಲೆಯೂ ವೇಗವಾಗಿ ಓಡುವ ಎಳೇ ಒಂಟೆಗಳ ಮೇಲೆಯೂ ಕಳುಹಿಸಿದನು.

ಎಸ್ತೇರ್ 8:14

ಅಂಚೆಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಓಡಿಸಲ್ಪಟ್ಟ ಕಾರಣ ಹೇಸರ ಕತ್ತೆಗಳ ಮೇಲೆಯೂ ವೇಗವಾದ ಒಂಟೆಗಳ ಮೇಲೆಯೂ ಹೊರಟರು. ಈ ಆಜ್ಞೆಯು ಶೂಷನಿನ ಅರಮನೆಯಲ್ಲಿ ಕೊಡಲ್ಪಟ್ಟಿತು.

ಮೀಕ 1:13

ಲಾಕೀಷಿನ ನಿವಾಸಿಯೇ, ವೇಗವುಳ್ಳ ಕುದುರೆಗೆ ರಥವನ್ನು ಕಟ್ಟು, ಇದೇ ಚೀಯೋನಿನ ಮಗಳ ಪಾಪದ ಆರಂಭವು; ಇಸ್ರಾಯೇಲಿನ ಅಪರಾಧಗಳು ನಿನ್ನಲ್ಲಿ ಕಂಡುಬಂದವು.

Interlinear

Choose Theme