Home Bibles 1 ಅರಸುಗಳು 6:1 · ಕನ್ನಡ ಬೈಬಲ್
1 ಅರಸುಗಳು 6:1 · ಕನ್ನಡ ಬೈಬಲ್

ಇಸ್ರಾಯೇಲ್‌ ಮಕ್ಕಳು ಐಗುಪ್ತ ದೇಶದಿಂದ ಬಂದ ನಾನೂರ ಎಂಭತ್ತನೆಯ ವರುಷದಲ್ಲಿ ಇಸ್ರಾಯೇಲಿನ ಮೇಲೆ ಸೊಲೊಮೋ ನನ ಆಳಿಕೆಯ ನಾಲ್ಕನೇ ವರುಷದ ಎರಡನೇ ತಿಂಗಳಾದ ಜೀಪ್‌ ಎಂಬ ತಿಂಗಳಲ್ಲಿ ಅವನು ಕರ್ತನ ಮನೆಯನ್ನು ಕಟ್ಟಿಸಲು ಪ್ರಾರಂಭಿಸಿದನು.

Cross references

ನಿರ್ಗಮಕಾಂಡ 12:41

ನಾನೂರ ಮೂವತ್ತು ವರುಷ ಗಳು ತೀರಿದ ತರುವಾಯ ಅದೇ ದಿನದಲ್ಲಿ ಕರ್ತನ ಸೈನ್ಯಗಳೆಲ್ಲಾ ಐಗುಪ್ತದೇಶವನ್ನು ಬಿಟ್ಟು ಹೊರಗೆ ಹೋದವು.

ನಿರ್ಗಮಕಾಂಡ 12:51

ಅದೇ ದಿನದಲ್ಲಿ ಕರ್ತನು ಇಸ್ರಾಯೇಲ್‌ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೇಶದೊಳಗಿಂದ ಹೊರಗೆ ತಂದನು.

ಅಂಕೆಗಳ ಪುಸ್ತಕ 1:1

ಅವರು ಐಗುಪ್ತದೇಶದಿಂದ ಹೊರಟ ಎರಡನೆಯ ವರುಷದ ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಕರ್ತನು ಸೀನಾಯಿ ಅರಣ್ಯದಲ್ಲಿ ಸಭೆಯ ಗುಡಾರದೊಳಗೆ ಮೋಶೆಯ ಸಂಗಡ ಮಾತನಾಡಿ--

ನ್ಯಾಯಾಧಿಪತಿಗಳು 11:26

ಇಸ್ರಾಯೇಲು ಹೆಷ್ಬೋನಿನಲ್ಲಿಯೂ ಅದರ ಗ್ರಾಮ ಗಳಲ್ಲಿಯೂ ಅರೋಯೇರಿನಲ್ಲಿಯೂ ಅದರ ಗ್ರಾಮ ಗಳಲ್ಲಿಯೂ ಅರ್ನೋನಿನ ತೀರವಾದ ಎಲ್ಲಾ ಪಟ್ಟಣ ಗಳಲ್ಲಿಯೂ ಮುನ್ನೂರು ವರುಷಗಳಿಂದ ವಾಸಿಸಿರು ವಾಗ ಇಷ್ಟರ ವರೆಗೆ ನೀವು ಅದನ್ನು ಬಿಡಿಸದೆ ಹೋದದ್ದೇನು?

1 ಅರಸುಗಳು 6:37

ನಾಲ್ಕನೇ ವರುಷದ ಜೀಪ್‌ ತಿಂಗಳಲ್ಲಿ ಕರ್ತನ ಆಲಯದ ಅಸ್ತಿವಾರವು ಹಾಕಲ್ಪಟ್ಟಿತು.ಹನ್ನೊಂದನೇ ವರುಷದ ಎಂಟನೇ ತಿಂಗಳಾದ ಬೂಲ್‌ ತಿಂಗಳಲ್ಲಿ ಆ ಮನೆಯು ಅದರ ಎಲ್ಲಾ ಭಾಗಗಳಲ್ಲಿಯೂ ಎಲ್ಲಾ ನ್ಯಾಯದ ಪ್ರಕಾರ ಕಟ್ಟಿ ತೀರಿಸಲ್ಪಟ್ಟಿತು. ಹೀಗೆ ಅವನು ಏಳು ವರುಷಗಳಲ್ಲಿ ಅದನ್ನು ಕಟ್ಟಿಸಿದನು.

1 ದಿನವೃತ್ತಾಂತ 29:19

ಇದಲ್ಲದೆ ನಿನ್ನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನು ಕೈಕೊಳ್ಳಲೂ ಸಮಸ್ತವನ್ನು ಮಾಡಲೂ ನಾನು ಯಾವದಕ್ಕೋಸ್ಕರ ಸಿದ್ಧಮಾಡಿದೆನೋ ಆ ಅರಮನೆಯನ್ನು ಕಟ್ಟಿಸಲೂ ನನ್ನ ಮಗನಾದ ಸೊಲೊ ಮೋನನಿಗೆ ಪೂರ್ಣ ಹೃದಯವನ್ನು ಕೊಡು ಅಂದನು.

2 ದಿನವೃತ್ತಾಂತ 3:1

ಆಗ ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆಯಾದ ದಾವೀದನಿಗೆ ಕರ್ತನು ಕಾಣಿಸಿಕೊಂಡ ಸ್ಥಳವಾದ ಮೋರೀಯಾ ಬೆಟ್ಟದ ಮೇಲೆ ದಾವೀದನು ಸಿದ್ಧಮಾಡಿದ ಯೆಬೂಸಿ ಯನಾದ ಒರ್ನಾನನ ಕಣದಲ್ಲಿ ಕರ್ತನ ಆಲಯವನ್ನು ಕಟ್ಟಲು ಪ್ರಾರಂಭಿಸಿದನು.

