ಸೊಲೊಮೋನನ ಜ್ಞಾನವನ್ನು ಕುರಿತು ಕೇಳಿದ ಭೂಮಿಯ ಮೇಲಿರುವ ಸಮಸ್ತ ಅರಸರ ಬಳಿಯಿಂದ ಎಲ್ಲಾ ಜನಗಳು ಅವನ ಜ್ಞಾನವನ್ನು ಕೇಳಲು ಬಂದರು.
Cross references
ಶೆಬದ ರಾಣಿಯು ಕರ್ತನ ನಾಮವನ್ನು ಕುರಿತೂ ಸೊಲೊಮೋನನ ಕೀರ್ತಿ ಯನ್ನೂ ಕೇಳಿದಾಗ ಒಗಟುಗಳಿಂದ ಅವನನ್ನು ಪರೀಕ್ಷಿ ಸಲು ಬಂದಳು.
ಶೆಬದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿದಾಗ ಒಗಟುಗಳಿಂದ ಅವನನ್ನು ಶೋಧಿಸಲು ಅವಳು ಮಹಾಗುಂಪಿನ ಸಂಗಡ ಸುಗಂಧಗಳನ್ನೂ ಬಹು ಬಂಗಾರವನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಹೊತ್ತುಕೊಂಡಿರುವ ಒಂಟೆಗಳ ಸಂಗಡ ಯೆರೂಸಲೇಮಿಗೆ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಅವನ ಸಂಗಡ ಮಾತಾ ಡಿದಳು.
ದೇವರು ಸೊಲೊಮೋನನ ಹೃದಯದಲ್ಲಿ ಉಂಟುಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯ ಸಮಸ್ತ ಅರಸುಗಳು ಸೊಲೊಮೋನನ ಮುಖದರ್ಶನವನ್ನು ಹುಡುಕಿದರು.
ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.