Home Bibles 1 ಅರಸುಗಳು 8:15 · ಕನ್ನಡ ಬೈಬಲ್
1 ಅರಸುಗಳು 8:15 · ಕನ್ನಡ ಬೈಬಲ್

ಅವನುನನ್ನ ತಂದೆಯಾದ ದಾವೀದನ ಸಂಗಡ ಮಾತನಾಡಿ ತನ್ನ ಕೈಯಿಂದ ನೆರವೇರಿಸಿದ ಇಸ್ರಾಯೇಲಿನ ದೇವ ರಾದ ಕರ್ತನು ಸ್ತುತಿಸಲ್ಪಡಲಿ. ಆತನು ಹೇಳಿದ್ದೇ ನಂದರೆ--

Cross references

ಯೆಹೋಶುವ 21:45

ಕರ್ತನು ಇಸ್ರಾಯೇಲ್‌ ಮನೆಗೆ ಹೇಳಿದ ಒಳ್ಳೇ ವಿಷಯಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ; ಎಲ್ಲಾ ನೆರವೇರಿದವು.

ಯೆಹೋಶುವ 23:15

ಈಗ ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಒಳ್ಳೇ ಕಾರ್ಯಗಳೆಲ್ಲಾ ನಿಮಗೆ ಹೇಗೆ ಸಂಭವಿಸಿದವೋ ಹಾಗೆಯೇ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ತನ್ನ ಆಜ್ಞೆ ಗಳನ್ನು ನೀವು ವಿಾರಿ, ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಕರ್ತನು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವನು.ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು.

1 ಸಮುವೇಲ 25:32

ಆಗ ದಾವೀದನು ಅಬೀಗೈಲಳಿಗೆ--ನನ್ನನ್ನು ಎದುರು ಗೊಳ್ಳುವದಕ್ಕೆ ಈ ಹೊತ್ತು ನಿನ್ನನ್ನು ಕಳುಹಿಸಿದ ಇಸ್ರಾ ಯೇಲಿನ ದೇವರಾದ ಕರ್ತನಿಗೆ ಸ್ತೋತ್ರವಾಗಲಿ.

2 ಸಮುವೇಲ 7:5

ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ--ಕರ್ತನು ಹೇಳಬೇಕಾದ ದ್ದೇನಂದರೆ--ನಾನು ವಾಸವಾಗಿರುವದಕ್ಕೆ ನೀನು ನನಗೆ ಮನೆಯನ್ನು ಕಟ್ಟುವಿಯೋ?

2 ಸಮುವೇಲ 7:12

ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು.

2 ಸಮುವೇಲ 7:25

ಈಗ ಓ ಕರ್ತನಾದ ದೇವರೇ, ನೀನು ನಿನ್ನ ದಾಸನನ್ನು ಕುರಿತೂ ಅವನ ಮನೆಯನ್ನು ಕುರಿತೂ ಹೇಳಿದ ವಾಕ್ಯವನ್ನು ಶಾಶ್ವತಕ್ಕೂ ಸ್ಥಿರಪಡಿಸಿ ನೀನು ಹೇಳಿದ ಹಾಗೆಯೇ ಮಾಡು.

2 ಸಮುವೇಲ 7:28

ಈಗ ಓ ಕರ್ತನಾದ ದೇವರೇ, ನೀನೇ ದೇವರಾದಾತನು, ನಿನ್ನ ವಾಕ್ಯಗಳು ಸತ್ಯವು; ನಿನ್ನ ದಾಸನಿಗೆ ಈ ಒಳ್ಳೇದನ್ನು ವಾಗ್ದಾನಮಾಡಿದಿ.ಆದಕಾರಣ ಈಗ ನಿನ್ನ ದಾಸನ ಮನೆಯು ನಿನ್ನ ಮುಂದೆ ಸದಾಕಾಲಕ್ಕೂ ಇರುವ ಹಾಗೆ ಅದನ್ನು ಆಶೀರ್ವದಿಸಲು ನಿನ್ನ ಚಿತ್ತವಾಗಿರಲಿ, ಯಾಕಂದರೆ ಓ ಕರ್ತನಾದ ದೇವರೇ, ನೀನು ಅದನ್ನು ಹೇಳಿದಿ; ನಿನ್ನ ದಾಸನ ಮನೆಯು ಸದಾಕಾಲವೂ ನಿನ್ನ ಆಶೀರ್ವಾದದಿಂದ ಆಶೀರ್ವದಿಸಲ್ಪಟ್ಟಿರಲಿ ಎಂದು ಹೇಳಿದನು.

