1 ಅರಸುಗಳು 4:7 · ಕನ್ನಡ ಬೈಬಲ್
ಇದಲ್ಲದೆ ಅರಸನಿಗೂ ಅವನ ಮನೆಗೂ ಆಹಾರವನ್ನು ಸಿದ್ಧಮಾಡಿಸುವದಕ್ಕೊಸ್ಕರ ಸೊಲೊಮೋನನಿಗೆ ಸಮಸ್ತ ಇಸ್ರಾಯೇಲಿನ ಮೇಲೆ ಹನ್ನೆರಡು ಮಂದಿ ಅಧಿಪತಿಗಳಿದ್ದರು. ಅವನವನು ವರುಷದಲ್ಲಿ ತನ್ನ ವಂತಿನ ತಿಂಗಳು ಬಂದಾಗ ಆಹಾರವನ್ನು ಸಿದ್ಧಮಾಡಿ ದನು.
Cross references
1 ಅರಸುಗಳು 4:5
ನಾತಾ ನನ ಮಗನಾದ ಅಜರ್ಯನು ಅಧಿಪತಿಗಳ ಮೇಲ್ವಿಚಾ ರಕನು; ನಾತಾನನ ಮಗನಾದ ಜಾಬೂದನು ಮುಖ್ಯ ಸ್ಥನೂ ಅರಸನ ಸ್ನೇಹಿತನೂ ಆಗಿದ್ದನು.
1 ಅರಸುಗಳು 5:7
ಹೀರಾಮನು ಸೊಲೊಮೋನನ ಮಾತು ಗಳನ್ನು ಕೇಳಿದಾಗ ಬಹು ಸಂತೋಷಪಟ್ಟು--ಈ ಮಹಾ ಜನರ ಮೇಲೆ ಜ್ಞಾನವುಳ್ಳ ಮಗನನ್ನು ದಾವೀದನಿಗೆ ಕೊಟ್ಟ ಕರ್ತನು ಈ ಹೊತ್ತು ಸ್ತುತಿಸಲ್ಪಡಲಿ ಅಂದನು.
1 ದಿನವೃತ್ತಾಂತ 27:1
ಆದರೆ ಇಸ್ರಾಯೇಲ್ ಮಕ್ಕಳು ತಮ್ಮ ಲೆಕ್ಕದ ಪ್ರಕಾರವಾಗಿ ಹೀಗೆಯೇ ಇದ್ದರು; ಹೇಗಂದರೆ, ಮುಖ್ಯಸ್ಥರಾದ ಪಿತೃಗಳು ಸಹಸ್ರಗಳಿಗೂ ಶತಗಳಿಗೂ ಅಧಿಪತಿಗಳು. ವರುಷದ ಎಲ್ಲಾ ತಿಂಗಳು ಗಳಲ್ಲಿ ಪ್ರತಿ ತಿಂಗಳು ಒಳಗೆ ಹೋಗಿ ಬರುವ ವರ್ಗ ಗಳ ಕಾರ್ಯಗಳಲ್ಲಿ ಅರಸನನ್ನು ಸೇವಿಸಿದ ಅವರ ಪಾರುಪತ್ಯಗಾರರೂ ಪ್ರತಿ ವರ್ಗಕ್ಕೆ ಇಪ್ಪತ್ತನಾಲ್ಕು ಸಾವಿರ ಮಂದಿಯಾಗಿದ್ದರು.