Home Bibles 1 ಪೇತ್ರ 2:19 · ಕನ್ನಡ ಬೈಬಲ್
1 ಪೇತ್ರ 2:19 · ಕನ್ನಡ ಬೈಬಲ್

ಒಬ್ಬನು ಅನ್ಯಾಯವಾಗಿ ಬಾಧೆಪಡುವವ ನಾಗಿದ್ದು ದೇವರ ವಿಷಯವಾದ ಮನಸ್ಸಾಕ್ಷಿಗೋಸ್ಕರ ಆ ದುಃಖವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ.

Cross references

ಯೋಬ 21:27

ಇಗೋ, ನಿಮ್ಮ ಆಲೋಚನೆಗಳನ್ನೂ ನೀವು ನನ್ನ ಮೇಲೆ ಬಲಾತ್ಕಾರಿಗಳಾಗಿ ಮಾಡುವ ಯೋಚನೆ ಗಳನ್ನೂ ತಿಳಿದಿದ್ದೇನೆ.

ಕೀರ್ತನೆಗಳು 35:19

ನನ್ನ ಶತ್ರುಗಳು ನನ್ನ ವಿಷ ಯದಲ್ಲಿ ಸುಳ್ಳಾಗಿ ಸಂತೋಷಪಡದೆ ಇರಲಿ; ಇಲ್ಲವೆ ನನ್ನನ್ನು ಕಾರಣವಿಲ್ಲದೆ ಹಗೆಮಾಡುವವರು ಕಣ್ಣು ಸನ್ನೆಮಾಡದೆ ಇರಲಿ.

ಕೀರ್ತನೆಗಳು 38:19

ಆದರೆ ನನ್ನ ಶತ್ರುಗಳು ಚುರು ಕಾಗಿ ಬಲವಾಗಿದ್ದಾರೆ; ನನ್ನನ್ನು ತಪ್ಪಾಗಿ ಹಗೆಮಾಡು ವವರು ಹೆಚ್ಚಿದ್ದಾರೆ.

ಕೀರ್ತನೆಗಳು 69:4

ಕಾರಣವಿಲ್ಲದೆ ನನ್ನನ್ನು ಹಗೆ ಮಾಡು ವವರು ನನ್ನ ತಲೆಯ ಕೂದಲುಗಳಿಗಿಂತ ಹೆಚ್ಚಾಗಿ ದ್ದಾರೆ; ನನ್ನನ್ನು ಅನ್ಯಾಯವಾಗಿ ಸಂಹರಿಸುವ ನನ್ನ ಶತ್ರುಗಳೂ ಪ್ರಬಲವಾಗಿದ್ದಾರೆ; ನಾನು ತೆಗೆದು ಕೊಳ್ಳದ್ದನ್ನು ನನ್ನಿಂದ ದೋಚಿಕೊಂಡರು.

ಕೀರ್ತನೆಗಳು 119:86

ನಿನ್ನ ಆಜ್ಞೆಗಳೆಲ್ಲಾ ನಂಬಿ ಕೆಯುಳ್ಳವುಗಳು; ನನ್ನನ್ನು ಅನ್ಯಾಯವಾಗಿ ಹಿಂಸಿ ಸುತ್ತಾರೆ. ನನಗೆ ಸಹಾಯಮಾಡು.

ಮತ್ತಾಯ 5:10

ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.

ಲೂಕ 6:32

ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ತಮ್ಮನ್ನು ಪ್ರೀತಿಸುವವ ರನ್ನೇ ಪ್ರೀತಿಸುತ್ತಾರೆ.

ಯೋಹಾನ 15:21

ಆದರೆ ಅವರು ನನ್ನನ್ನು ಕಳುಹಿಸಿದಾತನನ್ನು ತಿಳಿಯದಿರುವದರಿಂದ ನನ್ನ ಹೆಸ ರಿನ ನಿಮಿತ್ತ ಇವುಗಳನ್ನೆಲ್ಲಾ ನಿಮಗೆ ಮಾಡುವರು.

ಅಪೋಸ್ತಲರ ಕೃತ್ಯಗಳು 11:23

ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.

ರೋಮಾಪುರದವರಿಗೆ 13:5

ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಿನ ನಿಮಿತ್ತವಾಗಿಯೂ (ಅವನಿಗೆ) ಅಧೀನ ನಾಗುವದು ಅವಶ್ಯ.

1 ಕೊರಿಂಥದವರಿಗೆ 15:10

ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.

2 ಕೊರಿಂಥದವರಿಗೆ 1:12

ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.

2 ಕೊರಿಂಥದವರಿಗೆ 8:1

ಇದಲ್ಲದೆ ಸಹೋದರರೇ, ಮಕೆದೋನ್ಯದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯನ್ನು ನಿಮಗೆ ತಿಳಿಸುತ್ತೇನೆ.

2 ತಿಮೋಥೆಯ 1:12

ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.

1 ಪೇತ್ರ 2:20

ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆ ಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೇ ದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿ ದ್ದರೆ ಇದು ದೇವರಿಗೆ ಅಂಗೀಕೃತವಾಗಿದೆ.

1 ಪೇತ್ರ 3:14

ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ಸಂತೋಷವುಳ್ಳವರು. ಅವರ ಬೆದರಿಸುವಿಕೆಗೆ ಹೆದರಬೇಡಿರಿ ಮತ್ತು ಕಳವಳ ಪಡಬೇಡಿರಿ.

Interlinear

Choose Theme