Home Bibles ☰ Books 1 ಅರಸುಗಳು 6:21 · ಕನ್ನಡ ಬೈಬಲ್
1 ಅರಸುಗಳು 6:21 · ಕನ್ನಡ ಬೈಬಲ್

ಸೊಲೊಮೋನನು ಮನೆಯ ಒಳಭಾಗವನ್ನು ಶುದ್ಧ ಚಿನ್ನದಿಂದ ಹೊದಿಸಿ ದೈವೋಕ್ತಿಯ ಸ್ಥಾನದ ಮುಂದೆ ಚಿನ್ನದ ಸರಪಣಿಗಳಿಂದ ವಿಭಾಗವನ್ನು ಮಾಡಿ ಅದನ್ನು ಚಿನ್ನದಿಂದ ಹೊದಿಸಿದನು.

Cross references

ನಿರ್ಗಮಕಾಂಡ 26:29

ಆ ಹಲಗೆಗಳನ್ನು ಬಂಗಾರ ದಿಂದ ಹೊದಿಸಬೇಕು. ಅವುಗಳಿಗೆ ಬಂಗಾರದಿಂದ ಬಳೆಗಳನ್ನು ಮಾಡಬೇಕು, ಅಗುಳಿಗಳನ್ನೂ ಬಂಗಾರ ದಿಂದ ಹೊದಿಸಬೇಕು.

ನಿರ್ಗಮಕಾಂಡ 26:32

ಅದನ್ನು ಬಂಗಾರದಿಂದ ಹೊದಿಸಿದ ಬಂಗಾರದ ಕೊಂಡಿಗಳಿದ್ದ ಬೆಳ್ಳಿಯ ನಾಲ್ಕು ಕುಳಿಗಳಲ್ಲಿ ಊರಿಕೊಂಡಿರುವ ನಾಲ್ಕು ಜಾಲೀ ಮರದ ಸ್ತಂಭಗಳಲ್ಲಿ ಅದನ್ನು ತೂಗುಹಾಕಬೇಕು.

ನಿರ್ಗಮಕಾಂಡ 36:34

ಆ ಹಲಗೆಗಳನ್ನು ಚಿನ್ನದಿಂದ ಹೊದಿಸಿ ಅಗುಳಿಗಳಿಗೆ ಬಳೆಗಳಾಗಿರುವ ಉಂಗುರಗಳನ್ನು ಚಿನ್ನದಿಂದ ಮಾಡಿ ಅಗುಳಿಗಳನ್ನು ಚಿನ್ನದಿಂದ ಹೊದಿಸಿದನು.

1 ಅರಸುಗಳು 6:5

ಮಂದಿರದ ಸುತ್ತಲೂ ದೈವೋಕ್ತಿಯ ಸುತ್ತಲೂ ಗೋಡೆಗಳಿಗೆ ಸವಿಾಪವಾಗಿ ಕೊಠಡಿಗಳನ್ನು ಕಟ್ಟಿಸಿದನು.

2 ದಿನವೃತ್ತಾಂತ 3:7

ಆಲಯದ ತೊಲೆಗಳನ್ನೂ ಸ್ತಂಭಗಳನ್ನೂ ಗೋಡೆ ಗಳನ್ನೂ ಬಾಗಲುಗಳನ್ನೂ ಅವನು ಬಂಗಾರದಿಂದ ಹೊದಿಸಿ ಗೋಡೆಗಳ ಮೇಲೆ ಕೆರೂಬಿಗಳ ಚಿತ್ರಗಳನ್ನ್ನು ಕೆತ್ತಿಸಿದನು.

2 ದಿನವೃತ್ತಾಂತ 3:14

ತೆರೆಯನ್ನು ನೀಲ ಧೂಮ್ರ ರಕ್ತವರ್ಣಗಳಿಂದಲೂ ನಯವಾದ ನಾರಿನ ವಸ್ತ್ರದಿಂದಲೂ ಮಾಡಿಸಿ ಅದರಲ್ಲಿ ಕೆರೂಬಿಗಳನ್ನು ಮಾಡಿಸಿದನು.

Interlinear

Choose Theme