Home Bibles 1 ಪೇತ್ರ 4:8 · ಕನ್ನಡ ಬೈಬಲ್
1 ಪೇತ್ರ 4:8 · ಕನ್ನಡ ಬೈಬಲ್

ಎಲ್ಲವುಗಳಿಗೆ ಮಿಗಿಲಾಗಿ ನಿಮ್ಮ ನಿಮ್ಮೊಳಗೆ ಯಥಾರ್ಥವಾದ ಪ್ರೀತಿಯಿರಲಿ; ಯಾಕಂದರೆ ಪ್ರೀತಿಯು ಎಷ್ಟೋ ಪಾಪಗಳನ್ನು ಮುಚ್ಚುತ್ತದೆ.

Cross references

ಸಾಮೇತಿಗಳು 10:12

ದ್ವೇಷವು ಜಗಳಗಳನ್ನು ಎಬ್ಬಿಸುತ್ತದೆ; ಪ್ರೀತಿಯು ಎಲ್ಲಾ ಪಾಪಗಳನ್ನು ಮುಚ್ಚು ತ್ತದೆ.

ಸಾಮೇತಿಗಳು 12:16

ಅವಿವೇ ಕಿಯ ಕೋಪವು ತಟ್ಟನೆ ರಟ್ಟಾಗುವದು; ಜಾಣನು ಅವಮಾನವನ್ನು ಮರೆಮಾಡುತ್ತಾನೆ.

ಸಾಮೇತಿಗಳು 17:9

ದೋಷ ವನ್ನು ಮುಚ್ಚುವವನು ಪ್ರೀತಿಯನ್ನು ಹುಡುಕುತ್ತಾನೆ, ಸಂಗತಿಯನ್ನು ಎತ್ತಿ ಆಡುವವನು ಸ್ನೇಹಿತರನ್ನು ಪ್ರತ್ಯೇ ಕಿಸುತ್ತಾನೆ.

ಸಾಮೇತಿಗಳು 18:13

ಸಂಗತಿಯನ್ನು ಕೇಳುವದಕ್ಕೆ ಮುಂಚೆ ಉತ್ತರ ಕೊಡುವವರಿಗೆ ಅದು ಅವನಿಗೆ ಮೂರ್ಖತನವೂ ಅವಮಾನವೂ ಆಗಿದೆ.

1 ಕೊರಿಂಥದವರಿಗೆ 13:1

ನಾನು ಮನುಷ್ಯರ ಮತ್ತು ದೂತರ ಭಾಷೆಗಳನ್ನು ಆಡುವವನಾದರೂ ಪ್ರೀತಿ ಯಿಲ್ಲದವನಾಗಿದ್ದರೆ ನಾದಕೊಡುವ ಕಂಚೂ ಗಣಗಣಿ ಸುವ ತಾಳವೂ ಆಗಿದ್ದೇನೆ.

ಕೊಲೊಸ್ಸೆಯವರಿಗೆ 3:14

ಇದೆಲ್ಲಾದರ ಮೇಲೆ ಪ್ರೀತಿಯನ್ನು ಧರಿಸಿಕೊಳ್ಳಿರಿ; ಅದು ಸಂಪೂರ್ಣ ಮಾಡುವ ಬಂಧವಾಗಿದೆ.

1 ತೆಸಲೋನಿಕದವರಿಗೆ 3:12

ನಮ್ಮ ಪ್ರಿತಿಯು ನಿಮ್ಮ ಕಡೆಗೆ ಹೇಗೋ ಹಾಗೆಯೇ ನಿಮ್ಮ ಪ್ರೀತಿಯೂ ಒಬ್ಬರಿಂದೊಬ್ಬರಿಗೂ ಎಲ್ಲರ ಮೇಲೆಯೂ ಅಭಿವೃದ್ಧಿ ಹೊಂದಿ ಅತ್ಯಧಿಕವಾಗುವಂತೆ ಕರ್ತನು ನಿಮಗೆ ಅನುಗ್ರಹಿಸಲಿ.ನಮ್ಮ ಕರ್ತನಾದ ಯೇಸು ಕ್ರಿಸ್ತನು ತನ್ನ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ ನಿಮ್ಮ ಹೃದಯಗಳನ್ನು ದೃಢಪಡಿಸಿ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿ ಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.

1 ತೆಸಲೋನಿಕದವರಿಗೆ 4:9

ಆದರೆ ಸಹೋದರ ಪ್ರೀತಿಯ ವಿಷಯದಲ್ಲಿ ನಿಮಗೆ ಬರೆಯುವದು ಅವಶ್ಯವಿಲ್ಲ; ಒಬ್ಬರನ್ನೊಬ್ಬರು ಪ್ರೀತಿಸ ಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ.

2 ತೆಸಲೋನಿಕದವರಿಗೆ 1:3

ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಪರಸ್ಪರವಾದ ಪ್ರೀತಿಯು ನಿಮ್ಮೆಲ್ಲ ರಲ್ಲಿಯೂ ಹೆಚ್ಚುತ್ತಾ ಬರುತ್ತದೆ.

1 ತಿಮೋಥೆಯ 1:5

ಶುದ್ಧ ಹೃದಯದಿಂದಲೂ ಒಳ್ಳೇಮನಸ್ಸಾಕ್ಷಿ ಯಿಂದಲೂ ನಿಷ್ಕಪಟವಾದ ನಂಬಿಕೆಯಿಂದಲೂ ಉಂಟಾಗುವ ಪ್ರೀತಿಯೇ ಆಜ್ಞೆಯ ಅಂತ್ಯವಾಗಿದೆ.

ಹೆಬ್ರಿಯರಿಗೆ 13:1

ಸಹೋದರ ಪ್ರೀತಿಯು ನೆಲೆಯಾಗಿರಲಿ.

ಯಾಕೋಬ 5:12

ಮುಖ್ಯವಾಗಿ ನನ್ನ ಸಹೋದರರೇ, ಆಣೆ ಇಡಲೇ ಬೇಡಿರಿ; ಆಕಾಶದ ಮೇಲಾಗಲಿ ಭೂಮಿಯ ಮೇಲಾಗಲಿ ಇನ್ನಾವದರ ಮೇಲಾಗಲಿ ಆಣೆ ಇಡ ಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವದಿಲ್ಲ.

ಯಾಕೋಬ 5:20

ಅವನು ಪಾಪಮಾಡಿದವ ನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ ಅವನ ಆತ್ಮವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳುಕೊಳ್ಳಲಿ.

1 ಪೇತ್ರ 1:22

ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.

2 ಪೇತ್ರ 1:6

ಜ್ಞಾನಕ್ಕೆ ದಮೆಯನ್ನೂ ದಮೆಗೆ ತಾಳ್ಮೆಯನ್ನೂ ತಾಳ್ಮೆಗೆ ಭಕ್ತಿಯನ್ನೂ

3 ಯೋಹಾನ 1:2

ಪ್ರಿಯನೇ, ನಿನ್ನ ಆತ್ಮವು ಅಭಿವೃದಿ ಹೊಂದಿರುವ ಪ್ರಕಾರವೇ ಎಲ್ಲಾ ವಿಷಯಗಳಿಗಿಂತ ನೀನು ಸ್ವಸ್ಥನಾಗಿದ್ದು ಕ್ಷೇಮಹೊಂದಿ ಅಭಿವೃದ್ಧಿಯಾಗ ಬೇಕೆಂದು ನಾನು ಅಪೇಕ್ಷಿಸುತ್ತೇನೆ.

Interlinear

Choose Theme