Home Bibles 1 ಪೇತ್ರ 3:6 · ಕನ್ನಡ ಬೈಬಲ್
1 ಪೇತ್ರ 3:6 · ಕನ್ನಡ ಬೈಬಲ್

ಹಾಗೆಯೇ ಸಾರಳು ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು. ನೀವು ಸಾರಳ ಕುಮಾರ್ತೆಗಳಾಗಿದ್ದೀರಲ್ಲಾ; ನೀವು ಒಳ್ಳೇದನ್ನು ಮಾಡುವದಾದರೆ ಯಾವ ಭೀತಿಗೂ ಗಾಬರಿ ಪಡುವದಿಲ್ಲ.

Cross references

ಆದಿಕಾಂಡ 18:12

ಆದದರಿಂದ ಸಾರಳು ತನ್ನೊಳಗೆ ನಕ್ಕು--ನಾನು ವೃದ್ಧಳಾಗಿದ್ದೇನೆ. ನನ್ನ ಯಜಮಾನನು ಸಹ ಮುದುಕನಾಗಿದ್ದಾನೆ. ಹೀಗಿರು ವಲ್ಲಿ ನನಗೆ ಸಂತೋಷವಾದೀತೇ? ಅಂದಳು.

ಆದಿಕಾಂಡ 18:15

ಆದರೆ ಸಾರಳು ಭಯ ಪಟ್ಟು--ನಾನು ನಗಲಿಲ್ಲ ಎಂದು ಹೇಳಿ ಬೊಂಕಿದಾಗ ಆತನು--ಹಾಗಲ್ಲ, ನೀನು ನಕ್ಕದ್ದುಂಟು ಅಂದನು.

ನ್ಯಾಯಾಧಿಪತಿಗಳು 19:26

ಆ ಸ್ತ್ರೀ ಉದಯ ಕಾಲಕ್ಕೆ ಮುಂಚೆ ಬಂದು ಬೆಳಕಾಗುವ ಮಟ್ಟಿಗೂ ಅಲ್ಲಿ ತನ್ನ ಯಜಮಾನನು ಇರುವ ಮನೆಯ ಬಾಗಿಲ ಬಳಿಯಲ್ಲಿ ಬಿದ್ದಿದ್ದಳು.

ಯೆಶಾಯ 57:11

ನೀನು ಸುಳ್ಳು ಹೇಳಿ ನನ್ನನ್ನು ಜ್ಞಾಪಕ ಮಾಡದೆ ಇಲ್ಲವೆ ಅದನ್ನು ಮನಸ್ಸಿಗೆ ತಾರದೆ ಇರುವಾಗ ಯಾರಿಗೆ ಅಂಜಿಕೊಂಡು ಭಯಪಟ್ಟಿ?

ದಾನಿಯೇಲ 3:16

ಆಗ ಶದ್ರಕ್‌ ಮೇಷಕ್‌ ಅಬೇದ್‌ ನೆಗೋ ಎಂಬವರು ಅರಸನಿಗೆ ಪ್ರತ್ಯುತ್ತರವಾಗಿ--ಓ ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಉತ್ತರಕೊಡುವ ಅವಶ್ಯಕತೆ ಇಲ್ಲ.

ಮತ್ತಾಯ 26:69

ಆಗ ಪೇತ್ರನು ಭವನದ ಹೊರಗೆ ಕೂತಿರಲು ಒಬ್ಬ ಹುಡುಗಿಯು ಅವನ ಬಳಿಗೆ ಬಂದು-- ನೀನೂ ಗಲಿಲಾಯದ ಯೇಸುವಿನೊಂದಿಗೆ ಇದ್ದವನು ಅಂದಳು.

ಅಪೋಸ್ತಲರ ಕೃತ್ಯಗಳು 4:8

ಆಗ ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ--ಜನರ ಅಧಿಕಾರಿಗಳೇ, ಇಸ್ರಾಯೇಲಿನ ಹಿರಿಯರೇ,

ಅಪೋಸ್ತಲರ ಕೃತ್ಯಗಳು 4:19

ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆ--ದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ.

ರೋಮಾಪುರದವರಿಗೆ 9:7

ಇಲ್ಲವೆ ಅವರು ಅಬ್ರಹಾಮನ ಸಂತತಿಯವರಾದ ಕಾರಣ ಅವರೆ ಲ್ಲರೂ ಮಕ್ಕಳಲ್ಲ; ಆದರೆ--ಇಸಾಕನಲ್ಲಿಯೇ ನಿನ್ನ ಸಂತ ತಿಯು ಕರೆಯಲ್ಪಡುವದು ಎಂಬದೇ.

ಗಲಾತ್ಯದವರಿಗೆ 4:22

ಯಾಕಂದರೆ ದಾಸಿಯಿಂದ ಒಬ್ಬನು, ಸ್ವತಂತ್ರಳಿಂದ ಒಬ್ಬನು ಹೀಗೆ ಅಬ್ರಹಾಮನಿಗೆ ಇಬ್ಬರು ಪುತ್ರರಿದ್ದರೆಂದು ಬರೆಯಲ್ಪಟ್ಟಿದೆ.

1 ಪೇತ್ರ 3:14

ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ಸಂತೋಷವುಳ್ಳವರು. ಅವರ ಬೆದರಿಸುವಿಕೆಗೆ ಹೆದರಬೇಡಿರಿ ಮತ್ತು ಕಳವಳ ಪಡಬೇಡಿರಿ.

Interlinear

Choose Theme