Home Bibles ☰ Books 1 ಪೇತ್ರ 2:15 · ಕನ್ನಡ ಬೈಬಲ್
1 ಪೇತ್ರ 2:15 · ಕನ್ನಡ ಬೈಬಲ್

ನೀವು ಒಳ್ಳೇ ನಡತೆಯಿಂದ ತಿಳುವಳಿಕೆಯಿಲ್ಲದ ಮೂಢಜನರ ಬಾಯಿ ಮುಚ್ಚುವಂತೆ ಮಾಡುವದೇ ದೇವರ ಚಿತ್ತ.

Cross references

ದ್ವಿತೀಯೋಪದೇಶಕಾಂಡ 32:6

ಓ ಮೂರ್ಖರಾದ ಬುದ್ಧಿಹೀನ ಜನರೇ, ಕರ್ತನಿಗೆ ಹೀಗೆ ಪ್ರತಿಯಾಗಿ ಕೊಡುತ್ತೀರೋ? ಆತನು ನಿನ್ನನ್ನು ಕೊಂಡುಕೊಂಡ ತಂದೆಯಲ್ಲವೋ? ಆತನು ನಿನ್ನನ್ನು ಸೃಷ್ಟಿಮಾಡಿ ಸ್ಥಿರಪಡಿಸಿದ್ದಾನೆ.

ಯೋಬ 2:10

ಆದರೆ ಅವನು ಅವಳಿಗೆ--ಮೂರ್ಖ ಹೆಂಗಸರಲ್ಲಿ ಒಬ್ಬಳು ಮಾತನಾಡುವ ಪ್ರಕಾರ ನೀನೂ ಮಾತನಾಡುವಿಯಾ? ದೇವರ ಕೈಯಿಂದ ಒಳ್ಳೇದನ್ನು ಹೊಂದುತ್ತೇವಲ್ಲಾ? ಕೆಟ್ಟದ್ದನ್ನು ಹೊಂದುವದು ಬೇಡವೋ ಅಂದನು. ಇವೆಲ್ಲವುಗಳಲ್ಲಿ ಯೋಬನು ತನ್ನ ತುಟಿಗಳಿಂದ ಪಾಪಮಾಡಲಿಲ್ಲ.

ಯೋಬ 5:16

ಆದದರಿಂದ ದರಿದ್ರನಿಗೆ ನಿರೀಕ್ಷೆ ಯುಂಟು; ಅಪರಾಧವು ಬಾಯಿ ಮುಚ್ಚುವದು.

ಕೀರ್ತನೆಗಳು 5:5

ನಿನ್ನ ದೃಷ್ಟಿಯಲ್ಲಿ ಮೂರ್ಖರು ನಿಂತುಕೊಳ್ಳುವದಿಲ್ಲ. ದುಷ್ಟ ಕೆಲಸ ಮಾಡುವವರೆಲ್ಲರನ್ನು ನೀನು ಹಗೆ ಮಾಡುತ್ತೀ.

ಕೀರ್ತನೆಗಳು 107:42

ನೀತಿವಂತರು ನೋಡಿ ಸಂತೋ ಷಪಡುವರು; ಆದರೆ ಎಲ್ಲಾ ಅಕ್ರಮಗಾರರು ಬಾಯಿ ಮುಚ್ಚಿಕೊಳ್ಳುವರು.ಜ್ಞಾನಿಯು ಯಾವನೋ, ಅವನು ಇವುಗಳನ್ನು ಗಮನಿಸುವನು; ಅವರು ಕರ್ತನ ಪ್ರೀತಿ ಕರುಣೆಯನ್ನು ಗ್ರಹಿಸಿಕೊಳ್ಳುವರು.

ಸಾಮೇತಿಗಳು 9:6

ಮೂಢರನ್ನು ಬಿಟ್ಟು ಬಾಳು ಮತ್ತು ವಿವೇಕದ ಮಾರ್ಗದಲ್ಲಿ ಹೋಗು ಎಂದೂ ಕೂಗುತ್ತಾಳೆ.

ಯೆರೆಮಿಯ 4:22

ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.

ಮತ್ತಾಯ 7:26

ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಹೋಲಿಕೆಯಾಗಿರುವನು.

ಮತ್ತಾಯ 25:2

ಅವರಲ್ಲಿ ಐದುಮಂದಿ ಬುದ್ಧಿವಂತೆಯರೂ ಐದು ಮಂದಿ ಬುದ್ಧಿಹೀನರೂ ಇದ್ದರು.

ರೋಮಾಪುರದವರಿಗೆ 1:21

ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.

ಗಲಾತ್ಯದವರಿಗೆ 3:1

ಓ ಬುದ್ಧಿಯಿಲ್ಲದ ಗಲಾತ್ಯದವರೇ, ಸತ್ಯಕ್ಕೆ ವಿಧೇಯರಾಗದಂತೆ ನಿಮ್ಮನ್ನು ಯಾರು ಮರುಳುಗೊಳಿಸಿದರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿ ಸ್ಪಷ್ಟವಾಗಿ ವರ್ಣಿಸಲ್ಪಟ್ಟನಲ್ಲವೇ?

ಎಫೆಸದವರಿಗೆ 6:6

ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಪ್ರಕಾರ ಕಣ್ಣಿಗೆ ಕಾಣುವಾಗ ಮಾತ್ರ ಸೇವೆ ಮಾಡದೆ ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಹೃದಯ ಪೂರ್ವಕವಾಗಿ ನಡಿಸಿರಿ.

Interlinear

Choose Theme