2 ದಿನವೃತ್ತಾಂತ 3:3

ದೇವರ ಆಲಯವನ್ನು ಕಟ್ಟುವದಕ್ಕೆ ಸೊಲೊಮೋನನು ಹಾಕಿ ಸಿದ ಅಸ್ತಿವಾರಗಳು ಏನಂದರೆ ಮೊದಲಿನ ಅಳತೆಯ ಪ್ರಕಾರವಾಗಿ ಅದರ ಉದ್ದ ಅರವತ್ತು ಮೊಳವು ಅಗಲ ಇಪ್ಪತ್ತು ಮೊಳವು.

ಎಜ್ರಾ 5:11

ಅವರು ನಮಗೆ ಕೊಟ್ಟ ಪ್ರತ್ಯುತ್ತರವೇನಂದರೆನಾವು ಪರಲೋಕ ಮತ್ತು ಭೂಲೋಕಗಳ ದೇವರ ಸೇವಕರಾಗಿದ್ದೇವೆ. ಅನೇಕ ವರುಷಗಳ ಹಿಂದೆ ಇಸ್ರಾ ಯೇಲಿನಲ್ಲಿದ್ದ ಒಬ್ಬ ಮಹಾ ಅರಸನು ಕಟ್ಟಿಸಿ ತೀರಿಸಿದ್ದ ಆಲಯವನ್ನು ನಾವು ಕಟ್ಟಿಸುತ್ತೇವೆ.

ಯೆಹೆಜ್ಕೇಲ 41:1

ಆಮೇಲೆ, ಅವನು ನನ್ನನು ದೇವಾಲಯಕ್ಕೆ ಕರೆತಂದು ಕಂಬಗಳನ್ನೂ ಒಂದು ಕಡೆಯಲ್ಲಿ ಆರು ಮೊಳ ಅಗಲವೆಂದೂ ಮತ್ತೊಂದು ಕಡೆ ಆರು ಮೊಳ ಅಗಲವೆಂದೂ ಅಳೆದನು. ಇದೇ ಆ ಗುಡಾರದ ಅಡ್ಡಗಲವಾಗಿತ್ತು.

ಜೆಕರ್ಯ 6:12

ಅವನಿಗೆ ಹೇಳತಕ್ಕದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು.

ಜೆಕರ್ಯ 6:15

ದೂರವಾದವರು ಬಂದು ಕರ್ತನ ದೇವಾ ಲಯವನ್ನು ಕಟ್ಟುವರು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ; ನೀವು ನಿಮ್ಮ ದೇವರಾದ ಕರ್ತನ ಶಬ್ದಕ್ಕೆ ಜಾಗ್ರತೆಯಾಗಿ ಕಿವಿಗೊಟ್ಟರೆ ಇದು ನೆರವೇರುವದು.

ಯೋಹಾನ 2:19

ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು.

ಅಪೋಸ್ತಲರ ಕೃತ್ಯಗಳು 7:47

ಆದರೆ ಸೊಲೊಮೋನನು ಆತನಿಗೋಸ್ಕರ ಮನೆಯನ್ನು ಕಟ್ಟಿಸಿದನು.

1 ಕೊರಿಂಥದವರಿಗೆ 6:19

ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ;ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.

2 ಕೊರಿಂಥದವರಿಗೆ 6:16

ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.

ಎಫೆಸದವರಿಗೆ 2:20

ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು;

ಕೊಲೊಸ್ಸೆಯವರಿಗೆ 2:7

ಆತನಲ್ಲಿ ಬೇರೂರಿಕೊಂಡು ದೃಢವಾಗಿ ನಿಮಗೆ ಕಲಿಸಿದ ಪ್ರಕಾರವೇ ನಂಬಿಕೆಯಲ್ಲಿ ನೆಲೆಗೊಂಡು ಕೃತಜ್ಞತೆಯಿಂದೊಡಗೂಡಿ ಅದರಲ್ಲಿ ಅಭಿವೃದ್ದಿ ಹೊಂದಿರಿ.

ಹೆಬ್ರಿಯರಿಗೆ 9:11

ಆದರೆ ಕ್ರಿಸ್ತನು ಬರಬೇಕಾಗಿದ್ದ ಮೇಲುಗಳ ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಈ ಕಟ್ಟಡಕ್ಕೆ ಸಂಬಂಧವಾ ಗಿರದೆ ಶ್ರೇಷ್ಠವಾಗಿಯೂ ಪರಿಪೂರ್ಣವಾಗಿಯೂ ಇರುವ ಗುಡಾರದ ಮೂಲಕ

ಹೆಬ್ರಿಯರಿಗೆ 11:10

ಯಾಕಂದರೆ ದೇವರು ಯಾವದನ್ನು ಕಟ್ಟುವಾತನೂ ಮಾಡುವಾತನೂ ಆಗಿದ್ದಾನೋ ಅಸ್ತಿವಾರಗಳ್ಳುಳ್ಳ ಆ ಪಟ್ಟಣಕ್ಕೋಸ್ಕರ ಅವನು ಎದುರುನೋಡುತ್ತಿದ್ದನು.

1 ಪೇತ್ರ 2:5

ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.

Interlinear

Choose Theme