ಆ ಕೆರೂಬಿಗಳು ರೆಕ್ಕೆಗಳನ್ನು ಚಾಚಿರುವದರಿಂದ ಒಂದು ಕೆರೊಬಿಯ ರೆಕ್ಕೆಯು ಈ ಭಾಗದ ಗೋಡೆಯನ್ನೂ ಮತ್ತೊಂದು ಕೆರೂಬಿಯ ರೆಕ್ಕೆಯು ಆ ಭಾಗದ ಗೋಡೆಯನ್ನೂ ಮುಟ್ಟಿತು; ಮನೆಯ ಮಧ್ಯದಲ್ಲಿ ಒಂದರ ರೆಕ್ಕೆ ಮತ್ತೊಂದರ ರೆಕ್ಕೆಯನ್ನು ಮುಟ್ಟಿತು.
Cross references
ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿದವುಗ ಳಾಗಿಯೂ ರೆಕ್ಕೆಗಳಿಂದ ಕರುಣಾಸನವನ್ನು ಮುಚ್ಚುವವು ಗಳಾಗಿಯೂ ಒಂದರ ಮುಖವನ್ನು ಒಂದು ನೋಡು ವವುಗಳಾಗಿಯೂ ಇರಬೇಕು. ಕೆರೂಬಿಗಳ ಮುಖಗಳು ಕರುಣಾಸನದ ಕಡೆಗೆ ತಿರುಗಿರಬೇಕು.
ಆ ಕೆರೂಬಿ ಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಹರಡಿಕೊಂಡು ಕರುಣಾಸನವನ್ನು ಮುಚ್ಚಿದಂತಿದ್ದವು, ಆ ಕೆರೂಬಿಯರ ಮುಖಗಳು ಒಂದನ್ನೊಂದು ನೋಡುತ್ತಿರುವಂತೆಯೂ ಕರುಣಾಸನವನ್ನು ನೋಡುತ್ತಿರುವಂತೆಯೂ ಇದ್ದವು.
ಇದಲ್ಲದೆ ಯಾಜಕರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಮಹಾಪರಿಶುದ್ಧ ಸ್ಥಳವೆಂಬ ದೈವೋ ಕ್ತಿಯ ಮಂದಿರದ ಸ್ಥಾನಕ್ಕೆ ತಂದು ಕೆರೂಬಿಗಳ ರೆಕ್ಕೆಗಳ ಕೆಳಗೆ ಅದರ ಸ್ಥಳದಲ್ಲಿ ಇಟ್ಟರು.
ಕೆರೂಬಿಗಳು ಎರಡು ರೆಕ್ಕೆಗಳನ್ನು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದ್ದವು. ಹೀಗೆಯೇ ಕೆರೂಬಿಗಳು ಮಂಜೂಷವನ್ನೂ ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿದ್ದವು.
ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳ ಉದ್ದವಾಗಿ ದ್ದವು. ಒಂದು ರೆಕ್ಕೆಯು ಐದು ಮೊಳವಾಗಿದ್ದು ಆಲ ಯದ ಗೋಡೆಯ ವರೆಗೆ ಮುಟ್ಟಿತ್ತು; ಮತ್ತೊಂದು ರೆಕ್ಕೆ ಐದು ಮೊಳವಾಗಿದ್ದು ಇನ್ನೊಂದು ಕೆರೂಬಿಯ ರೆಕ್ಕೆಯ ವರೆಗೂ ಮುಟ್ಟಿತ್ತು.
ಕೆರೂಬಿಗಳು ಮಂಜೂ ಷದ ಸ್ಥಳದ ಮೇಲೆ ತಮ್ಮ ರೆಕ್ಕೆಗಳನ್ನು ಚಾಚಿಕೊಂಡಿ ದ್ದವು; ಹೀಗೆಯೇ ಕೆರೂಬಿಗಳು ಮಂಜೂಷವನ್ನೂ ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿಕೊಂಡಿ ದ್ದವು.