Home Bibles 1 ಅರಸುಗಳು 8:63 · ಕನ್ನಡ ಬೈಬಲ್
1 ಅರಸುಗಳು 8:63 · ಕನ್ನಡ ಬೈಬಲ್

ಸೊಲೊಮೋನನು ಕರ್ತನಿಗೆ ಅರ್ಪಿಸಿದ ಸಮಾ ಧಾನದ ಬಲಿಗಳಿಗೋಸ್ಕರ ಇಪ್ಪತ್ತೆರಡು ಸಾವಿರ ಎತ್ತು ಗಳನ್ನೂ ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನೂ ಅರ್ಪಿಸಿದನು. ಹೀಗೆಯೇ ಅರಸನೂ ಇಸ್ರಾಯೇಲಿನ ಸಮಸ್ತ ಮಕ್ಕಳೂ ಕರ್ತನ ಮಂದಿರವನ್ನು ಪ್ರತಿಷ್ಠೆ ಮಾಡಿದರು.

Cross references

ಲೇವ್ಯಕಾಂಡ 3:1

ಅವನ ಕಾಣಿಕೆಯು ಸಮಾಧಾನದ ಬಲಿಯ ಅರ್ಪಣೆಯಾಗಿದ್ದು ಅದನ್ನು ಮಂದೆಯಿಂದ ಅರ್ಪಿಸುವದಾದರೆ ಅದು ಗಂಡಾಗಲಿ ಇಲ್ಲವೆ ಹೆಣ್ಣಾಗಲಿ ಅದನ್ನು ಅವನು ಕರ್ತನ ಮುಂದೆ ದೋಷವಿಲ್ಲದ್ದಾಗಿ ಸಮರ್ಪಿಸಲಿ.

ಅಂಕೆಗಳ ಪುಸ್ತಕ 7:10

ಪ್ರಧಾನರು ಬಲೀಪೀಠದ ಪ್ರತಿಷ್ಠೆಗಾಗಿ ಅಭಿಷೇ ಕಿಸಿದ ದಿನದಲ್ಲಿ ಅದನ್ನು ಅರ್ಪಿಸಿದರು. ಪ್ರಧಾನರು ಬಲಿಪೀಠದ ಮುಂದೆ ತಮ್ಮ ಅರ್ಪಣೆಯನ್ನು ಅರ್ಪಿಸಿ ದರು.

ಅಂಕೆಗಳ ಪುಸ್ತಕ 7:84

ಇದು ಬಲಿಪೀಠದ ಪ್ರತಿಷ್ಠೆಯು: ಅದನ್ನು ಅಭಿಷೇಕ ಮಾಡಿದ ದಿನದಲ್ಲಿ ಇಸ್ರಾಯೇಲಿನ ಪ್ರಧಾನರು ಅರ್ಪಿಸಿದ್ದು ಬೆಳ್ಳಿಯ ಹನ್ನೆರಡು ತಟ್ಟೆಗಳೂ ಬೆಳ್ಳಿಯ ಹನ್ನೆರಡು ಬಟ್ಟಲುಗಳೂ ಬಂಗಾರದ ಹನ್ನೆರಡು ಚಮಚಗಳೂ.

1 ದಿನವೃತ್ತಾಂತ 29:21

ಇದಲ್ಲದೆ ಮಾರಣೆ ದಿವಸದಲ್ಲಿ ಅವರು ಕರ್ತ ನಿಗೆ ಬಲಿಗಳನ್ನು ವಧಿಸಿ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಿದರು. ಸಾವಿರ ಹೋರಿಗಳನ್ನೂ ಸಾವಿರ ಟಗರು ಗಳನ್ನೂ ಸಾವಿರ ಕುರಿಮರಿಗಳನ್ನೂ ಅವುಗಳ ಪಾನದ ಅರ್ಪಣೆಗಳನ್ನೂ ಸಮಸ್ತ ಇಸ್ರಾಯೇಲಿಗೋಸ್ಕರ ಬಹಳವಾಗಿ ಬಲಿಗಳನ್ನೂ ಅರ್ಪಿಸಿದರು. ಆ ದಿವಸದಲ್ಲಿ ಮಹಾಸಂತೋಷದಿಂದ ಕರ್ತನ ಮುಂದೆ ತಿಂದು ಕುಡಿದರು.

