ಆಗ ಅವನು ಮಹಾ ಶಬ್ದದಿಂದ ಇಸ್ರಾಯೇಲಿನ ಸಮಸ್ತ ಸಭೆಯನ್ನು ಆಶೀರ್ವದಿಸಿ--ತನ್ನ ಜನರಾದ ಇಸ್ರಾಯೇಲ್ಯರಿಗೆ ತಾನು ಮಾತು ಕೊಟ್ಟ ಎಲ್ಲಾದರ ಪ್ರಕಾರ ವಿಶ್ರಾಂತಿಯನ್ನು ಕೊಟ್ಟ ಕರ್ತನು ಸ್ತುತಿಸ ಲ್ಪಡಲಿ.
Cross references
ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ ಇಗೋ, ಕರ್ತನು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆಗ ಮೋಶೆಯು ಅವರನ್ನು ಆಶೀರ್ವದಿಸಿದನು.
ನೀನು ಆರೋನನ ಸಂಗ ಡಲೂ ಅವನ ಕುಮಾರರ ಸಂಗಡಲೂ ಮಾತನಾಡಿ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್ ಮಕ್ಕಳನ್ನು ಆಶೀರ್ವದಿಸುವಾಗ ಈ ಪ್ರಕಾರ ಅವರಿಗೆ ಹೇಳಬೇಕು.
ದಾವೀದನು ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಸೈನ್ಯಗಳ ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ ಜನರಿಗೆಲ್ಲಾ ಅಂದರೆ ಇಸ್ರಾಯೇಲಿನ ಸಮೂಹಕ್ಕೆಲ್ಲಾ
ಅರಸನು ತನ್ನ ಮುಖವನ್ನು ತಿರುಗಿಸಿ ಇಸ್ರಾಯೇ ಲಿನ ಸಭೆಯನ್ನೆಲ್ಲಾ ಆಶೀರ್ವದಿಸಿದನು. (ಇಸ್ರಾ ಯೇಲಿನ ಸಭೆಯೆಲ್ಲಾ ನಿಂತಿರುವಾಗ)
ದಾವೀದನು ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಅವನು ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ
ಹಿಜ್ಕೀಯನೂ ಪ್ರಧಾನರೂ ಬಂದು ರಾಶಿಗಳನ್ನು ನೋಡಿದಾಗ ಅವರು ಕರ್ತನನ್ನೂ ಆತನ ಜನವಾದ ಇಸ್ರಾಯೇ ಲನ್ನೂ ಸ್ತುತಿಸಿದರು.