1 ದಿನವೃತ್ತಾಂತ 17:12

ಅವನು ನನಗೆ ಮನೆಯನ್ನು ಕಟ್ಟುವನು. ಅವನ ಸಿಂಹಾಸನವನ್ನು ಎಂದೆಂದಿಗೂ ಸ್ಥಿರಮಾಡುವೆನು.

1 ದಿನವೃತ್ತಾಂತ 29:10

ಆಗ ದಾವೀದನು ಸಮಸ್ತ ಕೂಟದ ಮುಂದೆ ಕರ್ತನನ್ನು ಕೊಂಡಾಡಿ ಹೇಳಿದ್ದೇನಂದರೆ -- ನಮ್ಮ ತಂದೆ ಯಾದ ಇಸ್ರಾಯೇಲಿನ ದೇವರಾದ ಕರ್ತನೇ, ನೀನು ಯುಗಯುಗಾಂತರಗಳಿಂದ ಯುಗಯುಗಾಂತರ ಗಳಿಗೂ ಸ್ತುತಿಸಲ್ಪಡುವವನಾಗಿದ್ದೀ.

1 ದಿನವೃತ್ತಾಂತ 29:20

ದಾವೀದನು ಸಮಸ್ತ ಸಭೆಗೆ--ಈಗ ನಿಮ್ಮ ದೇವರಾದ ಕರ್ತನನ್ನು ಸ್ತುತಿಸಿರಿ ಅಂದನು. ಆಗ ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಕರ್ತ ನನ್ನು ಸ್ತುತಿಸುತ್ತಾ ತಮ್ಮ ತಲೆಗಳನ್ನು ಬಾಗಿಸಿ ಕರ್ತನನ್ನೂ ಅರಸನನ್ನೂ ಆರಾಧಿಸಿದರು.

2 ದಿನವೃತ್ತಾಂತ 6:4

ಅವನು--ನನ್ನ ತಂದೆಯಾದ ದಾವೀದನ ಸಂಗಡ ಮಾತನಾಡಿದ್ದನ್ನು ತನ್ನ ಕೈಯಿಂದ ನೆರವೇರಿಸಿದ ಇಸ್ರಾಯೇಲ್ಯರ ದೇವರಾದ ಕರ್ತನು ಸ್ತುತಿಸಲ್ಪಡಲಿ.

2 ದಿನವೃತ್ತಾಂತ 20:26

ನಾಲ್ಕನೇ ದಿವಸ ದಲ್ಲಿ ಅವರು ಬೆರಾಕವೆಂಬ ತಗ್ಗಿನಲ್ಲಿ ಕೂಡಿಕೊಂಡು ಅಲ್ಲಿ ಕರ್ತನನ್ನು ಸ್ತುತಿಸಿದರು. ಆದಕಾರಣ ಇಂದಿನ ವರೆಗೂ ಆ ಸ್ಥಳಕ್ಕೆ ಬೆರಾಕ ತಗ್ಗು ಎಂದು ಕರೆಯುತ್ತಾರೆ.