2 ದಿನವೃತ್ತಾಂತ 2:4

ಇಗೋ, ನನ್ನ ದೇವರಾದ ಕರ್ತನಿಗೆ ಅದನ್ನು ಪ್ರತಿಷ್ಠೆ ಮಾಡುವದಕ್ಕೂ ಆತನ ಮುಂದೆ ಪರಿಮಳ ಧೂಪವನ್ನು ಸುಡುವದಕ್ಕೂ ನಿತ್ಯ ಸಮ್ಮುಖದ ರೊಟ್ಟಿ ಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮಾವಾಸ್ಯೆಗಳ ಲ್ಲಿಯೂ ಇಸ್ರಾಯೇಲಿಗೆ ನಿರಂತರವಾಗಿರಲು ನೇಮಿ ಸಿದ ನಮ್ಮ ದೇವರಾದ ಕರ್ತನ ಹಬ್ಬಗಳಲ್ಲಿಯೂ ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋ ಸ್ಕರವೂ ಆತನ ನಾಮಕ್ಕೆ ಆಲಯವನ್ನು ಕಟ್ಟಿಸುತ್ತೇನೆ.

2 ದಿನವೃತ್ತಾಂತ 7:5

ಅರಸನಾದ ಸೊಲೊ ಮೋನನು ಇಪ್ಪತ್ತೆರಡು ಸಾವಿರ ಎತ್ತುಗಳನ್ನೂ ಲಕ್ಷದ ಇಪ್ಪತ್ತುಸಾವಿರ ಕುರಿಗಳನ್ನೂ ಬಲಿಯಾಗಿ ಅರ್ಪಿಸಿ ದನು. ಹೀಗೆಯೇ ಅರಸನೂ ಸಮಸ್ತ ಜನರೂ ದೇವರ ಆಲಯವನ್ನು ಪ್ರತಿಷ್ಠೆಮಾಡಿದರು.

2 ದಿನವೃತ್ತಾಂತ 15:11

ಅದೇ ಕಾಲದಲ್ಲಿ ತಾವು ತಂದ ಕೊಳ್ಳೆಯಿಂದ ಏಳುನೂರು ಎತ್ತುಗಳನ್ನೂ ಏಳು ಸಾವಿರ ಕುರಿಗಳನ್ನೂ ಕರ್ತನಿಗೆ ಬಲಿಅರ್ಪಿಸಿದರು.

2 ದಿನವೃತ್ತಾಂತ 29:32

ಸಭೆಯು ತಂದ ದಹನ ಬಲಿಗಳ ಲೆಕ್ಕ ವೇನಂದರೆ: ಎಪ್ಪತ್ತು ಹೋರಿಗಳು, ನೂರು ಟಗರು ಗಳು, ಇನ್ನೂರು ಕುರಿಮರಿಗಳು. ಇವೆಲ್ಲಾ ಕರ್ತನಿಗೆ ಅರ್ಪಿಸಿದ ದಹನಬಲಿಗಳಾಗಿದ್ದವು.

2 ದಿನವೃತ್ತಾಂತ 30:24

ಯೆಹೂದದ ಅರಸನಾದ ಹಿಜ್ಕೀಯನು ಸಭೆಗೆ ಸಾವಿರ ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ಕೊಟ್ಟನು. ಇದಲ್ಲದೆ ಪ್ರಧಾನರು ಕೂಟಕ್ಕೆ ಸಾವಿರ ಹೋರಿಗಳನ್ನೂ ಹತ್ತು ಸಾವಿರ ಕುರಿಗಳನ್ನೂ ಕೊಟ್ಟರು. ಯಾಜಕರಲ್ಲಿ ಅನೇಕರು ತಮ್ಮನ್ನು ಪರಿಶುದ್ಧ ಮಾಡಿ ಕೊಂಡರು.

2 ದಿನವೃತ್ತಾಂತ 35:7

ಆಗ ಯೋಷೀಯನು ಸಿದ್ಧವಾಗಿದ್ದ ಸಮಸ್ತ ಜನ ರಿಗೆ ಪಸ್ಕದ ಬಲಿಗೋಸ್ಕರ ಮಂದೆಯಿಂದ ಮೂವತ್ತು ಸಾವಿರ ಕುರಿಮರಿಗಳನ್ನೂ ಮೇಕೆಯ ಮರಿಗಳನ್ನೂ ಕೊಟ್ಟನು. ಇದಲ್ಲದೆ ಮೂರು ಸಾವಿರ ಎತ್ತುಗಳನ್ನು ಕೊಟ್ಟನು; ಇವೆಲ್ಲಾ ಅರಸನ ಸೊತ್ತಿನಿಂದಲೇ

ಎಜ್ರಾ 6:16

ಆಗ ಇಸ್ರಾಯೇಲ್ಯರ ಮಕ್ಕಳೂ ಯಾಜಕರೂ ಲೇವಿಯರೂ ಸೆರೆಯಿಂದ ಬಂದ ಮಿಕ್ಕಾ ದವರೂ ದೇವರ ಆಲಯವನ್ನು ಸಂತೋಷದಿಂದ ಪ್ರತಿಷ್ಠೆಮಾಡಿದರು.

