ಅದು ಹನ್ನೆರಡು ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರಕ್ಕೂ ಮೂರು ಪಶ್ಚಿಮಕ್ಕೂ ಮೂರು ದಕ್ಷಿಣಕ್ಕೂ ಮೂರು ಪೂರ್ವಕ್ಕೂ ನೋಡುತ್ತಾ ಇದ್ದವು. ಆ ಸಮುದ್ರವು ಅವುಗಳ ಮೇಲೆ ಇತ್ತು; ಅವುಗಳ ಹಿಂಭಾಗಗಳೆಲ್ಲಾ ಒಳಪಾರ್ಶ್ವದಲ್ಲಿ ಇದ್ದವು.
Cross references
ಒಂದು ಸಮುದ್ರವೂ ಸಮುದ್ರದ ಕೆಳಗಿರುವ ಹನ್ನೆರಡು ಎತ್ತು ಗಳೂ ಪಾತ್ರೆಗಳೂ ಸಲಿಕೆಗಳೂ ಬೋಗುಣಿಗಳೂ.
ಅದು ಹನ್ನೆರಡು ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರಕ್ಕೂ ಮೂರು ಪಶ್ಚಿಮಕ್ಕೂ ಮೂರು ದಕ್ಷಿಣಕ್ಕೂ ಮೂರು ಪೂರ್ವಕ್ಕೂ ನೋಡು ತ್ತಿದ್ದವು. ಆ ಸಮುದ್ರವು ಅವುಗಳ ಮೇಲೆ ಇತ್ತು,
ಅವು ಗಳ ಮುಖಗಳ ರೂಪದ ಪ್ರಕಾರ ಅವು ನಾಲ್ಕು ಜೀವಿಗಳು ಮನುಷ್ಯನ ರೂಪದ ಮುಖವನ್ನು ಹೊಂದಿದ್ದವು; ಬಲಗಡೆಯಲ್ಲಿ ಸಿಂಹದ ಮುಖವೂ ಎಡಗಡೆ ಯಲ್ಲಿ ಎತ್ತಿನ ಮುಖವೂ ಆ ನಾಲ್ಕಕ್ಕೆ ಹದ್ದಿನ ಮುಖವೂ ಇತ್ತು.
ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.
ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
ಕಣತುಳಿಯುವ ಎತ್ತಿನ ಬಾಯನ್ನು ನೀನು ಕಟ್ಟಬಾರದು ಎಂದು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದದೆ. ದೇವರು ಚಿಂತಿಸು ವದು ಎತ್ತುಗಳಿಗಾಗಿಯೋ?
ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ಇತ್ತು. ಸಿಂಹಾಸನದ ಮಧ್ಯದಲ್ಲಿ ಮತ್ತು ಅದರ ಸುತ್ತಲೂ ನಾಲ್ಕು ಜೀವಿಗಳಿದ್ದವು; ಅವುಗಳಿಗೆ ಹಿಂದೆ ಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.