ನೆಹೆಮ್ಯ 9:5

ಲೇವಿಯರಾದ ಯೇಷೂವನೂ ಕದ್ಮೀಯೇಲನೂ ಬಾನೀಯೂ ಹಷ ಬ್ನೆಯೂ ಶೇರೇಬ್ಯನೂ ಹೋದೀಯನೂ ಶೆಬನ್ಯನೂ ಪೆತಹ್ಯನೂ ಜನರಿಗೆ ಹೇಳಿದ್ದೇನಂದರೆ--ನೀವು ಎದ್ದು ನಿಮ್ಮ ದೇವರಾಗಿರುವ ಕರ್ತನನ್ನು ಎಂದೆಂದಿಗೂ ಸ್ತುತಿಸಿರಿ ಅಂದನು. ಹೀಗೆ ಅವರು--ಸಕಲ ಸ್ತುತಿ ಸ್ತೋತ್ರಗಳಿಗಿಂತ ಉನ್ನತವಾದ ನಿನ್ನ ಘನವುಳ್ಳ ಹೆಸರಿಗೆ ಕೊಂಡಾಟವಾಗಲಿ.

ಕೀರ್ತನೆಗಳು 41:13

ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಕ್ಕೂ ಕೊಂಡಾಟ ವಾಗಲಿ. ಆಮೆನ್‌. ಆಮೆನ್‌.

ಕೀರ್ತನೆಗಳು 72:18

ಒಬ್ಬನೇ ಅದ್ಭುತಗಳನ್ನು ಮಾಡುವ ಇಸ್ರಾಯೇಲಿನ ದೇವರಾಗಿರುವ ಕರ್ತನಾದ ದೇವರಿಗೆ ಸ್ತೋತ್ರವಾಗಲಿ.

ಕೀರ್ತನೆಗಳು 115:18

ನಾವಾದರೋ ಇಂದಿನಿಂದ ಯುಗಯುಗಕ್ಕೂ ಕರ್ತನನ್ನು ಸ್ತುತಿಸುವೆವು. ಕರ್ತನನ್ನು ಸ್ತುತಿಸಿರಿ.

ಕೀರ್ತನೆಗಳು 117:1

ಎಲ್ಲಾ ಜನಾಂಗಗಳೇ, ಕರ್ತನನ್ನು ಸ್ತುತಿಸಿರಿ; ಸರ್ವಜನರೇ, ಕರ್ತನನ್ನು ಸ್ತುತಿಸಿರಿ.ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ.

ಕೀರ್ತನೆಗಳು 138:2

ನಿನ್ನ ಪರಿಶುದ್ಧ ಮಂದಿರದ ಕಡೆಗೆ ಅಡ್ಡ ಬಿದ್ದು ನಿನ್ನ ಪ್ರೀತಿ ಕರುಣೆಯ ನಿಮಿತ್ತವೂ ನಿನ್ನ ಸತ್ಯದ ನಿಮಿತ್ತವೂ ನಿನ್ನ ಹೆಸರನ್ನು ಕೊಂಡಾಡುವೆನು; ನಿನ್ನ ವಾಕ್ಯವನ್ನು ನಿನ್ನ ಎಲ್ಲಾ ಹೆಸರಿಗಿಂತಲೂ ಮಿಗಿಲಾಗಿ ಘನಪಡಿಸಿದ್ದೀ.

ಯೆಶಾಯ 1:20

ನೀವು ತಿರಸ್ಕರಿಸಿ ತಿರುಗಿಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಕರ್ತನ ಬಾಯಿಯೇ ಇದನ್ನು ನುಡಿದಿದೆ.

ಮತ್ತಾಯ 24:35

ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.

ಲೂಕ 1:54

ತನ್ನ ಕರುಣೆಯ ಜ್ಞಾಪಕಾರ್ಥ ವಾಗಿ ತನ್ನ ಸೇವಕನಾದ ಇಸ್ರಾಯೇಲನಿಗೆ ಸಹಾಯ ಮಾಡಿದ್ದಾನೆ.

ಲೂಕ 1:68

ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿ ಹೊಂದಲಿ, ಯಾಕಂದರೆ ಆತನು ತನ್ನ ಜನರನ್ನು ಸಂಧಿಸಿ ಅವರನ್ನು ವಿಮೋಚಿ ಸಿದ್ದಾನೆ.

ಲೂಕ 1:70

ಲೋಕಾದಿಯಿಂದ ಆತನು ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ

ಲೂಕ 1:72

ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು

ಎಫೆಸದವರಿಗೆ 1:3

ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.

1 ಪೇತ್ರ 1:3

ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ

Interlinear

Choose Theme