ನೆಹೆಮ್ಯ 12:27

ಯೆರೂಸಲೇಮಿನ ಗೋಡೆಯನ್ನು ಪ್ರತಿಷ್ಠೆ ಮಾಡುವಾಗ ಸ್ತುತಿಗಳಿಂದಲೂ ಹಾಡುವದರಿಂದಲೂ ತಾಳಗಳಿಂದಲೂ ವೀಣೆಗಳಿಂದಲೂ ಕಿನ್ನರಿಗಳಿಂದಲೂ ಪ್ರತಿಷ್ಠೆಯನ್ನು ಸಂತೋಷವಾಗಿ ಆಚರಿಸುವದಕ್ಕೆ ಲೇವಿ ಯರನ್ನು ಯೆರೂಸಲೇಮಿಗೆ ಬರಮಾಡುವ ನಿಮಿತ್ತವಾಗಿ ಅವರನ್ನು ಅವರ ಸಮಸ್ತ ಸ್ಥಳಗಳಲ್ಲಿ ಹುಡುಕಿದರು.

ಕೀರ್ತನೆಗಳು 30:1

ಓ ಕರ್ತನೇ, ನಿನ್ನನ್ನು ಕೊಂಡಾಡುವೆನು; ನೀನು ನನ್ನ ಶತ್ರುಗಳು ನನ್ನ ವಿಷಯದಲ್ಲಿ ಸಂತೋಷಪಡದಂತೆ ಮಾಡಿ ನನ್ನನ್ನು ಮೇಲಕ್ಕೆ ಎತ್ತಿದ್ದೀ.

ಯೆಹೆಜ್ಕೇಲ 45:17

ಹಬ್ಬಗಳಲ್ಲಿಯೂ ಅಮಾ ವಾಸ್ಯೆಗಳಲ್ಲಿಯೂ ಸಬ್ಬತ್ತುಗಳಲ್ಲಿಯೂ ಇಸ್ರಾಯೇಲಿನ ಮನೆತನದವರ ಎಲ್ಲಾ ಸಭೆಗಳಲ್ಲಿಯೂ ಹೋಮ ಗಳನ್ನು ಅರ್ಪಣೆಗಳನ್ನು ನೈವೇದ್ಯಗಳನ್ನು ಕೊಡುವದು ಪ್ರಭುವಿನ ಕೆಲಸವಾಗಿರುವದು; ಅವನೇ ಇಸ್ರಾಯೇ ಲಿನ ಮನೆತನದವರಿಗಾಗಿ ಸಮಾಧಾನಕ್ಕಾಗಿ ಪಾಪಬಲಿ ಯನ್ನೂ ಅರ್ಪಣೆಯನ್ನೂ ದಹನಬಲಿಯನ್ನೂ ಸಮಾಧಾನ ಯಜ್ಞವನ್ನೂ ಸಿದ್ಧಮಾಡಬೇಕು.

ಮೀಕ 6:7

ಸಾವಿರ ಟಗರುಗಳಿಗಾದರೂ ಎಣ್ಣೆಯ ಹತ್ತು ಸಾವಿರ ನದಿಗಳಿಗಾದರೂ ಕರ್ತನು ಮೆಚ್ಚು ವನೋ? ನನ್ನ ದ್ರೋಹಕ್ಕಾಗಿ ನನ್ನ ಚೊಚ್ಚಲ ಮಗ ನನ್ನೂ ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲ ವನ್ನೂ ಕೊಡಲೋ?

ಯೋಹಾನ 10:22

ಯೆರೂಸಲೇಮಿನಲ್ಲಿ (ದೇವಾಲಯದ) ಪ್ರತಿ ಷ್ಠೆಯ ಹಬ್ಬವಿತ್ತು; ಆಗ ಚಳಿಗಾಲವಾಗಿತ್ತು.

Interlinear

Choose Theme